ಹರಿಯಾಣದ ಹಿಸ್ಸಾರ್‌ನಲ್ಲಿ ಜಿಲ್ಲಾ ವಕೀಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದ ಹರಿಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲರ ವಿರುದ್ಧ ರೈತರು ಮತ್ತು ವಕೀಲರ ಗುಂಪು ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರ ಸರ್ಕಾರವು ಇತ್ತೀಚೆಗೆ ರದ್ದುಗೊಳಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಬೆಂಬಲಿಸಿದ್ದಕ್ಕಾಗಿ, ಹರಿಯಾಣದ ಬಿಜೆಪಿ-ಜೆಜೆಪಿ ನಾಯಕರ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಲೇ ಬಂದಿದ್ದಾರೆ. ರೈತ ವಿರೋದಿ ಕೃಷಿ ಕಾನೂನುಗಳನ್ನು ಬೆಂಬಲಿಸಿದ ಚೌಟಾಲ ಅವರ ಭೇಟಿಯನ್ನು ವಿರೋಧಿಸಿದ ರೈತರು ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೌಟಾಲ ಅವರ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬೆಂಬಲಿಸಿದ ವಕೀಲರ ತಂಡವೊಂದು ಧರಣಿ ನಡೆಸಿದೆ. ಪ್ರತಿಭಟನೆಯ ವೇಳೆ ವಕೀಲರು ಮತ್ತು ಪೊಲೀಸರ ನಡುವೆ ಲಘು ಘರ್ಷಣೆಯೂ ನಡೆದಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಇದನ್ನೂ ಓದಿ: MSP ಕಾನೂನಿಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ


