ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಖರ್ಗೆ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಉದಯಪುರದ ‘ಚಿಂತನ್ ಶಿವರ್’ನಲ್ಲಿ ಕಾಂಗ್ರೆಸ್ ತೆಗೆದುಕೊಂಡು ‘ಒಬ್ಬ ನಾಯಕ ಒಂದೇ ಹುದ್ದೆ’ ಎಂಬ ಘೋಷಣೆಗೆ ಅನುಗುಣವಾಗಿ ಖರ್ಗೆಯವರ ನಿರ್ಧಾರ ಹೊರಬಿದ್ದಿದೆ.
ಹಿರಿಯ ಕಾಂಗ್ರೆಸ್ಸಿಗರಾದ ದಿಗ್ವಿಜಯ ಸಿಂಗ್ ಅಥವಾ ಪಿ.ಚಿದಂಬರಂ ಅವರು ರಾಜ್ಯಸಭೆಯಲ್ಲಿ ಖರ್ಗೆ ಅವರ ಸ್ಥಾನವನ್ನು ತುಂಬಬಹುದು ಎನ್ನಲಾಗಿದೆ. ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಖರ್ಗೆ ಅವರು ಗಾಂಧಿ ಕುಟುಂಬದ ಬೆಂಬಲಿಗರಾಗಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದೀಪೇಂದರ್ ಹೂಡಾ, ಸಲ್ಮಾನ್ ಖುರ್ಷಿದ್, ಅಶೋಕ್ ಗೆಹ್ಲೋಟ್, ದಿಗ್ವಿಜಯ ಸಿಂಗ್, ಮನೀಶ್ ತಿವಾರಿ, ಪೃಥ್ವಿರಾಜ್ ಚವಾಣ್ ಸೇರಿದಂತೆ ಸುಮಾರು 30 ಕಾಂಗ್ರೆಸ್ ನಾಯಕರ ಬೆಂಬಲ ಖರ್ಗೆಯವರಿಗಿದೆ.
ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಬಿದ್ದಿರುವ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ ಸಿಂಗ್ ಅವರು ಖರ್ಗೆ ಅವರಿಗೆ ಬೆಂಬಲ ನೀಡಿದ್ದಾರೆ.
ಇದನ್ನೂ ಓದಿರಿ: ‘ರಾಹುಲ್, ಭಾರತ್ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ
ರಾಜಸ್ಥಾನದ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಸ್ಪರ್ಧೆಯಿಂದ ಹಿಂದೆ ಸರಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಂತದದಲ್ಲಿ ದಿಗ್ವಿಜಯ ಸಿಂಗ್ ಸ್ಪರ್ಧೆಯಿಂದ ಹೊರಗುಳಿದರು.
ಖರ್ಗೆ ಅವರೇ ಪ್ರಸ್ತಾವನೆ ಸಲ್ಲಿಸಲಿದ್ದಾರೆ ಎಂದು ಗೆಹ್ಲೋಟ್ ಹೇಳಿದರು. ಅಕ್ಟೋಬರ್ 19 ರಂದು ಮತ ಎಣಿಕೆಯ ನಂತರ (ಅಗತ್ಯವಿದ್ದರೆ) ಪಕ್ಷದ ಮುಖ್ಯ ಹುದ್ದೆಯ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉನ್ನತ ಹುದ್ದೆಗೆ ಗಾಂಧಿ ಕುಟುಂಬದವರು ಸ್ಪರ್ಧಿಸದ ಕಾರಣ, 25 ವರ್ಷಗಳ ನಂತರ ಗಾಂಧಿ ಕುಟುಂಬೇತರ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದ್ದಾರೆ.


