Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮುಂದುವರೆದ ಅಪಘಾತಗಳು; ಸ್ಥಳದಲ್ಲೇ ಯುವತಿ ಸಾವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮುಂದುವರೆದ ಅಪಘಾತಗಳು; ಸ್ಥಳದಲ್ಲೇ ಯುವತಿ ಸಾವು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತಿಚೆಗೆ ಉದ್ಘಾಟಿಸಿದ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್‌ ವೇ ಒಂದಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಮಂಡ್ಯ ವ್ಯಾಪ್ತಿಯಲ್ಲಿ ಅಪಘಾತವೊಂದು ಸಂಭವಿಸಿ, ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿ ತಾಯಿ – ಮಗ ಮೃತಪಟ್ಟಿದ್ದರು. ಈ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿರುವುದು ನಡೆದಿರುವುದು ಖೇದಕರ ಸಂಗತಿ.

ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದ ಇಬ್ಬರು ಭಾನುವಾರ ರಜಾ ದಿನವಾಗಿದ್ದರಿಂದ ಮೈಸೂರಿಗೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದಾಗ ಬೈಕ್‌ ನಿಯಂತ್ರಣ ತಪ್ಪಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ನ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೈಕ್ ಓಡಿಸುತ್ತಿದ್ದ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.

ಮೃತಪಟ್ಟ ಯುವತಿಯ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಯುವತಿ ಪ್ರಿಯಾಂಕ ರಾಜು(32) ತಮಿಳುನಾಡು ಮೂಲದವಳಾಗಿದ್ದು, ಬೈಕ್‌ ಓಡಿಸುತ್ತಿದ್ದ ಯುವಕ ಹಾಸನದ ದಾಸನಕೊಪ್ಪಲು ನಿವಾಸಿ ಲಕ್ಷ್ಮೀನಾರಾಯಣ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ, ಸರಣಿ ಅಪಘಾತ-ಟ್ರಾಫಿಕ್ ಜಾಮ್: ಸಿಎಂ, ಪಿಎಂಗೆ ಪ್ರಯಾಣಿಕರ ಹಿಡಿಶಾಪ

ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್​ ವೇ- ಅಪಘಾತಗಳ ಹೆದ್ದಾರಿ

ಬೆಂಗಳೂರು – ಮೈಸೂರು ನಡುವಿನ ಎಕ್ಸ್​ಪ್ರೆಸ್​ ವೇ ಉದ್ಘಾಟನೆಯಾದಾಗಿನಿಂದ ಅಲ್ಲಲ್ಲಿ ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗುತ್ತಲೇ ಇವೆ. ಇನ್ನೂ ಉದ್ಘಾಟನೆಗೂ ಮುನ್ನ ಕೂಡ ಈ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ ವೇಳೆಯಲ್ಲೂ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಎಕ್ಸ್​ಪ್ರೆಸ್​ ವೇಯಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ವಾಹನಗಳ ಸಂಚಾರ ಪ್ರಾರಂಭವಾಯಿತು. ಅಲ್ಲಿಂದ ಇಲ್ಲಿವರೆಗೆ ಸರಿ ಸುಮಾರು 335ಕ್ಕೂ ಅಪಘಾತ ಪ್ರಕರಣಗಳು ವರದಿಯಾಗಿದ್ದು, 80ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 51 ಕಿಮೀ ಹೆದ್ದಾರಿ ಹಾದುಹೋಗಲಿದ್ದು, 6 ತಿಂಗಳಲ್ಲಿ 110ಕ್ಕೂ ಅಧಿಕ ಅಪಘಾತಗಳು ನಡೆದಿದ್ದು, 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸುಮಾರು 100 ಜನ ಗಾಯಾಳುಗಳಾಗಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 225 ಅಪಘಾತ ಪ್ರಕರಣಗಳು ವರದಿಯಾಗಿದ್ದು, 43 ಜನರು ಪ್ರಾಣಬಿಟ್ಟಿದ್ದಾರೆ. ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ 40 ಅಪಘಾತ ಸಂಭವಿಸಿದ್ದು, 9 ಜನ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಮತ್ತಿಕೆರೆ ಸಮೀಪ 3 ಕಾರುಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಮೂವರು ಗಾಯಾಳುಗಳಾಗಿದ್ದರು. ಹೆದ್ದಾರಿ ಕಾಮಗಾರಿ ಕೊನೆಯ ಹಂತಕ್ಕೆ ಬಂದ ಡಿಸೆಂಬರ್, ಜನವರಿ ತಿಂಗಳಲ್ಲಿಯೇ ಹೆಚ್ಚಿನ ಅಪಘಾತ ಪ್ರಕರಣಗಳು ಸಂಭವಿಸಿವೆ.

ಎಕ್ಸ್​ಪ್ರೆಸ್​ ವೇಯಲ್ಲಿ ಎಲ್ಲಿಯೂ ವೇಗ ಮಿತಿ ಹಾಗೂ ಇತರೆ ಮಾಹಿತಿಯನ್ನು ಒದಗಿಸುವ ಸೂಚನಾ ಫಲಕಗಳು ಇಲ್ಲ. ಜೊತೆಗೆ ಮೈಸೂರು ಜಿಲ್ಲೆಯಲ್ಲಿ ಹಾದುಹೋಗುವ ಹೆದ್ದಾರಿಯಲ್ಲಿ ಸೇತುವೆಗಳು ಹೆಚ್ಚು ತಿರುವಿನಿಂದ ಕೂಡಿರುವುದು ಅಪಘಾತಕ್ಕೆ ಕಾರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...