Homeಮುಖಪುಟರಾತ್ರಿ ಕರ್ಫ್ಯೂ ಮುಂದುವರಿಕೆ, ಏ.20ರಂದು ಮುಂದಿನ ಸಭೆ: ಬಿ.ಎಸ್ ಯಡಿಯೂರಪ್ಪ

ರಾತ್ರಿ ಕರ್ಫ್ಯೂ ಮುಂದುವರಿಕೆ, ಏ.20ರಂದು ಮುಂದಿನ ಸಭೆ: ಬಿ.ಎಸ್ ಯಡಿಯೂರಪ್ಪ

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ನಿಭಾಯಿಸುವುದರ ಕುರಿತು ಅಧಿಕಾರಿಗಳು ಮತ್ತು ಸಚಿವರೊಂದಿಗೆ ದಿಢೀರ್ ಸಭೆ ನಡೆಸಿದ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿನ ರಾತ್ರಿ ಕರ್ಫ್ಯೂ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅವರು ಇಂದು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

“ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಮಿತಿ ಮೀರುತ್ತಿರುವುದರಿಂದ ಅಧಿಕಾರಿಗಳಿಂದ ರಾಜ್ಯದ ಪರಿಸ್ಥಿತಿಯ ಬಗ್ಗೆ ಪೂರ್ಣ ಮಾಹಿತಿ ಪಡೆದಿದ್ದೇನೆ. ಇನ್ನು ಯಾವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಹೇರಬೇಕೆಂದು ಯೋಚಿಸುತ್ತೇವೆ. ಸದ್ಯಕ್ಕೆ ಯಾವುದೇ ಮಹತ್ವದ ಬದಲಾವಣೆಗಳಿರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಸಲಹೆ ಮತ್ತು ಇತರ ರಾಜ್ಯಗಳ ನಡೆ ಅನುಸರಿಸಿ ಏಪ್ರಿಲ್ 20 ರಂದು ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ದೆಹಲಿ ಮತ್ತು ಮಹಾರಾಷ್ಟ್ರದ ಕ್ರಮಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ರಾಜ್ಯವನ್ನು ಇತರ ರಾಜ್ಯಗಳೊಂದಿಗೆ ಹೋಲಿಸಬೇಡಿ. ಪರಿಸ್ಥಿತಿಗಳು ವಿಭಿನ್ನವಾಗಿವೆ. ನಮ್ಮ ರಾಜ್ಯದಲ್ಲಿ ನಮ್ಮದೇಯಾದ ಕಾರಣಗಳಿವೆ. ಹಾಗಾಗಿ ಏಪ್ರಿಲ್ 20ರವರೆಗೆ ಯಾವುದೇ ಬದಲಾವಣೆಗಳಿಲ್ಲ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...