Homeಮುಖಪುಟಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; 'ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ' ಎಂದ...

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’ ಎಂದ ಯುಪಿ ಸಿಎಂ

- Advertisement -
- Advertisement -

ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಷರಿಯಾ ಕಾನೂನನ್ನು’ ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ’ ಎಂದು ಹೇಳಿದ್ದಾರೆ.

ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಮತ್ತು ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ, ನಾವು ಷರಿಯಾ ಕಾನೂನನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ. ನೀವು ಹೇಳಿ, ಈ ದೇಶವನ್ನು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ ಅಥವಾ ಶರಿಯತ್ ಮೂಲಕ ನಡೆಸುತ್ತದೆಯೇ” ಎಂದಿದ್ದಾರೆ.

“ಕಾಂಗ್ರೆಸ್ ಜನರು ತಮ್ಮ ಪ್ರಣಾಳಿಕೆಯಲ್ಲಿ ‘ವ್ಯಕ್ತಿಗಾತ್ ಕಾನೂನ್’ (ವೈಯಕ್ತಿಕ ಕಾನೂನುಗಳನ್ನು ಜಾರಿಗೆ ತರುವುದಾಗಿ ಹೇಳುತ್ತಾರೆ) ಅಂದರೆ, ಮೋದಿಯವರು ತ್ರಿವಳಿ ತಲಾಖ್ ಪದ್ಧತಿಯನ್ನು ನಿಲ್ಲಿಸಿದ ಕಾರಣ ಷರಿಯಾ ಕಾನೂನನ್ನು ಜಾರಿಗೆ ತರಲಾಗುವುದು” ಎಂದು ಆದಿತ್ಯನಾಥ್ ಹೇಳಿದರು.

“ನಾವು ಮತ್ತೆ ವೈಯಕ್ತಿಕ ಕಾನೂನನ್ನು ಮರುಸ್ಥಾಪಿಸುತ್ತೇವೆ ಎಂದು ಅವರು ಹೇಳುತ್ತಾರೆ. ಈ ಜನರು ಷರಿಯಾ ಕಾನೂನನ್ನು ಜಾರಿಗೊಳಿಸುತ್ತಾರೆ” ಎಂದು ಆದಿತ್ಯನಾಥ್ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿಯನ್ನು ತೆಗೆದುಕೊಂಡು ಹಂಚುತ್ತೇವೆ ಎಂದು ಹೇಳಲಾಗಿದೆ. ನಿಮ್ಮ ಆಸ್ತಿಯನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಲೂಟಿ ಮಾಡಲು ನೀವು ಅನುಮತಿಸುತ್ತೀರಾ? ಈ ನಾಚಿಕೆಯಿಲ್ಲದವರ ಸ್ಥಿತಿ ನೋಡಿ, ಒಂದು ಕಡೆ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟು, ಮತ್ತೊಂದೆಡೆ ಮಾಫಿಯಾ ಮತ್ತು ಕ್ರಿಮಿನಲ್‌ಗಳನ್ನು ತಮ್ಮ ಹಾರವನ್ನಾಗಿ ಮಾಡಿಕೊಂಡು, ಅವರ ಹೆಸರಿನಲ್ಲಿ ಫಾತಿಹಾ ಓದುತ್ತಿದ್ದಾರೆ” ಎಂದು ಅವರು ಹೇಳಿದರು.

2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು… ಹಾಗಾದರೆ, ಎಲ್ಲಿ ನಮ್ಮ ದಲಿತರು, ಹಿಂದುಳಿದವರು, ಖರಗವಂಶಿಗಳು, ಬಡವರು ಮತ್ತು ರೈತರು ಎಲ್ಲಿಗೆ ಹೋಗುತ್ತಾರೆ, ತಾಯಂದಿರು ಮತ್ತು ಸಹೋದರಿಯರು ಎಲ್ಲಿಗೆ ಹೋಗುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಭಯೋತ್ಪಾದನೆ ಅಂತ್ಯಗೊಂಡಿದೆ ಎಂದು ಹೇಳಿದ ಅವರು, “10 ವರ್ಷಗಳ ಹಿಂದೆ ದೇಶದಲ್ಲಿ ಭಯ ಮತ್ತು ಭಯೋತ್ಪಾದನೆಯ ವಾತಾವರಣವಿತ್ತು, ಜನರು ಭಯಭೀತರಾಗಿದ್ದರು, 2014 ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಯಿತು. 2019 ರ ಹೊತ್ತಿಗೆ ಭಯೋತ್ಪಾದನೆಯ ಮೂಲ ಜಮ್ಮು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು. ಇಂದು ಭಾರತದಲ್ಲಿ ಭಯೋತ್ಪಾದನೆ ನಾಶವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...