Homeಮುಖಪುಟಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ

ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ

- Advertisement -
- Advertisement -

ಫೆಬ್ರವರಿಯಲ್ಲಿ ನಡೆದ ಪೌರತ್ವ ವಿರೋಧಿ ಕಾನೂನು ಪ್ರತಿಭಟನೆಯಲ್ಲಿ ಭಾಗವಹಿಸಿದ ಇಬ್ಬರು ಜವಾಹಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ.

ದೆಹಲಿಯ ಜಾಫ್ರಾಬಾದ್‌ನಲ್ಲಿ ಸಿಎಎ ವಿರೋಧಿ ಧರಣಿಯಲ್ಲಿ ಭಾಗವಹಿಸಿದ್ದ ಜೆಎನ್‌ಯು ದ ಇಬ್ಬರು ವಿದ್ಯಾರ್ಥಿನಿಯರನ್ನು ಬಂಧಿಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದದ ಪ್ರತಿಭಟನೆಯ ನಂತರ ನಡೆದ 50 ಕ್ಕೂ ಹೆಚ್ಚು ಜನರು ಹತ್ಯೆಗೊಳಗಾದ ಘರ್ಷಣೆಯ ಮೂರು ತಿಂಗಳ ನಂತರ ಈ ಬಂಧನ ನಡೆದಿದೆ.

ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ನಂತರ ಬಿಜೆಪಿಯ ಕಪಿಲ್ ಮಿಶ್ರಾ ಅವರಿಂದ ಪೌರತ್ವ ತಿದ್ದುಪಡಿ ಕಾನೂನಿನ ಪರ ಮೆರವಣಿಗೆ ನಡೆದು ಅಲ್ಲಿ ಕಪಿಲ್ ಮಿಶ್ರ ಗಲಭೆಗೆ ಪ್ರೇರೇಪಿಸುವ ಭಾಷಣವನ್ನು ಪೊಲೀಸರ ಸಮ್ಮುಖದಲ್ಲಿ ಮಾಡಿದ್ದರು. ಇದಾಗಿ ಒಂದು ದಿನದ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘರ್ಷಣೆಗಳು ನಡೆದವು.

ಬಂಧನಕ್ಕೊಳಗಾದ ಇಬ್ಬರು ವಿದ್ಯಾರ್ಥಿನಿಯರನ್ನು ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಎಂದು ಗುರುತಿಸಲಾಗಿದೆ. ಇವರು ದೆಹಲಿ ಮೂಲದ ಪಿಂಜ್ರಾ ಟೋಡ್ ಗುಂಪಿಗೆ ಸೇರಿದವರಾಗಿದ್ದು, ಈ ಗುಂಪು ಕಾಲೇಜು ವಿದ್ಯಾರ್ಥಿನಿಯರ ಹಕ್ಕುಗಳಿಗಾಗಿ ಕೆಲಸ ಮಾಡುತ್ತದೆ.

ಐಪಿಸಿ  ಸೆಕ್ಷನ್ 186 ಮತ್ತು 353 ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಫೆಬ್ರವರಿಯಲ್ಲಿ ಅವರು ಜಾಫ್ರಾಬಾದ್ ಮೆಟ್ರೋ ನಿಲ್ದಾಣದಲ್ಲಿ ನಡೆದ ಸಿಎಎ ವಿರುದ್ದದ ಮಹಿಳಾ ಪ್ರತಿಭಟನಾಕಾರರ ಸಭೆಯಲ್ಲಿ ಇವರು ಭಾಗವಹಿಸಿದ್ದರು ಎನ್ನಲಾಗಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ದೆಹಲಿ ಹಿಂಸಾಚಾರದಲ್ಲಿ ಸಂಚು ರೂಪಿಸಿದ್ದಾರೆ ಎಂದು ಆರೊಪಿಸಿ ಹಲವಾರು ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಕಳೆದ ಒಂದು ತಿಂಗಳಲ್ಲಿ ದೆಹಲಿ ಪೊಲೀಸರು ಬಂಧಿಸುತ್ತಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು, ಆದರೆ ಕೊರೊನಾ ವೈರಸ್ ಕಾರಣದಿಂದಾಗಿ ಈ ಎಲ್ಲಾ ಆಂದೋಲನ ಸ್ಥಳಗಳನ್ನು ತೆರವುಗೊಳಿಸಲಾಯಿತು. ಸಿಎಎ ವಿರೋಧಿ ಪ್ರತಿಭಟನೆಯ ಹೃದಯವೆಂದು ಕರೆಯುತ್ತಿದ್ದ ದೆಹಲಿಯ ಶಾಹೀನ್ ಬಾಗ್ ಅನ್ನು ಮಾರ್ಚ್ 24 ರಂದು 101 ದಿನಗಳ ನಂತರ ತೆರವುಗೊಳಿಸಲಾಯಿತು.


ಓದಿ: ಆನಂದ್‌ ತೇಲ್‌ತುಂಬ್ಡೆ; ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...