Homeಕರ್ನಾಟಕಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ರೈತರು ನಡೆಸುತ್ತಿರುವ ಹೋರಾಟವು ಐದನೆ ತಿಂಗಳಿಗೆ ಕಾಲಿಟ್ಟಿದೆ. ದೆಹಲಿಯನ್ನು ಕೇಂದ್ರವಾಗಿಟ್ಟುಕೊಂಡು ಅಲ್ಲಿನ ಹೆದ್ದಾರಿಗಳ ಗಡಿಯಲ್ಲಿ ರೈತರು ಮೂರು ತಿಂಗಳು ಹೋರಾಟ ನಡೆಸುತ್ತಿದ್ದರು. ಆದರೆ ಗಣರಾಜ್ಯೋತ್ಸವದಂದು ಕೇಂದ್ರ ಸರ್ಕಾರವು ಹೋರಾಟ ನಿರತ ರೈತರಿಗೆ ನೀಡಿದ ಕಿರುಕುಳದಿಂದಾಗಿ ಹೋರಾಟದ ಮಾದರಿಯನ್ನು ರೈತರು ಬದಲಾಯಿಸಿದ್ದರು.

ರೈತರು ದೆಹಲಿಯ ಗಡಿಗಳನ್ನು ಕೇಂದ್ರೀಕರಿಸುವುದನ್ನು ಬಿಟ್ಟು ದೇಶದ ಹಳ್ಳಿ- ಹಳ್ಳಿಗಳಲ್ಲಿ ರೈತ ಮಹಾಪಂಚಾಯತ್‌ಗಳನ್ನು ನಡೆಸಲು ತೀರ್ಮಾನಿಸಿದ್ದರು. ಅದರಂತೆ ಉತ್ತರ ಭಾರತದ ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಉತ್ತರಖಂಡ್‌, ಪಶ್ಚಿಮ ಬಂಗಾಳ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಬೃಹತ್‌ ರೈತ ಮಹಾಪಂಚಾಯತ್‌ ನಡೆದಿತ್ತು. ಈ ರೈತ ಮಹಾಪಂಚಾಯತ್‌‌‌‌‌ ಭಾರಿ ಜನಬೆಂಬಲ ಪಡೆಯುತ್ತಿದೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

ಅದರಂತೆ ದಕ್ಷಿಣ ಭಾರತದಲ್ಲೂ ಮಾರ್ಚ್‌ 20 ರಂದು ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದಿತ್ತು. ಇದೀಗ ಕರ್ನಾಟಕದಲ್ಲಿ ರೈತ ಮಹಾಪಂಚಾಯತ್‌‌‌‌ ಪರ್ವ ಮುಂದುವರೆದಿದೆ.

ಮಾರ್ಚ್ 31 ರಂದು ಮತ್ತೊಂದು ಸುತ್ತಿನ ರೈತ ಮಹಾಪಂಚಾಯತ್ ಬೆಳಗಾವಿಯಲ್ಲಿ ನಡೆಯಲಿದೆ. ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಸಂಯಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಈ ಮಹಾಪಂಚಾಯತ್‌ ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಬೆಳಿಗ್ಗೆ 11 ಕ್ಕೆ ಮಹಾ ಪಂಚಾಯತ್‌ ನಡೆಯಲಿದೆ. ಸಮಾವೇಶದಲ್ಲಿ ರಾಕೇಶ್ ಟಿಕಾಯತ್‌ ಮತ್ತು ಯುದ್ದವೀರ್‌ ಸಿಂಗ್, ಡಾ. ದರ್ಶನ್ ಪಾಲ್ ಭಾಗವಹಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ಶಿವಮೊಗ್ಗದಲ್ಲಿ ಮಹಾ ಪಂಚಾಯತ್ ನಡೆದ ಮರುದಿನ ಹಾವೇರಿಯಲ್ಲಿ ಹಾಗೂ ಮಾರ್ಚ್ 22 ರಂದು ಬೆಂಗಳೂರಿನಲ್ಲಿ ವಿಧಾನಸಭಾ ಚಲೋ ನಡೆದಿತ್ತು. ಈ ಮಹಾಪಂಚಾಯತ್‌ನಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್‌, ದರ್ಶನ್ ಪಾಲ್, ಯುದ್‌‌ವೀರ್‌ ಸಿಂಗ್‌, ಚುಕ್ಕಿ ನಂಜುಂಡ ಸ್ವಾಮಿ, ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಶಿವಮೊಗ್ಗ ಮಹಾಪಂಚಾಯತ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್‌ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಅವರ ಮೇಲೆ ಎಫ್‌ಐಆರ್‌ ಕೂಡಾ ದಾಖಲಾಗಿತ್ತು. ಇದನ್ನು ವಿರೋಧಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಎಫ್‌ಐಆರ್‌ ಅನ್ನು ರದ್ದು ಪಡಿಸುವಂತೆ ಸರ್ಕಾರ ಮೇಲೆ ಒತ್ತಡ ಹಾಕಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ರೈತರಿಗೆ ಹೋರಾಟ ಮಾಡುವ ಹಕ್ಕಿಲ್ಲವೆ? ಸರ್ಕಾರ ಗೂಟಾ ಹೊಡ್ಕೊಂಡು ಇಲ್ಲೇ ಇರುತ್ತದೆಯೆ? – JDS ಶಾಸಕ ಮಂಜುನಾಥ್‌ ಆಕ್ರೋಶ| ವಿಡಿಯೋ ನೋಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ...