Homeಮುಖಪುಟಮುನವ್ವರ್ ಫಾರೂಕಿ ಹತ್ಯೆಗೆ ಸಂಚು: ಇಬ್ಬರು ಗ್ಯಾಂಗ್‌ಸ್ಟರ್‌ಗಳ ಬಂಧನ

ಮುನವ್ವರ್ ಫಾರೂಕಿ ಹತ್ಯೆಗೆ ಸಂಚು: ಇಬ್ಬರು ಗ್ಯಾಂಗ್‌ಸ್ಟರ್‌ಗಳ ಬಂಧನ

- Advertisement -
- Advertisement -

ಸ್ಟಾಂಡ್‌-ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ಕೊಲೆಗೆ ಸಂಚು ರೂಪಿಸಿದ್ದ ಗೋಲ್ಡಿ ಬ್ರಾರ್ ಗುಂಪಿನ ಇಬ್ಬರು ಸದಸ್ಯರನ್ನು ಗುರುವಾರ (ಅ.2) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿಯ ಜೈತ್ಪುರ-ಕಾಳಿಂದಿ ಕುಂಜ್ ರಸ್ತೆಯಲ್ಲಿ ನಡೆದ ಗುಂಡಿನ ಚಕಮಕಿಯ ಬಳಿಕ, ಹರಿಯಾಣದ ಪಾಣಿಪತ್ ನಿವಾಸಿ ರಾಹುಲ್ ಮತ್ತು ಭಿವಾನಿಯ ಸಾಹಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಅವರ ಕಾಲುಗಳಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದಾರೆ. ನಂತರ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸಂಚರಿಸುತ್ತಿದ್ದ ಬೈಕ್ ಮತ್ತು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.

ಅಧಿಕಾರಿಗಳ ಪ್ರಕಾರ, ಇಬ್ಬರೂ ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ತಲೆಮರೆಸಿಕೊಂಡಿರುವ ಕ್ರಿಮಿನಲ್ ವೀರೇಂದ್ರ ಚರಣ್ ಜೊತೆ ಸಂಬಂಧ ಹೊಂದಿರುವ ವಿದೇಶಿ ಮೂಲದ ಗ್ಯಾಂಗ್‌ಸ್ಟರ್ ರೋಹಿತ್ ಗೋದಾರನಿಂದ ಸೂಚನೆಗಳನ್ನು ಪಡೆಯುತ್ತಿದ್ದರು.

ದೆಹಲಿ-ಎನ್‌ಸಿಆರ್‌ನಲ್ಲಿ ಉದ್ದೇಶಿತ ಹತ್ಯೆಗಳನ್ನು ನಡೆಸಲು ಬಂಧಿತ ಇಬ್ಬರನ್ನು ಸಜ್ಜುಗೊಳಿಸಲಾಗಿತ್ತು. ಫಾರೂಕಿಯ ಚಲನವಲನಗಳನ್ನು ಪತ್ತೆಹಚ್ಚಲು ಮುಂಬೈ ಮತ್ತು ಬೆಂಗಳೂರಿನಲ್ಲಿ ಕಣ್ಣಿಡಲಾಗಿತ್ತು.

“ಸೆಲೆಬ್ರಿಟಿ ವಲಯದಲ್ಲಿ ತಮ್ಮ ಪ್ರಭಾವವನ್ನು ವಿಸ್ತರಿಸಲು ಬಂಧಿತರ ಗ್ಯಾಂಗ್ ಪ್ರಯತ್ನಿಸುತ್ತಿದೆ. ಮುನವ್ವರ್ ಫಾರೂಕಿ ಅವರ ದೀರ್ಘಕಾಲದ ಗುರಿಗಳಲ್ಲಿ ಒಬ್ಬರು. ನಟಿ ದಿಶಾ ಪಟಾನಿ ಅವರ ಬರೇಲಿ ನಿವಾಸದ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ಸೇರಿದಂತೆ ಇತರ ಸೆಲೆಬ್ರಿಟಿಗಳ ಮೇಲೆ ದಾಳಿ ಮಾಡಲು ಈ ಗ್ಯಾಂಗ್ ಈ ಹಿಂದೆ ಸಂಚು ರೂಪಿಸಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2024ರ ಡಿಸೆಂಬರ್‌ನಲ್ಲಿ ಹರಿಯಾಣದ ಯಮುನಾನಗರದಲ್ಲಿ ನಡೆದ ಸಂಚಲನ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಇಂದು ಗುಂಡೇಟಿನಿಂದ ಗಾಯಗೊಂಡಿರುವ ರಾಹುಲ್ ಬೇಕಾಗಿದ್ದ. ಪ್ರಾಥಮಿಕ ವಿಚಾರಣೆಯಲ್ಲಿ ಆ ಕೊಲೆ ಅಪರಾಧದಲ್ಲಿ ಭಾಗಿಯಾಗಿರುವ ಗುರುತಿಸಲಾಗದ ದಾಳಿಕೋರಲ್ಲಿ ಆತನೂ ಒಬ್ಬನೆಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ರಾಜಸ್ಥಾನದ ಬಿಕನೇರ್‌ನಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು, ಅಲ್ಲಿಯೂ ಈತನನ್ನು ಇದೇ ರೀತಿಯ ಅಪಾಯಕಾರಿ ಕೆಲಸಕ್ಕೆ ಕಳುಹಿಸಲಾಗಿತ್ತು.

ಸಾಹಿಲ್ ವಿರುದ್ಧ ಭಿವಾನಿ ಮತ್ತು ಸಿರ್ಸಾ ನ್ಯಾಯಾಲಯಗಳಲ್ಲಿ ಹಲವಾರು ಆರ್ಥಿಕ ದುರುಪಯೋಗ ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಪ್ರಮುಖ ಸಾಮಾಜಿಕ ಮಾಧ್ಯಮ ಪ್ರಭಾವಿಗಳನ್ನು ಗುರಿಯಾಗಿಸಿಕೊಳ್ಳುವ ಅವರ ಹಿಂದಿನ ಯೋಜನೆ ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳೊಂದಿಗಿನ ಸಂವಹನ ಅಂತರದಿಂದಾಗಿ ಕಾರ್ಯರೂಪಕ್ಕೆ ಬರದ ಕಾರಣ, ಇಬ್ಬರನ್ನೂ ಇತ್ತೀಚೆಗೆ ದೆಹಲಿಗೆ ಕಳುಹಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗ್ಯಾಂಗ್‌ನ ಇತರ ಸದಸ್ಯರು ಮತ್ತು ಅವರ ಗುರಿಗಳನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

2024ರಲ್ಲಿ ‘ಬಿಗ್ ಬಾಸ್’ ರಿಯಾಲಿಟಿ ಶೋ ಗೆದ್ದ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 14 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ಮುನವ್ವರ್ ಫಾರೂಕಿ ಮೇಲೆ ಹಲವಾರು ಗ್ಯಾಂಗ್‌ಗಳು ನಿಗಾ ಇಟ್ಟಿವೆ ಎಂದು ಪೊಲೀಸರು ವಿವರಿಸಿದ್ದಾರೆ.

2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...