Homeಮುಖಪುಟಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

- Advertisement -
- Advertisement -

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಮಾರ್ಚ್ 7 ರಂದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಪಂಜಾಬ್ ನಾಯಕರನ್ನು ಈ ಪ್ರಕ್ರಿಯೆಯ ವಿರುದ್ಧ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಕರೆ ನೀಡಿದ್ದರು. ಕ್ಷೇತ್ರ ಪುನರ್‌ವಿಂಗಡನೆ

ಡಿಎಂಕೆಯ ಮುಖ್ಯಸ್ಥರೂ ಆಗಿರುವ ಸ್ಟಾಲಿನ್ ಅವರು ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿರುವ ಸಮಿತಿಯ ಮೊದಲ ಸಭೆಯಲ್ಲಿ ಏಳು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸೇರುವಂತೆ ಒತ್ತಾಯಿಸಿದ್ದಾರೆ. ಶುಕ್ರವಾರದಂದು ತಮಿಳುನಾಡಿನ ಐಟಿ ಮತ್ತು ಡಿಜಿಟಲ್ ಸೇವೆಗಳ ಸಚಿವ ಪಳನಿವೇಲ್ ತ್ಯಾಗರಾಜನ್ ಮತ್ತು ದಕ್ಷಿಣ ಚೆನ್ನೈ ಸಂಸದ ತಮಿಝಾಚಿ ತಂಗಪಾಂಡ್ಯನ್ ಅವರು ತಮ್ಮನ್ನು ಭೇಟಿ ಮಾಡಿರುವುದಾಗಿ ಪಿಣರಾಯಿ ವಿಜಯನ್ ಹೇಳಿದ್ದು, ಅವರು ಸಮಿತಿ ಸಭೆಗೆ ತಮ್ಮನ್ನು ಆಹ್ವಾನಿಸಿದ್ದಾಗಿ ಹೇಳಿದ್ದಾರೆ.

“ಈ ಪ್ರಮುಖ ವಿಷಯದ ಬಗ್ಗೆ ಒಗ್ಗಟ್ಟಿನಿಂದ ನಿಲ್ಲಿರಿ” ಎಂದು ಸಿಎಂ ಪಿಣರಾಯಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಕರೆ ನೀಡಿದ್ದಾರೆ. ಕ್ಷೇತ್ರ ಪುನರ್‌ವಿಂಗಡನೆ

“ರಾಜ್ಯಗಳೊಂದಿಗೆ ಒಮ್ಮತಕ್ಕೆ ಬಂದ ನಂತರ ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡನೆ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸಿದ್ಧರಾಗಿರಬೇಕು. ಯಾವುದೇ ರಾಜ್ಯದ ಕ್ಷೇತ್ರಗಳ ಅನುಪಾತದ ಪಾಲನ್ನು ಕಡಿಮೆ ಮಾಡದೆ ಇದನ್ನು ಕೈಗೊಳ್ಳಬೇಕು.” ಎಂದು ಸಿಎಂ ಪಿಣರಾಯಿ ಅವರು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ಕೇಂದ್ರ ಸರ್ಕಾರಗಳು ಪರಿಚಯಿಸಿದ ಕುಟುಂಬ ಯೋಜನಾ ನೀತಿಗಳಿಗೆ ಅನುಗುಣವಾಗಿ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳಿಗೆ ದಂಡ ವಿಧಿಸಬಾರದು ಎಂದು ಅವರು ಹೇಳಿದ್ದಾರೆ. “ಕೇಂದ್ರ ಸರ್ಕಾರದ ಈ ನಡೆಯು ಇಂತಹ ಕ್ರಮವುಗಳಲ್ಲಿ ವಿಫಲವಾದ ರಾಜ್ಯಗಳಿಗೆ ಬಹುಮಾನ ನೀಡಿದಂತೆ” ಎಂದು ಅವರು ಹೇಳಿದ್ದಾರೆ.

ದಕ್ಷಿಣ ರಾಜ್ಯಗಳು ಅನುಪಾತದ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಪಾಲನ್ನು ಪಡೆಯುತ್ತವೆ ಎಂಬ ಕೇಂದ್ರ ಸರ್ಕಾರದ ವಾದಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಪಿಣರಾಯಿ ವಿಜಯನ್ ಇದೇ ವೇಳೆ ಹೇಳಿದ್ದಾರೆ.

ಜಂಟಿ ಕ್ರಿಯಾ ಸಮಿತಿಗೆ ಸೇರುವಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸ್ಟಾಲಿನ್ ಬರೆದ ಪತ್ರದಲ್ಲಿ, ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡನೆಯ ಪ್ರಕ್ರಿಯೆಯನ್ನು “ಫೆಡರಲಿಸಂ ಮೇಲಿನ ಸ್ಪಷ್ಟ ದಾಳಿ” ಎಂದು ಕರೆದಿದ್ದಾರೆ. “ಭಾರತದ ಪ್ರಜಾಪ್ರಭುತ್ವದ ಸಾರವು ಅದರ ಫೆಡರಲ್ ಸ್ವರೂಪದ ಮೇಲೆ ನಿಂತಿದೆ. ಒಂದು ರಾಷ್ಟ್ರವಾಗಿ ನಮ್ಮ ಪವಿತ್ರ ಏಕತೆಯನ್ನು ಗೌರವಿಸುತ್ತಲೆ ಪ್ರತಿಯೊಂದು ರಾಜ್ಯಕ್ಕೂ ಅದರ ಸರಿಯಾದ ಧ್ವನಿಯನ್ನು ಎತ್ತಿಹಿಡಿಯುವ ವ್ಯವಸ್ಥೆ ಇದಾಗಿದೆ” ಎಂದು ಅವರು ಹೇಳಿದ್ದಾರೆ.

ಗುರುವಾರದಂದು ಸ್ಟಾಲಿನ್ ಅವರು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಅಲ್ಲಿನ ವಿರೋಧ ಪಕ್ಷ ಭಾರತ ರಾಷ್ಟ್ರ ಸಮಿತಿ ನಾಯಕರನ್ನು ಸಮಿತಿ ಸಭೆಗೆ ಆಹ್ವಾನಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅವರು ಸಭೆಯಲ್ಲಿ ಭಾಗವಹಿಸಲು “ತಾತ್ವಿಕವಾಗಿ” ಒಪ್ಪಿಕೊಂಡಿದ್ದರೂ, ಪಕ್ಷದ ನಾಯಕತ್ವದಿಂದ ಅನುಮತಿ ಪಡೆಯುವುದಾಗಿ ಕಾಂಗ್ರೆಸ್‌ನ ರೆಡ್ಡಿ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಇದೇ ವೇಳೆ ಭಾರತ ರಾಷ್ಟ್ರ ಸಮಿತಿಯ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಜೊತೆಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಭೆಗೆ ಹಾಜರಾಗುವಂತೆ ಕೇಳಿಕೊಂಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...