Homeಕರ್ನಾಟಕಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ, ಮೂರೂ ಕ್ಷೇತ್ರದ ಉಪಚುನಾವಣೆಯಲ್ಲೂ ಸ್ಪರ್ಧೆ: ನಿರ್ಧಾರ ಬದಲಿಸಿದ HDK

ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ, ಮೂರೂ ಕ್ಷೇತ್ರದ ಉಪಚುನಾವಣೆಯಲ್ಲೂ ಸ್ಪರ್ಧೆ: ನಿರ್ಧಾರ ಬದಲಿಸಿದ HDK

- Advertisement -
- Advertisement -

ಕರ್ನಾಟಕದಲ್ಲಿ ಶೀಘ್ರದಲ್ಲಿಯೇ ನಡೆಯಲಿರುವ ಮಸ್ಕಿ, ಬಸವಕಲ್ಯಾಣ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಉಪಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಕುಮಾರಸ್ವಾಮಿಯವರು ಹೇಳಿದ್ದರು. ಆದರೆ ಈಗ ತಮ್ಮ ನಿರ್ಧಾರ ಬದಲಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಫೆಬ್ರವರಿ 14) ನಡೆದ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, “ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು. ಪಕ್ಷಕ್ಕೆ ಆರ್ಥಿಕ ಶಕ್ತಿ ಇಲ್ಲದ ಕಾರಣದಿಂದ ಈ ತೀರ್ಮಾನಕ್ಕೆ ಬರಲಾಗಿತ್ತು. ಅದನ್ನೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.‌ದೇವೇಗೌಡ ಅವರು ಪ್ರಕಟಿಸಿದ್ದರು. ಆದರೆ, ಈಗ ಮೂರೂ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದೇನೆ. ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಯಾವುದೇ ರಾಷ್ಟ್ರೀಯ ಪಕ್ಷಗಳ ಜತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧೆ ಮಾಡಲಾಗುವುದು” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಹಣ ಎಲ್ಲಿಂದ ಬರುತ್ತದೆ? ಗುಜರಾತಿನ ವ್ಯಾಪಾರಿಗಳಿಂದ ಬರುತ್ತದೆ: ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?

“ಉಪಚುನಾವಣೆಯ ಸ್ಪರ್ಧೆಯಿಂದ ಜೆಡಿಎಸ್ ದೂರ ಉಳಿಯಲಿದೆ ಎಂದಾಗ ಕೆಲವರು ಟೀಕಿಸಿದ್ದರು. ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್ ಪಕ್ಷ ಮುಂದಾಗಿದೆ ಎಂದು ಆರೋಪ ಮಾಡಿದ್ದರು. ಅಂತಹ ಯಾವ ಯೋಚನೆಯೂ ತಮ್ಮ ಪಕ್ಷಕ್ಕಿಲ್ಲ ಎಂಬುದನ್ನು ಈ ಮೂಲಕ ಸಾಬೀತುಪಡಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ” ಎಂದು ಆರೋಪಿಸಿದ್ದರು. 2020 ರಲ್ಲಿ ರಾಜರಾಜೇಶ್ವರಿ ನಗರ ಮತ್ತು ಸಿರಾದಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಈ ಆರೋಪ ಕೇಳಿಬಂದಿತ್ತು.


ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...