Homeಮುಖಪುಟಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕಿ ಇಂದಿರಾ ಹೃದಯೇಶ್ ಹೇಳಿದ್ದಾರೆ.

- Advertisement -
- Advertisement -

ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಮ್ಮ ಕ್ಷೇತ್ರವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತರಾಖಂಡದ ಶಾಸಕರಾದ ಉಮೇಶ್ ಶರ್ಮಾ ಕೌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಉತ್ತರಾಖಂಡ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಯಲಾಗಿದೆ. ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧ ಹಲವರು ಪತ್ರ ಸಮರ ನಡೆಸುತ್ತಿದ್ದಾರೆ. ಈ ಸಾಲಿಗೆ ಈಗ ಮತ್ತೊಬ್ಬ ಶಾಸಕ ಸೇರಿದ್ದಾರೆ.

ಉತ್ತರಾಖಂಡದ ವಿಧಾನಸಭೆಯಲ್ಲಿ ಡೆಹ್ರಾಡೂನ್ ಜಿಲ್ಲೆಯ ರಾಯಪುರ ಕ್ಷೇತ್ರವನ್ನು ಪ್ರತಿನಿಧಿಸುವ ಉಮೇಶ್ ಶರ್ಮಾ ಕೌ, ಕಳೆದ ಕೆಲವು ವರ್ಷಗಳಿಂದ ತಮ್ಮ ವಿಧಾನಸಭಾ ವಿಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಇದೇ ರೀತಿ ಚುನಾಯಿತ ಶಾಸಕರನ್ನು ಅಧಿಕಾರಶಾಹಿಗಳು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷದ ಮತ್ತೊಬ್ಬ ಶಾಸಕ ಮತ್ತು ಉತ್ತರಾಖಂಡದ ಮಾಜಿ ಬಿಜೆಪಿ ಮುಖ್ಯಸ್ಥ ಬಿಶನ್ ಸಿಂಗ್ ಚುಫಾಲ್ ಕೂಡ  ಅವರ ಕುಂದುಕೊರತೆಗಳಿಗೆ ಪರಿಹಾರ ಕೋರಿ ನಡ್ಡಾ ಅವರನ್ನು ಭೇಟಿಯಾಗಿದ್ದರು.

ಇನ್ನು ತಮ್ಮ ಕ್ಷೇತ್ರದ ತೊಂದರೆಗಳ ಬಗ್ಗೆ ವಿವರವಾಗಿ ತಿಳಿಸುವ ಉದ್ದೇಶದಿಂದ ನಡ್ಡಾ ಅವರೊಂದಿಗೆ ಸಮಯ ಕೋರಿದ್ದು, ರಾಯ್‌ಪುರದ ನಿರ್ಲಕ್ಷ್ಯದ ಬಗ್ಗೆ ಅವರ ಪಕ್ಷದ ಕಾರ್ಯಕರ್ತರು ತೀವ್ರವಾಗಿ ದುಖಿಃತರಾಗಿದ್ದಾರೆ ಎಂದು ಒತ್ತಿಹೇಳಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಅಭಿವೃದ್ಧಿ ಕೆಲಸ ಮಾಡದ ರಾಜ್ಯ ಸರ್ಕಾರದ ಬಗ್ಗೆ ಬೇಸರವಿದೆ ಎಂದು ತಮ್ಮ ಪತ್ರದಲ್ಲಿ ಉಮೇಶ್ ಶರ್ಮಾ ಕೌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಪತ್ರದ ಸಾರಾಂಶ ಹಂಚಿಕೊಂಡ ಶಾಸಕ ನಾನು ನನ್ನ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಇಮೇಲ್ ಮೂಲಕ ಕಳುಹಿಸಿದ್ದೇನೆ. ಇದು ನಮ್ಮ ಕುಟುಂಬದ ವಿಷಯ. ನಾನು ಮಾಧ್ಯಮದಲ್ಲಿ ಇದರ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮಾತಾಡಿದ್ದಾರೆ.

ವಿಶೇಷವಾಗಿ ರಸ್ತೆಗಳು ಮತ್ತು ಮೊಬೈಲ್ ಫೋನ್ ಸಂಪರ್ಕದ ಬಗ್ಗೆ ನಡ್ಡಾ ಅವರೊಂದಿಗೆ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಚುಫಲ್ ಹೇಳಿದರು. ನಡ್ಡಾ ಅವರು ನನ್ನ ಮಾತುಗಳನ್ನು ಕೇಳಿಸಿಕೊಂಡಿದ್ದಾರೆ. 2022 ರ ಉತ್ತರಾಖಂಡ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಎಲ್ಲಾ ಸದಸ್ಯರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜ್ಯ ಸರ್ಕಾರದಲ್ಲಿ ಸದ್ಯ ಮೂರು ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸಿಎಂ ತಿಳಿಸಿದ್ದರು. ಕೌ ಕೂಡ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಆರೋಪವಿದೆ.

