Homeಮುಖಪುಟಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ, ಅವು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆಸ್ತಿ  ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ವಯನಾಡ್ ಜಿಲ್ಲಾ ಕೇಂದ್ರದಿಂದ 20 ಕಿ.ಮೀ ದೂರದಲ್ಲಿರುವ ಪಡಿಂಜರಥರ ರಸ್ತೆಯುದ್ದಕ್ಕೂ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ, ದೇಶದ ಒಗ್ಗಟ್ಟು, ಮತ್ತು ಏಕತೆಗಾಗಿ ಅಜ್ಜಿ ಇಂದಿರಾ ಗಾಂಧಿ ಮತ್ತು ತಂದೆ ರಾಜೀವ್ ಅವರ ತ್ಯಾಗವನ್ನು ನೆನಪಿಸಿಕೊಂಡಿದ್ದಾರೆ. ಈ ಚುನಾವಣೆಯು ಸಂವಿಧಾನವನ್ನು ರಕ್ಷಿಸಲು ಬಯಸುವವರು ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುವವರ ನಡುವಿನ ಹೋರಾಟವಾಗಿದೆ. ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಹೇಳಿದರು.

ಒಂದೆಡೆ, ಒಬ್ಬ ನಾಯಕ, ಒಂದು ಭಾಷೆ ಮತ್ತು ಒಂದು ರಾಷ್ಟ್ರದ ಕಲ್ಪನೆ ಇದೆ ಮತ್ತು ಇನ್ನೊಂದೆಡೆ ಭಾರತದ ಕಲ್ಪನೆಯಿದೆ. ಒಂದು ಭಾಷೆಯ ಕಲ್ಪನೆಯು ಪ್ರತಿಯೊಬ್ಬ ಕೇರಳೀಯನಿಗೆ ಅವಮಾನವಾಗಿದೆ. ಮಲಯಾಳಂ ಕೇವಲ ಒಂದು ಭಾಷೆಯಲ್ಲ, ಅದು ಸಂಸ್ಕೃತಿ ಮತ್ತು ಜೀವನ ವಿಧಾನವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರ್ಯಾಲಿಯಲ್ಲಿ ಅನೇಕ ಮುಸ್ಲಿಂ ಮಹಿಳೆಯರೂ ತಮ್ಮ ಮಕ್ಕಳೊಂದಿಗೆ  ಭಾಗವಹಿಸಿದ್ದರು. ತನ್ನ ಕಾರಿನಿಂದ, ರಸ್ತೆಯಲ್ಲಿ ತುಂಬಿದ್ದ ಸಾವಿರಾರು ಜನರತ್ತ ರಾಹುಲ್ ಕೈಬೀಸಿ ವಂದನೆಯನ್ನು ಸಲ್ಲಿಸಿದ್ದಾರೆ. ರ್ಯಾಲಿಯಲ್ಲಿ  ಕಾಂಗ್ರೆಸ್ ಅಲ್ಲದೆ ಅದರ ಮಿತ್ರಪಕ್ಷಗಳ ವಿಶೇಷವಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಯಾವುದೇ ಧ್ವಜಗಳು ಇರಲಿಲ್ಲ. ಬದಲಾಗಿ ಜನರು ರಾಹುಲ್ ಅವರ ಫೋಟೋಗಳನ್ನು ಹಿಡಿದಿದ್ದರು.

ಒಂದು ರಾಷ್ಟ್ರ, ಒಂದು ಭಾಷೆ ಮತ್ತು ಒಂದು ಸಂಸ್ಕೃತಿ ಎಂದು ಹೇಳುವ ಯಾವುದೇ ಭಾರತೀಯನಿಗೆ ಭಾರತ ಅರ್ಥವಾಗುವುದಿಲ್ಲ. ಒಬ್ಬ ನಾಯಕ, ಒಂದು ಭಾಷೆಯನ್ನೇ ಹೇರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ. ಕೇರಳವನ್ನು ನಾಗ್ಪುರದಿಂದ ಏಕೆ ಆಳಬೇಕು. ಯಾರವರು? ಕೇರಳವನ್ನು ಇಲ್ಲಿಂದ, ರಾಜ್ಯದ ಬೀದಿಗಳು ಮತ್ತು ಹಳ್ಳಿಗಳಿಂದ ಆಳಬೇಕು. ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯವರ ವೈಯಕ್ತಿಕ ಆಸ್ತಿಯಲ್ಲ. ಅವು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆಸ್ತಿ. ಪ್ರತಿನಿತ್ಯ ಕೆಲವು ಬಿಜೆಪಿ ಸಂಸದರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುವುದನ್ನು ಕೇಳುತ್ತೀರಿ. ಸಂವಿಧಾನವನ್ನು ಬದಲಾಯಿಸಲು ಆರೆಸ್ಸೆಸ್‌ಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ವಿಷಯವು ವಯನಾಡ್‌ಗೆ ದೊಡ್ಡ ಸಮಸ್ಯೆಯಾಗಿದೆ. ರಾತ್ರಿ ಸಂಚಾರ ನಿಷೇಧವೂ ಸಂಕಷ್ಟಕ್ಕೆ ಕಾರಣವಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧರಾಗಿದ್ದೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಅವರ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸುತ್ತೇವೆ. ನಾವು ಕೇಂದ್ರದಲ್ಲಿ ಮತ್ತು ಕೇರಳದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮತದಾರರು ಜಾಗರೂಕರಾಗಿರಿ: ಮಾಯಾವತಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...