Homeಕರ್ನಾಟಕರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ತಾಲೂಕಿನ 13 ಹಳ್ಳಿಗಳ ಭೂ ಸ್ವಾಧೀನವನ್ನು ಸಂಪೂರ್ಣವಾಗಿ ಕೈ ಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ರೈತರು, ಹೋರಾಟಗಾರರ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಿದೆ ಎಂದರು.

ಜಮೀನು ಕೊಡುವ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ಪರಿಹಾರವನ್ನು ಸರ್ಕಾರ ನೀಡಲಿದೆ. ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದು ಹೇಳಿದರು.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ ಎಂದರು.

1,777 ಎಕರೆ ಜಮೀನು ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪಾರ್ಕ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶವಾಗಿತ್ತು. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು ಎಂದು ತಿಳಿಸಿದರು.

ರಾಜ್ಯದಲ್ಲಿ ಭೂ ಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ದೇವನಹಳ್ಳಿಯದ್ದು ಫಲವತ್ತಾದ, ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದರು ಎಂದರು.

ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ, ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಸಿಎಂ ಹೇಳಿದರು.

ಸಚಿವರಾದ ಎಂ.ಬಿ ಪಾಟೀಲ್, ಕೆ.ಎಚ್ ಮುನಿಯಪ್ಪ, ಹೆಚ್.ಕೆ ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಸಿಎಂ ಪತ್ರಿಕಾಗೋಷ್ಠಿ ವೇಳೆ ಉಪಸ್ಥಿತರಿದ್ದರು.

BREAKING NEWS: ಚನ್ನರಾಯಪಟ್ಟಣ ರೈತರಿಗೆ ಐತಿಹಾಸಿಕ ಗೆಲುವು; ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...