Homeಕರ್ನಾಟಕ‘ಸಂವಿಧಾನದ ಹಕ್ಕುಗಳು ಮತ್ತು ಮುಸ್ಲಿಂ ಮಹಿಳೆಯರ ಶಿಕ್ಷಣ’: ಗಾಂಧಿ ಭವನದಲ್ಲಿ ಶನಿವಾರ ಸಂವಾದ ಕಾರ್ಯಕ್ರಮ

‘ಸಂವಿಧಾನದ ಹಕ್ಕುಗಳು ಮತ್ತು ಮುಸ್ಲಿಂ ಮಹಿಳೆಯರ ಶಿಕ್ಷಣ’: ಗಾಂಧಿ ಭವನದಲ್ಲಿ ಶನಿವಾರ ಸಂವಾದ ಕಾರ್ಯಕ್ರಮ

- Advertisement -
- Advertisement -

‘ಸಂವಿಧಾನದ ಹಕ್ಕುಗಳು ಮತ್ತು ಮುಸ್ಲಿಂ ಮಹಿಳೆಯರ ಶಿಕ್ಷಣ’ ಎಂಬ ವಿಷಯದ ಕುರಿತಾಗಿ ‘ರೋಶನಿ ಫೌಂಡೇಶನ್’ ಮತ್ತು ‘ಪ್ರಗತಿಪರ ಚಿಂತಕರ ವೇದಿಕೆ’ ಫೆಬ್ರವರಿ 19ರ ಶನಿವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಸಂವಾದ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ಸಂವಾದ ಕಾರ್ಯಕ್ರಮದಲ್ಲಿ ರಾಜ್ಯದ ಚಿಂತಕರು, ನ್ಯಾಯವಾದಿಗಳು, ಬರಹಗಾರರು, ಹೋರಾಟಗಾರರು ಭಾಗವಹಿಸಲಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಯಕ್ರಮದ ಸಂಘಟಕರು, “ಭಾರತ ಪ್ರಸ್ತುತ ಸಂದರ್ಭದಲ್ಲಿ ಎದುರಿಸುತ್ತಿರುವ ಬಿಕ್ಕಟ್ಟುಗಳ ಬಗ್ಗೆ ನಾಡಿನ ಪ್ರಗತಿಪರ ಚಿಂತಕರು, ಪ್ರಜ್ಞಾವಂತರು ನಿರಂತರವಾಗಿ ಜನತೆಯನ್ನು ಎಚ್ಚರಿಸುತ್ತಾ ಬಂದಿದ್ದಾರೆ. ಆದರೆ ದೇಶದ ಬಹುಸಾಂಸ್ಕೃತಿಕ ಮತ್ತು ಸಂವಿಧಾನ ಮೌಲ್ಯಗಳಿಗೆ ಧಕ್ಕೆಯುಂಟುಮಾಡುವ ಸತತ ಪ್ರಯತ್ನಗಳು ನಡೆಯುತ್ತಲೇ ಇವೆ. ಶಿಕ್ಷಣ, ಮೂಲಭೂತ ಹಕ್ಕುಗಳು, ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಶಕ್ತಿಗಳು ಇಂದು ಮುಖ್ಯವಾಹಿನಿಯಲ್ಲಿ ಒಂದಾಗಬೇಕಾದ ಅವಶ್ಯಕತೆ ಇದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

“ರಾಜ್ಯದಲ್ಲಿ ಹಿಜಾಬ್ ವಿಚಾರದಲ್ಲಿ ನಡೆಯುತ್ತಿರುವ ಸಂಘರ್ಷ ವಿದ್ಯಾರ್ಥಿಗಳ ನಡುವೆ ಬಿರುಕನ್ನು ಮೂಡಿಸಿದ್ದಲ್ಲದೆ, ನಾಡಿನ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ವಾತಾವರಣವನ್ನು ಕೆಡಿಸಿದೆ. ಮುಸ್ಲಿಂ ಹೆಣ್ಣು ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ದುಷ್ಪರಿಣಾಮ ಬೀರಿದೆ” ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

“ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳನ್ನು ಮುಸ್ಲಿಂ ಮಹಿಳೆಯ ಶಿಕ್ಷಣದ‌‌ ಸಂದರ್ಭದಲ್ಲಿ ಹೇಗೆ ಬಳಸಿಕೊಳ್ಳಬಹುದು. ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಒಟ್ಟಿಗೆ ಸಾಧಿಸುವುದು ಹೇಗೆ ? ಶಿಕ್ಷಣ ಸಂಸ್ಥೆಗಳಲ್ಲಿ ಸೌಹಾರ್ದ ವಾತಾವರಣವನ್ನು ನಿರ್ಮಿಸುವ ವಿಧಾನದ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಸಂವಿಧಾನದ ಹಕ್ಕುಗಳ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಅರಿವು ಮೂಡಿಸುವ, ದೇಶದ ಬಹುತ್ವವನ್ನು ರಕ್ಷಿಸುವ, ಯುವ ಸಮುದಾಯಕ್ಕೆ ಭಾರತದ ಸೌಹಾರ್ದ ಪರಂಪರೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಸಂವಾದವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಚಿಂತಕರು, ಸಾಹಿತಿಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ಭಾಗಹಿಸಲಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...