Homeಮುಖಪುಟ'ಮೊಹಮ್ಮದ್ ಶಮಿಯವರ ಊರಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣ'

‘ಮೊಹಮ್ಮದ್ ಶಮಿಯವರ ಊರಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣ’

- Advertisement -
- Advertisement -

ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ಅತ್ಯುತ್ತಮ ಪ್ರದರ್ಶನದ ಬಳಿಕ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮಿನಿ-ಸ್ಟೇಡಿಯಂ ಮತ್ತು ಓಪನ್ ಜಿಮ್ ನಿರ್ಮಿಸಲು ಜಿಲ್ಲಾಡಳಿತದ ಅಧಿಕಾರಿಗಳು ಯೋಜಿಸುತ್ತಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಐಸಿಸಿ ಪುರುಷರ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಶಮಿ ಅವರ ಅದ್ಭುತ ಪ್ರದರ್ಶನದ ನಂತರ ಈ ನಿರ್ಧಾರವನ್ನು ಮಾಡಲಾಗಿದೆ. ಈ ಸಂಬಂಧ ಅಮ್ರೋಹಾ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಶ್ ತ್ಯಾಗಿ ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಡಿಎಂ ರಾಜೇಶ್ ತ್ಯಾಗಿ ಅವರು, ”ಮೊಹಮ್ಮದ್ ಶಮಿ ಅವರ ಗ್ರಾಮದಲ್ಲಿ (ಸಹಸ್‌ಪುರ್ ಅಲಿನಗರ) ಮಿನಿ ಸ್ಟೇಡಿಯಂ ಮತ್ತು ಓಪನ್ ಜಿಮ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದರು.

ಭಾರತದ ಸ್ಟಾರ್ ವೇಗಿಗಳ ತವರೂರು ಸಹಸ್ಪುರ್ ಅಲಿನಗರದಲ್ಲಿ ಮಿನಿ ಸ್ಟೇಡಿಯಂ ಮತ್ತು ಓಪನ್ ಜಿಮ್ ನಿರ್ಮಾಣ ಮಾಡುವ ಗುರಿಯನ್ನು ಈ ಪ್ರಸ್ತಾವನೆ ಹೊಂದಿದೆ.

ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಪಕ್ಷದ ನಾಯಕ ಜಯಂತ್ ಸಿಂಗ್ ಅವರು ಶಮಿ ಅವರ ಗ್ರಾಮದಲ್ಲಿ ಕ್ರೀಡಾ ಸೌಲಭ್ಯವನ್ನು ನಿರ್ಮಿಸಲು ಹಣವನ್ನು ಒದಗಿಸುವಂತೆ ಪ್ರತಿಪಾದಿಸಿದ್ದಾರೆ.

”ಮೊಹಮ್ಮದ್ ಶಮಿ ಅವರ ಹಳ್ಳಿಯಲ್ಲಿ (ಸಹಪುರ್ ಅಲಿನಗರ) ಕ್ರೀಡಾ ಸೌಲಭ್ಯದ ನಿರ್ಮಾಣಕ್ಕೆ ಸಹಾಯ ಮಾಡಲು ನನ್ನ MPLAD ನಿಧಿಯನ್ನು ಒದಗಿಸುತ್ತೇನೆ” ಎಂದು ಎಕ್ಸ್‌ನಲ್ಲಿ ಜಯಂತ್ ಸಿಂಗ್ ಪೋಸ್ಟ್‌ ಮಾಡಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಐಸಿಸಿ ವಿಶ್ವಕಪ್ 2023ರಲ್ಲಿ ಅಸಾಧಾರಣ ಆಟಗಾರರಾಗಿರುವ ಶಮಿ ಅವರು ತಮ್ಮ ಮಾರಕ ದಾಳಿಯಿಂದ ಮನೆಮಾತಾಗಿದ್ದಾರೆ. ಭಾರತ ತಂಡ ಫೈನಲ್‌ಗೆ  ಪ್ರವೇಶಿಸಲು ಶಮಿ ಗಮನಾರ್ಹವಾಗಿ ಕೊಡುಗೆ ನೀಡಿದ್ದಾರೆ.

ವಿಶ್ವಕಪ್ 2023ರ ಫೈನಲ್‌ ಪಂದ್ಯ ನವೆಂಬರ್ 19ರಂದು (ಭಾನುವಾರ) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಐದು ಬಾರಿಯ ಚಾಂಪಿಯನ್ಆಗಿರುವ ಆಸ್ಟ್ರೇಲಿಯಾ ತಂಡದ ವಿರುದ್ಧ ಬಲಿಷ್ಟ ಭಾರತ ತಂಡ ಸೆಣೆಸಾಡಲಿದೆ. ಇದು ಹೈ-ವೋಲ್ಟೇಜ್ ಪಂದ್ಯವಾಗಿರಲಿದೆ.

ಇದನ್ನೂ ಓದಿ: ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ...

0
'ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ. 'ಪ್ರತಿಪಕ್ಷಗಳ ಇಂಡಿಯಾ...