Homeಮುಖಪುಟಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ಇನ್ನೆರಡು ಮೃತದೇಹಗಳು ಪತ್ತೆ, ಶಾಸಕರ ಮನೆಗಳ ಮೇಲೆ ದಾಳಿ

- Advertisement -
- Advertisement -

ಎನ್‌ಡಿಎ ಮಿತ್ರ ಪಕ್ಷವಾದ ಮೇಘಾಲಯ ಸಿಎಂ ಕಾನ್ರಾಡ್ ಕೆ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡದ್ದ ಬೆಂಬಲವನ್ನು ಭಾನುವಾರ (ನ.18) ಹಿಂತೆಗೆದುಕೊಂಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ಮುಖ್ಯಮಂತ್ರಿ
ಎನ್. ಬಿರೇನ್ ಸಿಂಗ್ ‘ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಎನ್‌ಪಿಪಿ ಹೇಳಿಕೊಂಡಿದೆ.

“ಕಳೆದ ಕೆಲ ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಭಯದಿಂದ ಬದುಕುತ್ತಿದ್ದು, ಅತಿಯಾದ ಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಬಿಜೆಪಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ” ಎಂದು ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಕೆ ಸಂಗ್ಮಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಒಟ್ಟು 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 7 ಮಂದಿ ಎನ್‌ಪಿಪಿ ಶಾಸಕರಿದ್ಧಾರೆ. ಇವರು ಬೆಂಬಲ ವಾಪಸ್ ಪಡೆದರೂ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ, ನಾಗಾ ಪೀಪಲ್ಸ್ ಫ್ರಂಟ್‌ (ಎನ್‌ಪಿಎಫ್‌) ನ ಐವರು ಮತ್ತು ಜನತಾದಳ ಯುನೈಟೆಡ್ (ಜೆಡಿಯು)ನ 6 ಮಂದಿ ಶಾಸಕ ಬೆಂಬಲದೊಂದಿಗೆ ಬಿಜೆಪಿ 32 ಸ್ಥಾನಗಳ ಸ್ಪಷ್ಟ ಬಹುಮತ ಹೊಂದಿದೆ.

ಮೂರು ಬಾರಿ ಸಿಎಂ ಆಗಿರುವ ಕಾಂಗ್ರೆಸ್‌ನ ಒಕ್ರಾಮ್ ಇಬೋಬಿ ಸಿಂಗ್ ಅವರು ಮುಖ್ಯಮಂತ್ರಿ ಬಿರೇನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಧಾನಿ ಮೋದಿ ತಕ್ಷಣ ಮಧ್ಯಪ್ರವೇಶಿಸದಿದ್ದರೆ, ಇತರ ಎನ್‌ಡಿಎಯೇತರ ಶಾಸಕರೊಂದಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದು ಹಿಂಸಾಚಾರ ಮಿತಿ ಮೀರಿದೆ ಎಂಬುವುದನ್ನು ಸೂಚಿಸುತ್ತದೆ. ಸಿಎಂ ಬೀರೇನ್ ಸಿಂಗ್ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ತಕ್ಷಣ ಪ್ರಧಾನಿಯೊಂದಿಗೆ ಸಮಯವಕಾಶ ಕೇಳಬೇಕು. ಪ್ರಧಾನಿ ವಿದೇಶದಿಂದ ಬಂದ ತಕ್ಷಣ ಭೇಟಿಯಾಗಲು ನಾವು ಸಿದ್ದರಿದ್ದೇವೆ” ಎಂದು ಒಕ್ರಾಮ್ ಇಬೋಬಿ ಹೇಳಿದ್ದಾರೆ.

ಇನ್ನೆರಡು ಮೃತದೇಹಗಳು ಪತ್ತೆ

ಇತ್ತೀಚಿನ ವರದಿಯ ಪ್ರಕಾರ, ಮಣಿಪುರದಲ್ಲಿ ಭಾನುವಾರ (ನ.17) ಇನ್ನೆರಡು ಮೃದೇಹಗಳು ಪತ್ತೆಯಾಗಿವೆ. ಗೋಣಿ ಚೀಲದಲ್ಲಿ ಕಟ್ಟಿದ್ದ ವಿವಸ್ತ್ರ ಮಹಿಳೆ ಮತ್ತು ಹೆಣ್ಣು ಮಗುವಿನ ಶವ ದಕ್ಷಿಣ ಅಸ್ಸಾಂನ ಬರಾಕ್ ನದಿಯಲ್ಲಿ ದೊರೆತಿದೆ.

ನವೆಂಬರ್ 11ರಿಂದ ಮೈತೇಯಿ ಸಮುದಾಯಕ್ಕೆ ಸೇರಿದ 6 ಮಂದಿಯನ್ನು ಕುಕಿ ಬಂಡುಕೋರರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಬಳಿಕ ಶುಕ್ರವಾರ (ನ.15) ಮೂವರು ಮಹಿಳೆಯರ ಶವ ಪತ್ತೆಯಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇನ್ನೂ ಕೆಲ ಮಾಧ್ಯಮಗಳು ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ದೊರೆತಿವೆ ಎಂದಿತ್ತು. ಆದರೆ, ಶನಿವಾರ ಬೆಳಿಗ್ಗೆ 6 ಮಂದಿಯ ಶವಗಳೂ ಪತ್ತೆಯಾಗಿರುವುದಾಗಿ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ನಿನ್ನೆ (ನ.17) ಮತ್ತೆರಡು ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಶಾಸಕರ ಮನೆ ಮೇಲೆ ದಾಳಿ

ಹಿಂಸಾಚಾರದ ನಡುವೆ ಇಂಫಾಲ್ ಕಣಿವೆಯಲ್ಲಿ ಒಂಬತ್ತು ಮಂದಿ ಬಿಜೆಪಿ ಶಾಸಕರು ಸೇರಿದಂತೆ 13 ಶಾಸಕರ ಮನೆಗಳ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದೆ ಎಂದು ಭಾನುವಾರ (ನ.18) ವರದಿಯಾಗಿದೆ. ಪಶ್ಚಿಮ ಇಂಫಾಲದಲ್ಲಿರುವ ಬಿಜೆಪಿ ಶಾಸಕ ರಬೀಂದ್ರೊ ಅವರನ್ನು ಭೇಟಿ ಮಾಡಲು ಬಯಸಿದ ಪ್ರತಿಭಟನಾಕಾರರು, ಅವರ ನಿವಾಸವನ್ನು ಭಾನುವಾರ ಸಂಜೆ ಧ್ವಂಸಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...