ಇದನ್ನೂ ಓದಿ: ಪ್ರಜಾತಂತ್ರದ ವಿಸ್ತರಣೆ ಮತ್ತು ಧ್ರುವೀಕರಣ: ಚಳವಳಿಗಳ ಗೆಲುವು ಮತ್ತು ಸೋಲು

“ನಾನು ಕ್ಯಾಬಿನೆಟ್‌ನಲ್ಲಿ ಸೇರ್ಪಡೆಗೊಳ್ಳಲು ಬಯಸಿದರೆ, 2017 ರಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾನು ಧ್ವನಿ ಎತ್ತುತ್ತಿದ್ದೆ. ನಾನು ಈಗ ಅದನ್ನು ಏಕೆ ಬಯಸಬೇಕು? ನಾನು ರಾಜ್ಯ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಬಗೆಗಳಲ್ಲಿ ಪಕ್ಷಕ್ಕೆ ಕೊಡುಗೆ ನೀಡಿದ್ದೇನೆ” ಎಂದು ಹೇಳಿದರು.

ನಾನು ನನ್ನ ಕ್ಷೇತ್ರದ ಸಮಸ್ಯೆಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸಿದ್ದೇನೆ. ಇದನ್ನು ನಾನು ಮುಖ್ಯಮಂತ್ರಿಯ ವಿರುದ್ಧದ ಷಡ್ಯಂತ್ರ ಅಥವಾ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಲು ನಾನು ಒತ್ತಡ ಹೇರುತ್ತಿದ್ದೇನೆ ಎಂದು ನೋಡಬಾರದು ಎಂದಿದ್ದಾರೆ.

ಇತ್ತ ಚಂಪಾವತ್ ಜಿಲ್ಲೆಯ ಲೋಹಘಾಟ್‌ನ ಮತ್ತೊಬ್ಬ ಬಿಜೆಪಿ ಶಾಸಕ ಪುರಾನ್ ಸಿಂಗ್ ಫರ್ತ್ಯಾಲ್ ಕೂಡ ರಾಜ್ಯ ಸರ್ಕಾರದ ವಿರುದ್ಧ ಕೆಲವು ವಾರಗಳ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಪತ್ರ ಬರೆದಿದ್ದರು.

ಆದರೆ ಉತ್ತರಾಖಂಡ ರಾಜ್ಯ ಸರ್ಕಾರ ಮಾತ್ರ ಪತ್ರ ವ್ಯವಹಾರವನ್ನು ಕಡೆಗಣಿಸಿದಂತೆ ನಾಟಕವಾಡುತ್ತಾ, ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ. ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ರಾವತ್ ನಾಯಕತ್ವವನ್ನು ಯಾರು ಪ್ರಶ್ನಿಸಿಲ್ಲ ಎಂದು ರಾಜ್ಯ ಉಪಾಧ್ಯಕ್ಷ  ದೇವೇಂದ್ರ ಭಾಸಿನ್ ಹೇಳಿದ್ದಾರೆ.

ಕೆಲ ಕೆಲವು ಶಾಸಕರು ನಡ್ಡಾ ಅವರನ್ನು ಭೇಟಿ ಮಾಡಿದರೆ ಅಥವಾ ತಮ್ಮ ಕ್ಷೇತ್ರಗಳಲ್ಲಿನ ಕೆಲವು ಸಮಸ್ಯೆಗಳ ಬಗ್ಗೆ ಅವರಿಗೆ ಪತ್ರ ಬರೆದಿದ್ದರೆ ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಬಾರದು. ಶಾಸಕರು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೊಂದಿಗೆ ಸಂವಹನ ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ. ಅದರಲ್ಲಿ ಏನು ತಪ್ಪಾಗಿದೆ?  ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು,  ಸಾರ್ವಜನಿಕರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಮತ್ತು ತನ್ನದೇ ಪಕ್ಷದ ಶಾಸಕರನ್ನು ಸಮಾಧಾನಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ.

ವಿಪಕ್ಷ ನಾಯಕಿ ಇಂದಿರಾ ಹೃದಯೇಶ್,  ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ  ಎಂದಿದ್ದಾರೆ. ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಮಾತ್ರ ಇರುವುದರಿಂದ ಅವರು ಚುನಾವಣೆಯಲ್ಲಿ ಸೋಲುವ ಸಾಧ್ಯತೆ ಇದೆ ಎಂದು ಹಲವಾರು ಶಾಸಕರು ಆತಂಕಗೊಳಗಾಗಿದ್ದಾರೆ. ಹಾಗಾಗಿ ಶಾಸಕರು ನಿದ್ರೆಯಿಂದ ಎಚ್ಚರಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ನಿರಾಸಕ್ತಿ ಮತ್ತು ನಿರ್ದಯತೆಗೆ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ:ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಕ್ಕಳನ್ನು ಹೊಂದದೆ ಮೋದಿ, ಯೋಗಿ ನಿರುದ್ಯೋಗ ತಡೆದಿದ್ದಾರೆ ಎಂದ ಬಿಜೆಪಿ ಸಂಸದ!

0
ಯೂಟ್ಯೂಬರ್ ಒಬ್ಬರು ಉತ್ತರ ಪ್ರದೇಶದ ಬಿಜೆಪಿ ಸಂಸದನ ಬಳಿ ನಿರುದ್ಯೋಗ ಸಮಸ್ಯೆಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ವಿಚಿತ್ರವಾದ ಉತ್ತರ ನೀಡುವ ಮೂಲಕ ನಗೆ ಪಾಟಲಿಗೀಡಾಗಿದ್ದಾರೆ. ಯೂಟ್ಯೂಬರ್ ಜೊತೆ ಮಾತನಾಡಿರುವ ಆಝಂಘರ್ ಲೋಕಸಭಾ ಕ್ಷೇತ್ರದ ಬಿಜೆಪಿ...