Homeಮುಖಪುಟ`ಮಹಾ' ಸರ್ಕಾರ ರಚನೆ ಸರ್ಕಸ್‌: ಸಿಎಂ ಹುದ್ದೆ ಶಿವಸೇನೆಗೆ ಎಂದ ಎನ್‌ಸಿಪಿ..!

`ಮಹಾ’ ಸರ್ಕಾರ ರಚನೆ ಸರ್ಕಸ್‌: ಸಿಎಂ ಹುದ್ದೆ ಶಿವಸೇನೆಗೆ ಎಂದ ಎನ್‌ಸಿಪಿ..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗಾಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಈ ಮಧ್ಯೆ ಶಿವಸೇನೆ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದು, ಶತಪ್ರಯತ್ನ ನಡೆಸುತ್ತಿದೆ. ಈಗ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಪಕ್ಷಗಳು ಒಂದುಗೂಡಿ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ಮೂರು ಪಕ್ಷಗಳು ಸಾಮಾನ್ಯ ಕನಿಷ್ಠ ನೀತಿ ( common minimum programme- cmp)ಗಳನ್ನು ರೂಪಿಸಿದ್ದು, ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದು ಎನ್‌ಸಿಪಿ ಹೇಳಿದೆ. ಮುಂದಿನ ಸಿಎಂ ಶಿವಸೇನೆ ಪಕ್ಷದಿಂದಲೇ ಆಗಲಿದ್ದಾರೆ. ಹೇಳಿದಂತೆ ನಡೆದುಕೊಳ್ಳುವುದು ಪಕ್ಷದ ಗೌರವ. ಸಿಎಂ ಸ್ಥಾನವನ್ನು ಶಿವಸೇನೆಗೆ ಬಿಟ್ಟು ಕೊಡಲಾಗುವುದು ಎಂದು ಎನ್‌ಸಿಪಿಯ ಮುಂಬೈ ಪ್ರದೇಶ ಅಧ್ಯಕ್ಷ ನವಾಬ್‌ ಮಲಿಕ್‌ ಹೇಳಿದ್ದಾರೆ.

`ಕಾಂಗ್ರೆಸ್‌ ಎರಡೂ ಪಕ್ಷಗಳಜತೆ ಸೇರಿ ಮೈತ್ರಿ ರಚಿಸುತ್ತದೆಯೋ ಅಥವಾ ಹೊರಗಿದ್ದುಕೊಂಡೇ ಬೆಂಬಲ ಸೂಚಿಸುತ್ತದೆಯೋ ಎಂಬುದು ಶೀಘ್ರದಲ್ಲೇ ನಿರ್ಧಾರವಾಗಲಿದೆ. ಇನ್ನೊಮ್ಮೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ’ ಎಂದವರು ತಿಳಿಸಿದ್ದಾರೆ.

ಮೈತ್ರಿಗೂ ಮೊದಲು ಅಧಿಕಾರ ಹಂಚಿಕೆಯ ಕುರಿತ ಸೂತ್ರ ಮತ್ತು ನಿಯಮಾವಳಿಗಳನ್ನು ಅಂತಿಮಗೊಳಿಸಬೇಕು. ಉದ್ಧವ್‌ ಠಾಕ್ರೆ ಅವರ ಜತೆ ಮಾತುಕತೆಯ ನಂತರ ಸೋನಿಯಾ ಗಾಂಧಿ ಮತ್ತು ಶರದ್‌ ಪವಾರ್‌ ಅವರು ಭೇಟಿಯಾಗಲಿದ್ದಾರೆ.

ಭಾನುವಾರದ ನಂತರ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ. ಯಾಕಂದ್ರೆ ಸೋಮವಾರದೊಳಗೆ ಮೂರು ಪಕ್ಷಗಳು ನಿರ್ಧಾರ ತೆಗೆದುಕೊಳ್ಳಲಿದ್ದು, ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ಸಾಮಾನ್ಯ ಕನಿಷ್ಠ ನೀತಿಯ ಫಾರ್ಮೂಲಾವನ್ನು ಮೂರು ಪಕ್ಷಗಳ ನಾಯಕರಿಗೆ ರವಾನಿಸಲಾಗಿದ್ದು, ಮುಂದೆ ಆಗುವ ಸಾಧ್ಯಾಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಲಾಗುವುದು ಎಂದು ಎನ್‌ಸಿಪಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...