Homeಚಳವಳಿಮುಂದುವರಿದ ಒಳಮೀಸಲಾತಿ ಧರಣಿ: ಸಿಪಿಐಎಂಎಲ್ ಲಿಬರೇಷನ್ ಬೆಂಬಲ

ಮುಂದುವರಿದ ಒಳಮೀಸಲಾತಿ ಧರಣಿ: ಸಿಪಿಐಎಂಎಲ್ ಲಿಬರೇಷನ್ ಬೆಂಬಲ

- Advertisement -
- Advertisement -

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಧರಣಿ ಮೂರನೇ ದಿನವು ಮುಂದುವರೆದಿದೆ. ಈ ಹೋರಾಟಕ್ಕೆ ಸಿಪಿಐಎಂಎಲ್ ಲಿಬರೇಷನ್ ಪಕ್ಷ ಬೆಂಬಲ ಸೂಚಿಸಿದೆ.

ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವವರ ಮೇಲೆ ಲಾಠಿಚಾರ್ಜ್ ನಡೆಸಿದ ಸರ್ಕಾರದ ದಬ್ಬಾಳಿಕೆ ಕ್ರಮವನ್ನು ಸಿಪಿಐ(ಎಂಎಲ್) ಲಿಬರೇಶನ್ ಪಕ್ಷ ಖಂಡಿಸುತ್ತದೆ, ಅಲ್ಲದೇ ಸಂವಿಧಾನಬದ್ಧವಾಗಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಹೋರಾಟವನ್ನು ಪಕ್ಷ ಬೆಂಬಲಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೋರಾಟವನ್ನು ಬೆಂಬಲಿಸಿ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಕ್ಲಿಫ್ಟನ್ ರೊಜಾರಿಯೋ, ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಮೈತ್ರೇಯಿ ಕೃಷ್ಣನ್, ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ರಘುಪತಿ ಮತ್ತಿತರ ನಿಯೋಗ ಅನಿರ್ದಿಷ್ಟ ಧರಣಿ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಆರ್ಥಿಕ ದುರ್ಬಲ ವರ್ಗ (EWS) ಶೇ.10ರಷ್ಟು ಮೀಸಲಾತಿ ಒದಗಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ಯಾಯ ಮಾಡಿವೆ. ಶತಶತಮಾನಗಳಿಂದ ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ನ್ಯಾಯಬದ್ಧವಾಗಿ ಹಕ್ಕು ಕೇಳಿದರೆ ಅವರ ಮೇಲೆ ಪೊಲೀಸರನ್ನು ಛೂಬಿಟ್ಟು ಹಲ್ಲೆಮಾಡಿಸುವ ಮಟ್ಟಕ್ಕೆ ಸರ್ಕಾರಗಳು ಅಮಾನವೀಯವಾಗಿ ವರ್ತಿಸುತ್ತಿರುವುದು ಅಪ್ರಜಾಸತ್ತಾತ್ಮಕ ನಡೆಯಾಗಿದೆ. ಸರ್ಕಾರ ಈ ಕೂಡಲೇ ಹೋರಾಟಗಾರರ ಜೊತೆ ಸಂವಾದ ನಡೆಸಬೇಕು ಮತ್ತು ನ್ಯಾ.ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಯಲು ಮಾಡುವುದಲ್ಲದೇ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚಿಸಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಸರ್ಕಾರ ಒಳಮೀಸಲಾತಿ ಶಿಫಾರಸ್ಸಿಗೆ ಕಾನೂನು ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹೋರಾಟ ಸಮಿತಿಯ ಮುಖ್ಯಸ್ಥ ಅಂಬಣ್ಣ ಅರೋಲಿಕರ್, “ಈ ಉಪಸಮಿತಿ 48 ಗಂಟೆಗಳಲ್ಲಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ, ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಿ, ಅಂಗೀಕರಿಸಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೆ ಸ್ವಾಗತ. ಅದರೆ ಮತ್ತೆ ಮಾದಿಗರ ಮೂಗಿಗೆ ತುಪ್ಪ ಸವರಿದರೆ ಮಹಾದ್ರೋಹ” ಎಂದಿದ್ದಾರೆ.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...