Homeಕರ್ನಾಟಕಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು...

ಕುವೆಂಪು ಜನ್ಮದಿನದ ಅಂಗವಾಗಿ ಭದ್ರಾವತಿಯಲ್ಲಿ ಸಹಭೋಜನ, ಸಂವಿಧಾನದ ಮುನ್ನುಡಿಯ ಓದು…

- Advertisement -
- Advertisement -

ರಾಷ್ಟ್ರಕವಿ, ನಾಡಗೀತೆಯ ರಚನೆಗಾರ, ವಿಶ್ವಮಾನವ ಸಂದೇಶ ಸಾರಿದ ಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಒಂದು ದಿನ ಮೊದಲೇ ಇಂದು ಭದ್ರಾವತಿಯಲ್ಲಿ ನೂರಾರು ಜನ ಸೇರಿ ಸಂವಿಧಾನದ ಮುನ್ನಡಿಯ ಓದು ಮತ್ತು ಸಹಭೋಜನದ ಸಹಬಾಳ್ವೆಯ ಕಾರ್ಯಕ್ರಮ ನಡೆಸಿದರು.

ವಿವಿಧ ಸಮುದಾಯಗಳ ನೂರಾರು ಜನರು ಭದ್ರಾವತಿಯ ಒಂದೆಡೆ ಸೇರಿ ಸಾಮರಸ್ಯದ ಸಂಕೇತವಾಗಿ ಸಹಭೋಜನ ನಡೆಸಿದ್ದರಲ್ಲದೇ ಸಂವಿಧಾನದ ಮುನ್ನುಡಿಯನ್ನು ಸಾಮೂಹಿಕವಾಗಿ ಓದುವ ಮೂಲಕ ಭಾರತ ಸರ್ವಧರ್ಮಗಳ ದೇಶ ಎಂಬುದನ್ನು ಸಾರಿದರು.

ವಿಡಿಯೋ ನೋಡಿ

ಸಿಎಎ, ಎನ್‌ಆರ್‌ಸಿ ಸೇರಿದಂತೆ ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ನಮ್ಮಲ್ಲಿ ಆತಂಕ ಹುಟ್ಟಿಸಿವೆ. ಇಷ್ಟು ದಿನ ಅನ್ಯೋನವಾಗಿದ್ದ ನಮ್ಮಲ್ಲಿ ಬಿರುಕು ಮೂಡಿಸಲು ಮುಂದಾಗಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಾಡಬಹುದಾದ ರಚನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದೇವೆ. ನಮ್ಮ ಕುವೆಂಪುರವರ ಜನ್ಮದಿನದ ನೆಪದಲ್ಲಿ ಇದನ್ನು ಆರಂಭಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಆಯೋಜಕರು ತಿಳಿಸಿದ್ದಾರೆ.

ಭದ್ರಾವತಿಯ ಎಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಐಕ್ಯತೆ ಮೆರೆದಿದ್ದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಡಿ.ಸಿ ಮಾಯಣ್ಣ, ಚಿಂತಕರಾದ ಪ್ರೊ. ಎಂ ಚಂದ್ರಶೇಖರಯ್ಯ, ಛಲವಾದಿ ಮಹಾಸಭಾದ ಪೇಪರ್ ಸುರೇಶ್, ಸಂವಿಧಾನ ಉಳಿವಿಗಾಗಿ ಕರ್ನಾಟಕದ ರಾಜು.ಜಿ, ಮುಸ್ಲಿಂ ಸಮುದಾಯದ ಮುಖಂಡರಾದ ಮಾಜಿ ಉಪ ಮೇಯರ್ ಮಹಮ್ಮದ್ ಸನಾವುಲ್ಲಾ, ಮುರ್ತುಜ ಖಾನ್, ಖಾದರ್, ಜಾವಿದ್, ಜೆ.ಬಿ.ಟಿ ಬಾಬು, ಸಿ.ಕೆ ಅಸ್ಮತ್ ಪಾಷ, ಪೀರ್ ಷರೀಫ್, ಆಮ್ ಆದ್ಮಿ ಪಾರ್ಟಿಯ ರವಿಕುಮಾರ್, ಪರಮೇಶ್ವರಚಾರ್, ವೆಲ್ಪೇರ್ ಪಾರ್ಟಿ ಆಪ್ ಇಂಡಿಯಾದ ಅಬೂಲ್ ಖೈರ್, ಕ್ರೈಸ್ತ ಮುಖಂಡ ರಾದ ಸೆಲ್ವರಾಜ್, ಬಾಸ್ಕರ್, ಮಾಜಿ ನಗರಸಭಾ ಸದಸ್ಯರಾದ ಚನ್ನಪ್ಪ, ಟಿಪ್ಪು ಸುಲ್ತಾನ್, ಫ್ರಾನ್ಸಿಸ್, ವಕೀಲರಾದ ಶಿವಕುಮಾರ್, ಟಿಪ್ಪು ಸಮಿತಿಯ ಮೆಹಬೂಬ್, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಹಸ್ರ ಕಡೆ ಸಹಭೋಜನ ಹೆಸರಿನಲ್ಲಿ ಹಲವು ಪ್ರಜ್ಞಾವಂತರು ನೀಡಿದ್ದ ಕರೆಗೆ ಓಗೊಟ್ಟು ಕಾರ್ಯಕ್ರಮ ನಡೆದಿದೆ. ಸರ್ವಜನಾಂಗದ ಶಾಂತಿಯ ತೋಟ ನಮ್ಮ ದೇಶ. ಇದನ್ನು ಧರ್ಮದ ಆಧಾರಲ್ಲಿ ವಿಭಜಿಸಲು ಬಿಡುವುದಿಲ್ಲ ಎಂದು ಹಲವು ಜನರು ಡಿಸೆಂಬರ್‌ 29ರಂದು ರಾಜ್ಯದ ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಸಹಸ್ರ ಸಹಭೋಜನ ಕಾರ್ಯಕ್ರಮ ನಡೆಸಲಿದ್ದಾರೆ. ಭದ್ರಾವತಿಯಲ್ಲಿಯೂ ಸಹ ನಾಳೆ ಭಾನುವಾರ ಹತ್ತಕ್ಕೂ ಹೆಚ್ಚು ಕಡೆ ಕಾರ್ಯಕ್ರಮಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...