Homeಮುಖಪುಟಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಆದೇಶ ಕಾಯ್ದಿರಿಸಿದ ಸುಪ್ರೀಂ

ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಆದೇಶ ಕಾಯ್ದಿರಿಸಿದ ಸುಪ್ರೀಂ

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು.

- Advertisement -
- Advertisement -

ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಇಬ್ಬರು ಕಾನೂನು ವಿದ್ಯಾರ್ಥಿಗಳಾದ ನಿಶಾಂತ್ ಕಾಟ್ನೇಶ್ವರ್ಕರ್ ಮತ್ತು ಸ್ಕಂದ್ ಬಾಜ್ಪೈ ಮತ್ತು ವಕೀಲ ಅಭಿಜುದಾಯ ಮಿಶ್ರಾ ಸಲ್ಲಿಸಿದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಗಳ ಕುರಿತ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರಕ್ಕೆ ಕಾದಿರಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ನಾಳೆ ಶುಕ್ರವಾರ ಆದೇಶ ಹೊರಡಿಸಲಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು ಕಮ್ರಾ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿ, ಕಮ್ರಾ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಹೇಳಿದ್ದರು.

ಇದೆ ವೇಳೆ,  “ಸುಪ್ರೀಂ ಕೋರ್ಟ್ ಮೇಲೆ ಅನ್ಯಾಯವಾಗಿ ಕೆಟ್ಟ ರೀತಿಯಲ್ಲಿ ದಾಳಿ ಮಾಡುವುದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದು” ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ತಿಳಿಸಿದ್ದರು.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು.

ಇದರಿಂದ, ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು.

ಪ್ರಕರಣದ ಕುರಿತು ಮತ್ತೆ ಟ್ವೀಟ್ ಮಾಡಿದ್ದ ಕಮ್ರಾ, ’ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ” ಎಂದಿದ್ದರು. ಜೊತೆಗೆ “ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಸಮಯ ಹಾಳು ಮಾಡಲ್ಲ” ಎಂದು ತಮ್ಮ ಪತ್ರದೊಂದಿಗೆ ಅಟರ್ನಿ ಜನರಲ್ ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು.


ಇದನ್ನೂ ಓದಿ: ಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...