ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ತಾಲೂಕಿನ 13 ಹಳ್ಳಿಗಳ ಭೂ ಸ್ವಾಧೀನವನ್ನು ಸಂಪೂರ್ಣವಾಗಿ ಕೈ ಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ರೈತರು, ಹೋರಾಟಗಾರರ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಿದೆ … Continue reading ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