Homeಮುಖಪುಟಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಮೋದಿ ಪತ್ರ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಮೋದಿ ಪತ್ರ

- Advertisement -
- Advertisement -

ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ಪತ್ರ ಬರೆದಿರುವ ಪ್ರಧಾನಿ ಮೋದಿ, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಸಾಮೂಹಿಕ ಜವಾಬ್ದಾರಿಯನ್ನು ಒತ್ತಿ ಹೇಳಿದ್ದಾರೆ. 18 ವರ್ಷ ತುಂಬಿದ ಮೊದಲ ಬಾರಿಗೆ ಮತದಾನ ಮಾಡುವವರನ್ನು ಗೌರವಿಸುವ ಮೂಲಕ ಶಾಲಾ- ಕಾಲೇಜುಗಳು ಈ ಸಂದರ್ಭವನ್ನು ಆಚರಿಸಬೇಕೆಂದು ಅವರು ಸೂಚಿಸಿದ್ದಾರೆ. 

ಈ ವೇಳೆ ಕರ್ತವ್ಯಗಳ ನೆರವೇರಿಕೆಯಿಂದ ಹಕ್ಕುಗಳು ಉದ್ಭವಿಸುತ್ತವೆ ಎಂಬ ಮಹಾತ್ಮ ಗಾಂಧಿಯವರ ನಂಬಿಕೆಯನ್ನು ನೆನಪಿಸಿಕೊಂಡ ಪ್ರಧಾನಿ, ಈ ಜವಾಬ್ದಾರಿಗಳನ್ನು ನಿರ್ವಹಿಸುವುದು ಭಾರತದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅತ್ಯಗತ್ಯ ಎಂದು ಹೇಳಿದ್ದಾರೆ. 

ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿ ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.

ಕರ್ತವ್ಯಗಳ ನೆರವೇರಿಕೆಯಿಂದ ಹಕ್ಕುಗಳು ಉದ್ಭವಿಸುತ್ತವೆ ಎಂಬ ಮಹಾತ್ಮ ಗಾಂಧಿಯವರ ನಂಬಿಕೆಯನ್ನು ನೆನಪಿಸಿಕೊಂಡ ಪ್ರಧಾನಿ, ಈ ಜವಾಬ್ದಾರಿಗಳನ್ನು ನಿರ್ವಹಿಸುವುದು ಭಾರತದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅತ್ಯಗತ್ಯ ಎಂದು ಹೇಳಿದ್ದಾರೆ. 

ಇಂದು ನಾವು ತೆಗೆದುಕೊಳ್ಳುವ ನಿರ್ಧಾರಗಳು ಮುಂದಿನ ಪೀಳಿಗೆಯ ಭವಿಷ್ಯವನ್ನು ರೂಪಿಸುತ್ತವೆ. ದೇಶವು ವಿಕಸಿತ ಭಾರತದ ದೃಷ್ಟಿಕೋನದತ್ತ ಸಾಗುತ್ತಿರುವಾಗ ಜನರು ತಮ್ಮ ಕರ್ತವ್ಯಗಳನ್ನು ಮುಂಚೂಣಿಯಲ್ಲಿಡಬೇಕೆಂದು ಒತ್ತಾಯಿಸಿದರು.

ನಮ್ಮ ಸಂವಿಧಾನವು ಮಾನವ ಘನತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಅತ್ಯಂತ ಪ್ರಾಮುಖ್ಯತೆಯನ್ನು ನೀಡುತ್ತದೆ. ಇದು ನಮಗೆ ಹಕ್ಕುಗಳೊಂದಿಗೆ ಅಧಿಕಾರ ನೀಡುವುದರ ಜೊತೆಗೆ, ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸುತ್ತದೆ. ಅದನ್ನು ನಾವು ಯಾವಾಗಲೂ ಪೂರೈಸಲು ಪ್ರಯತ್ನಿಸಬೇಕು. ಈ ಕರ್ತವ್ಯಗಳು ಬಲವಾದ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ. 

ಸಂವಿಧಾನದ ರಚನಕಾರರಿಗೆ ಗೌರವ ಸಲ್ಲಿಸಿರುವ ಮೋದಿ, ಅವರ ದೃಷ್ಟಿಕೋನವು ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಅನ್ವೇಷಣೆಗೆ ಮಾರ್ಗದರ್ಶನ ನೀಡುತ್ತಿದೆ ಎಂದು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸೇರಿದಂತೆ ಐವರನ್ನು ಖುಲಾಸೆಗೊಳಿಸಿ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ (ನವೆಂಬರ್ 26) ತೀರ್ಪು ನೀಡಿದೆ ಎಂದು ಬಾರ್ & ಬೆಂಚ್ ವರದಿ...

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ -...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ ಬಂಡಿ ಸಂಜಯ್ ಆಮಿಷ

ತೆಲಂಗಾಣದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರೆ, ತಮ್ಮ ಕರೀಂನಗರ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ತಲಾ 10 ಲಕ್ಷ ರೂ.ಗಳ ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸಚಿವ ಬಂಡಿ...