Homeಮುಖಪುಟರಾಜಸ್ಥಾನ: ಶಿವರಾತ್ರಿ ಮೆರವಣಿಗೆ ವೇಳೆ ಪೊಲೀಸ್‌ ಪೇದೆಯ ಹತ್ಯೆ

ರಾಜಸ್ಥಾನ: ಶಿವರಾತ್ರಿ ಮೆರವಣಿಗೆ ವೇಳೆ ಪೊಲೀಸ್‌ ಪೇದೆಯ ಹತ್ಯೆ

- Advertisement -
- Advertisement -

ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಶಿವರಾತ್ರಿ ಮೆರವಣಿಗೆ ವೇಳೆ ಘರ್ಷಣೆ ನಡೆದಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಸಿರೋಹಿ ಜಿಲ್ಲೆಯ ಸ್ವರೂಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಲೋಟಾನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಪೇದೆಯನ್ನು ಕೆಲವು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಮೃತ ಪೊಲೀಸ್‌ ಪೇದೆಯನ್ನು ನಾಗೌರ್ ಜಿಲ್ಲೆಯ ಗೋಟಾನ್ ನಿವಾಸಿ ನಿರಂಜನ್ ಸಿಂಗ್ ಎಂದು ಗುರುತಿಸಲಾಗಿದೆ.

ಘಟನೆಯ ಕುರಿತು ಮಾಹಿತಿಯನ್ನು ನೀಡಿದ ಪೊಲೀಸ್‌ ಅಧಿಕಾರಿ ಪಿಂಡ್ವಾರಾ ಜೇತು ಸಿಂಗ್, ಸಿರೋಹಿ ಜಿಲ್ಲೆಯ ಸ್ವರೂಪಗಂಜ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಕಾನ್‌ಸ್ಟೆಬಲ್ ಸಿಂಗ್, ಗ್ರಾಮದ ಸರ್ತಾನೇಶ್ವರ ಮಹಾದೇವ ದೇವಸ್ಥಾನದಲ್ಲಿ ಆಯೋಜಿಸಲಾದ ಮಹಾಶಿವರಾತ್ರಿ ಉತ್ಸವದ ಜಾತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಡರಾತ್ರಿಯಲ್ಲಿ ಆದಿವಾಸಿಗಳ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದವು. ಕಾನ್ ಸ್ಟೇಬಲ್ ನಿರಂಜನ್ ಸಿಂಗ್ ಎರಡೂ ಕಡೆಯವರನ್ನು ಸಮಾಧಾನ ಪಡಿಸಲು ಯತ್ನಿಸುತ್ತಿದ್ದರು. ಇದೇ ವೇಳೆ ಕೆಲವು ದುಷ್ಕರ್ಮಿಗಳು ಚಾಕುವಿನಿಂದ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು  ಹೇಳಿದ್ದಾರೆ.

ಕಾನ್ಸ್‌ಟೇಬಲ್‌ ಹತ್ಯೆಯ ಮಾಹಿತಿ ತಿಳಿದ ತಕ್ಷಣ ಎಸ್‌ಪಿ ಅನಿಲ್‌ ಕುಮಾರ್‌, ಪಿಂಡ್‌ವಾರಾ ಡಿವೈಎಸ್‌ಪಿ ಜೇತುಸಿಂಗ್‌ ಕರ್ನೋಟ್‌, ಪಿಂಡ್‌ವಾರಾ ಸಿಐ ಹಮೀರ್‌ಸಿಂಗ್‌ ಭಾಟಿ, ರೋಹಿಡಾ ಪೊಲೀಸ್‌ ಠಾಣಾಧಿಕಾರಿ ಜಿತೇಂದ್ರ ಸಿಂಗ್‌ ದೇವೊರಾ ಮತ್ತು ಸ್ವರೂಪಗಂಜ್‌ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮೃತದೇಹವನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿ ಪ್ರಕರಣದ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಘಟನೆಯ ನಂತರ ಲೋಟನಾ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಯನ್ನು ಬೀಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್‌, ನಿರಂಜನ್ ಹಂತಕರನ್ನು ಕೂಡಲೇ ಬಂಧಿಸಬೇಕು ಮತ್ತು ಮೃತನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...