Homeಮುಖಪುಟಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಪುನರ್ ರಚನೆ: ಸಚಿನ್ ಪೈಲಟ್, ಶಶಿ ತರೂರ್ ಗೆ...

ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಪುನರ್ ರಚನೆ: ಸಚಿನ್ ಪೈಲಟ್, ಶಶಿ ತರೂರ್ ಗೆ ಸ್ಥಾನ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನ ನೂತನ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪಟ್ಟಿಯಲ್ಲಿ ಸಚಿನ್ ಪೈಲಟ್, ಶಶಿ ತರೂರ್, ಪಂಜಾಬ್ ಮಾಜಿ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಆನಂದ್ ಶರ್ಮಾ ಅವರಿಗೂ ಸ್ಥಾನ ಸಿಕ್ಕಿದೆ.

ಸಿಡಬ್ಲ್ಯುಸಿ  ಸದಸ್ಯರ ಪಟ್ಟಿಯಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಡಾ. ಮನಮೋಹನ್ ಸಿಂಗ್, ಎಕೆ ಆಂಟನಿ, ದಿಗ್ವಿಜಯ್ ಸಿಂಗ್, ಅಂಬಿಕಾ ಸೋನಿ, ರಾಹುಲ್ ಗಾಂಧಿ,  ಸಚಿನ್ ಪೈಲಟ್, ಶಶಿ ತರೂರ್, ನಾಸೀರ್ ಹುಸೇನ್, ಅಲ್ಕಾ ಲಂಬಾ, ಸುಪ್ರಿಯಾ, ಪ್ರಣಿತಿ ಶಿಂಧೆ, ಪವನ್ ಖೇರಾ, ಗಣೇಶ್ ಗೋಡಿಯಾಲ್, ಯಶೋಮತಿ ಠಾಕೂರ್ ಅವರು ಸ್ಥಾನ ಪಡೆದಿದ್ದಾರೆ.

ಸಮಿತಿಯು 39 ಸಾಮಾನ್ಯ ಸದಸ್ಯರನ್ನು ಒಳಗೊಂಡಿದ್ದು,, ಇದರಲ್ಲಿ ಕೆಲವು ರಾಜ್ಯದ ಉಸ್ತುವಾರಿಗಳು ಮತ್ತು 13 ವಿಶೇಷ ಆಹ್ವಾನಿತರು  ಸೇರಿದ್ದಾರೆ. ಈ ಪಟ್ಟಿಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷರು, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಮತ್ತು ಸೇವಾದಳದ ಅಧ್ಯಕ್ಷರು ಸೇರಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾದ  ಇಂದು ಕಾಂಗ್ರೆಸ್ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿದೆ.

ಈ ವರ್ಷಾಂತ್ಯದಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆ ಕೂಡ ನಡೆಯಲಿದ್ದು, ಸಚಿನ್ ಪೈಲಟ್‌ಗೆ  ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನವನ್ನು ನೀಡಲಾಗಿದೆ.

ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಕಾಂಗ್ರೆಸ್‌ನ 85ನೇ ಸರ್ವಸದಸ್ಯ ಅಧಿವೇಶನದ ಅಂಗವಾಗಿ ಫೆಬ್ರವರಿಯಲ್ಲಿ ನಡೆದ ಕಾಂಗ್ರೆಸ್‌ ಚಾಲನಾ ಸಮಿತಿ ಸಭೆಯು ಸಿಡಬ್ಲ್ಯುಸಿಗೆ ಸದಸ್ಯರ ನೇಮಕಕ್ಕೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮನಿರ್ದೇಶನ ಮಾಡಲು ಅಧಿಕಾರವನ್ನು ನೀಡಿತ್ತು.

ಎಲ್ಲಾ ಸಿಡಬ್ಲ್ಯೂಸಿ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಸಮಿತಿ ಫೆಬ್ರವರಿಯಲ್ಲಿ ಹೇಳಿತ್ತು.

ಇದನ್ನು ಓದಿ: ಸೂಫಿ ಸಂತರಿಗೆ ಮರುನಾಮಕರಣ ಮಾಡಿದ ಸಂಘಪರಿವಾರ: ಮುಸ್ಲಿಮರಿಂದ ಉಪವಾಸ ಸತ್ಯಾಗ್ರಹ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...