Homeಕರ್ನಾಟಕಬೆಂಗಳೂರು | ಜ.23ರಂದು ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್‍ಯಾಲಿ

ಬೆಂಗಳೂರು | ಜ.23ರಂದು ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿಆರ್‌ ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಹೊತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲು ರಾಜ್ಯದ ದಲಿತ ಸಂಘಟನೆಗಳು ಮುಂದಾಗಿವೆ.

ಇಂದು (ಜ.18) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಪ್ರಮುಖರು, “ಜನವರಿ 23ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್‌) ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ. 20 ರಿಂದ 30 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ದಲಿತ ಸಂಘಟನೆಗಳು ಪ್ರತಿಭಟನಾ ರ್‍ಯಾಲಿ ನಡೆಸಲು ಮುಂದಾಗಿವೆ. ಅವುಗಳು ಹೀಗಿವೆ.. (ಪ್ರೆಸ್‌ ನೋಟ್‌ನಲ್ಲಿದ್ದಂತೆ) 

  • ಗೃಹಮಂತ್ರಿ ಅಮಿತ್ ಶಾ ಸಂಪುಟದಿಂದ ವಜಾ ಆಗಬೇಕು ಮತ್ತು ಅವರು ಮಾಡಿದ ತಪ್ಪಿಗಾಗಿ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಡಿಯೂರಿ ಕ್ಷಮೆ ಕೇಳಬೇಕು. ಅಲ್ಲಿಯವರೆಗೂ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ.
  • ಅಹಿಂದ ಸಮುದಾಯಗಳ ಸರ್ವೋಚ್ಚ ನಾಯಕ ಹಾಗೂ ಜನಪ್ರಿಯ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಸ್ವಾಭಿಮಾನಿ ದಲಿತ ನಾಯಕ ಪ್ರಿಯಾಂಕ್ ಖರ್ಗೆ ಅವರನ್ನು ಸುಳ್ಳು ಮೊಕದ್ದಮೆಗಳಲ್ಲಿ ಸಿಲುಕಿಸಿ ತೇಜೋವಧೆ ಮಾಡಲು ಯತ್ನಿಸುತ್ತಿರುವ ಬಿಜೆಪಿ ತನ್ನ ಕುತಂತ್ರಗಳನ್ನು ಕೂಡಲೇ ನಿಲ್ಲಿಸಬೇಕು.
  • ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ಕಾಂತರಾಜು ಆಯೋಗದ ಜಾತಿ ಜನಗಣತಿ ವರದಿಯನ್ನು ಯಾವುದೇ ನೆಪ ಹೇಳದೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕಡ್ಡಾಯವಾಗಿ ಮಂಡಿಸಿ, ಅನುಷ್ಠಾನಗೊಳಿಸಬೇಕು.
  • ದಲಿತ ಸಮುದಾಯದ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಕೂಡಲೇ ದಲಿತ ಸಂಘಟನೆಗಳ ಸಭೆಯನ್ನು ಕರೆಯಬೇಕು.

2014ರಲ್ಲಿ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಇಡೀ ದೇಶವನ್ನು ಹಿಂಚಲನೆಗೆ ದೂಡಲಾಗಿದೆ. ಚಾತುರ್ವರ್ಣ ವೈದಿಕ ಸಿದ್ದಾಂತದ ಪ್ರತಿಪಾದಕರಾದ ಮೋದಿ ಮತ್ತು ಅಮಿತ್‌ ಶಾ ಸಾಂವಿಧಾನಿಕವಾಗಿ ಮತ್ತು ಪ್ರಜಾಸತಾತ್ಮಕವಾಗಿ ಆಡಳಿತ ನಡೆಸದೆ, ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಬಳಸಿಕೊಂಡು ಇಡೀ ದೇಶವನ್ನು ಭಯ ಮತ್ತು ತಲ್ಲಣಗಳಿಗೆ ದೂಡಿದ್ದಾರೆ. ಎಲ್ಲಾ ಪ್ರಜಾಸತಾತ್ಮಕ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು, ಮೌಲ್ಯಗಳನ್ನು ನಾಶ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ಸುಳ್ಳು ಮೊಕದ್ದಮೆಗಳನ್ನು ಹೂಡಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಅವರನ್ನೆಲ್ಲ ಜೈಲಿಗೆ ತಳ್ಳಲಾಗುತ್ತಿದೆ. ಇಲ್ಲವೇ ಬೆದರಿಸಿ ಬಾಯಿ ಮುಚ್ಚಿಸಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಮುಖರಾದ ಮಾವಳ್ಳಿ ಶಂಕರ್, ಎನ್‌. ವೆಂಕಟೇಶ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್‌ ಮತ್ತು ಜೀವನಹಳ್ಳ ವೆಂಕಟೇಶ್ ಇದ್ದರು.

ಇದನ್ನೂ ಓದಿ : ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...