Homeಚಳವಳಿಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಕಾಂಕ್ರೀಟ್ ರಚನೆಗಳನ್ನು ನಿರ್ಮಿಸಿದ್ದಾರೆ ಮತ್ತು ಸಿಂಗು ಬಳಿಯ ಕುಂಡ್ಲಿಯಲ್ಲಿ ಬೋರ್‌ವೆಲ್ ಕೊರೆದಿದ್ದಾರೆ ಎಂದು ಆರೋಪಿಸಿ ಹರಿಯಾಣ ಪೊಲೀಸರು ರೈತರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ದೆಹಲಿ ಬಳಿಯ ಸಿಂಘು ಗಡಿಯು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಗಳ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರು ಇರುವ ಸ್ಥಳವಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಆನಂದ್ ಶರ್ಮಾ ಅವರ ದೂರಿನ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 283 ಮತ್ತು 431 ರ ಅಡಿಯಲ್ಲಿ ಮೊದಲನೆಯ ದೂರನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಎರಡು ಅಂತಸ್ತಿನ ಮನೆ ನಿರ್ಮಿಸುತ್ತಿರುವ ರೈತರು!

“ಕೆಲವು ಅಪರಿಚಿತ ಜನರು” ಮಾಲ್ವಾ ಮೋಟಾರ್ಸ್ ಮುಂದಿನ ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಅಕ್ರಮ ರಚನೆಗಳನ್ನು ನಿರ್ಮಿಸಿ, ರಾಷ್ಟ್ರೀಯ ಹೆದ್ದಾರಿ – 44 ಕ್ಕೆ ತಡೆ ಒಡ್ಡುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಹೇಳಿದ್ದಾರೆ. ಅವರು ಅಕ್ರಮ ನಿರ್ಮಾಣದ ಚಿತ್ರಗಳನ್ನು ಪೊಲೀಸರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಕುಂಡ್ಲಿಯ ಮುನ್ಸಿಪಲ್ ಕಮಿಟಿ ಕಾರ್ಯದರ್ಶಿ ಪವನ್ ಕುಮಾರ್ ಅವರ ದೂರಿನ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಎರಡನೇ ಪ್ರಕರಣ ದಾಖಲಿಸಲಾಗಿದೆ.

ನಿಷೇಧದ ಆದೇಶದ ಹೊರತಾಗಿಯೂ, ಬಟಿಂಡಾದ ರೈತ ಕರಮ್ ಸಿಂಗ್ ರಾಷ್ಟ್ರೀಯ ಹೆದ್ದಾರಿ – 44 ಬಳಿಯ ಕೆಎಫ್‌ಸಿ ಮಾಲ್ ಬಳಿಯ ಹೊಲವೊಂದರಲ್ಲಿ ಬೋರ್‌ವೆಲ್ ಕೊರೆದಿದ್ದಾರೆ. ಪುರಸಭೆಯ ಎಂಜಿನಿಯರ್ ಬೋರ್‌ವೆಲ್‌ ಕೊರೆಯುವುದನ್ನು ನಿಲ್ಲಿಸಬೇಕೆಂದು ಹೇಳಿದರೂ ಅವರು ಅದನ್ನು ನಿಲ್ಲಿಸಲಿಲ್ಲ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ಬಿಕೆಯು (ಲಾಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಾಖೋವಾಲ್, “ನಾವು ಯಾವುದೇ ಶಾಶ್ವತ ರಚನೆಯನ್ನು ನಿರ್ಮಿಸುತ್ತಿಲ್ಲ. ಬಿಸಿಲಿನಿಂದ ರೈತರನ್ನು ರಕ್ಷಿಸಲು ಸೌರ ಫಲಕಗಳನ್ನು ಅಳವಡಿಸಲು ನಾವು ಯೋಜಿಸಿದ್ದೇವೆ” ಎಂದು ಹೇಳಿದ್ದಾರೆ.

“ಸಿಂಘು ಗಡಿಯ ವಿವಿಧ ಸ್ಥಳಗಳ ರಸ್ತೆಬದಿಯಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಕಾರ್ಮಿಕರನ್ನು ಕಾಣಬಹುದು. ಗಡಿಯಲ್ಲಿ ನಾಲ್ಕು ಎರಡು ಅಂತಸ್ತಿನ ಮನೆಗಳು ಈಗಾಗಲೇ ರಚೆನೆಯಾಗಿದ್ದು, ಇದಕ್ಕೆ ಇಟ್ಟಿಗೆಗಳು ಪಂಜಾಬ್‌ನಿಂದ ತರಿಸಲಾಗಿದೆ. ಸಿಂಘು, ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳಲ್ಲಿ ಪ್ರತಿಭಟನಾಕಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ, ಯಾಕೆಂದರೆ ರೈತರು ಕೊಯ್ಲಿಗಾಗಿ ತಮ್ಮ ಗ್ರಾಮಗಳಿಗೆ ತೆರಳಿದ್ದಾರೆ” ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನ: ಕೃಷಿ ಕಾಯ್ದೆಗಳ ವಿರುದ್ಧ ಬೀದಿಗಿಳಿದ ಲಕ್ಷಾಂತರ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...