Homeಮುಖಪುಟನಿರಂತರ 15 ಗಂಟೆಗಳ ವಿಚಾರಣೆ; ಇಡಿ ವಿರುದ್ಧ ಸುಪ್ರೀಂಕೋರ್ಟ್ ಕಿಡಿ

ನಿರಂತರ 15 ಗಂಟೆಗಳ ವಿಚಾರಣೆ; ಇಡಿ ವಿರುದ್ಧ ಸುಪ್ರೀಂಕೋರ್ಟ್ ಕಿಡಿ

- Advertisement -
- Advertisement -

ಮಧ್ಯರಾತ್ರಿ ಕಳೆದರೂ ಸುಮಾರು 15 ಗಂಟೆಗಳ ಕಾಲ ಕಾಂಗ್ರೆಸ್‌ ನಾಯಕರೊಬ್ಬರನ್ನು ನಿರಂತರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ(ಇಡಿ)ದ ನಡೆಯನ್ನು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅದರ ತನಿಖಾ ವಿಧಾನದ ಬಗ್ಗೆ ತೀವ್ರ ಕಳವಳಗಳನ್ನು ವ್ಯಕ್ತಪಡಿಸಿದೆ. ಹೇಳಿಕೆ ನೀಡುವಂತೆ ಇಡಿ ವ್ಯಕ್ತಿಯೊಬ್ಬರ ಮೇಲೆ ಅಕ್ಷರಶಃ ಒತ್ತಡವನ್ನು ಹೇರಿದ್ದು ಆಘಾತಕಾರಿಯಾಗಿದೆ ಎಂದು ದ್ವಿಸದಸ್ಯರ ಪೀಠವು ಗುರುವಾರ ಹೇಳಿದೆ. ನಿರಂತರ 15 ಗಂಟೆಗಳ

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಎ.ಜಿ.ಮಸಿಹ್ ಅವರ ಪೀಠವು, ಕಾನೂನುಬಾಹಿರ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಹರಿಯಾಣದ ಮಾಜಿ ಕಾಂಗ್ರೆಸ್ ಶಾಸಕ ಸುರೇಂದ್ರ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿದ್ದನ್ನು ಎತ್ತಿ ಹಿಡಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಜುಲೈನಲ್ಲಿ ಸುಮಾರು 15 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಇಡಿ ಬಳಿಕ ಮಧ್ಯರಾತ್ರಿ 1.40ಕ್ಕೆ ಪನ್ವಾರ್‌ ಅವರನ್ನು ಬಂಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪನ್ನು ವಿರೋಧಿಸಿ ಇಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿರಂತರ 15 ಗಂಟೆಗಳ

ಇಡಿ ಪರ ವಕೀಲ ರೆಹೆಬ್ ಹುಸೇನ್ ಅವರು, ಹೈಕೋರ್ಟ್ ಪನ್ವಾರ್‌ರನ್ನು 14 ಗಂಟೆ 40 ನಿಮಿಷಗಳ ಕಾಲ ನಿರಂತರವಾಗಿ ಪ್ರಶ್ನಿಸಲಾಗಿತ್ತು ಎಂದು ತನ್ನ ಆದೇಶದಲ್ಲಿ ತಪ್ಪಾಗಿ ದಾಖಲಿಸಿದೆ. ವಿಚಾರಣೆ ಸಂದರ್ಭದಲ್ಲಿ ಅವರಿಗೆ ಭೋಜನ ವಿರಾಮವನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ. ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಜನರನ್ನು ನಸುಕಿನ ವೇಳೆಯಲ್ಲಿ ವಿಚಾರಣೆಗೆ ಒಳಪಡಿಸದಿರಲು ಇಡಿ ಈಗಾಗಲೇ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಸುಪ್ರಿಂ ಕೋರ್ಟ್‌ಗೆ ಮನವರಿಕೆ ಮಾಡಿದ್ದಾರೆ.

ಆದರೆ, ಇಡಿ ವಾದವನ್ನು ತಿರಸ್ಕರಿಸಿದ ಪೀಠವು, ವ್ಯಕ್ತಿಗೆ ವಿರಾಮವನ್ನು ನೀಡದೆ ಇಷ್ಟೊಂದು ದೀರ್ಘ ಅವಧಿಗೆ ವಿಚಾರಣೆ ನಡೆಸುವ ಮೂಲಕ ಚಿತ್ರಹಿಂಸೆ ನೀಡಲು ಹೇಗೆ ಸಾಧ್ಯ ಎಂದು ತನಿಖಾ ಸಂಸ್ಥೆಯನ್ನು ಪ್ರಶ್ನಿಸಿದೆ. ಆದಾಗ್ಯೂ ಹೈಕೋರ್ಟ್ ಆದೇಶವು ಜಾಮೀನು ಮಂಜೂರು ಮಾಡುವ ವಿಷಯಕ್ಕೆ ಮಾತ್ರ ಸಂಬಂಧಿಸಿವೆಯೇ ಹೊರತು ಪ್ರಕರಣದ ಅರ್ಹತೆಗಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಕಳೆದ ವರ್ಷ ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ಹಾಜರಾಗಿದ್ದ ಪನ್ವಾರ್‌ ಅವರನ್ನು ಜುಲೈ 21ರ ಮಧ್ಯರಾತ್ರಿ 1.40 ಗಂಟೆಯವರಗೆ ನಿರಂತರವಾಗಿ ವಿಚಾರಣೆ ನಡೆಸಿದ್ದು ತನಿಖಾ ಸಂಸ್ಥೆಯ ಅಮಾನವೀಯ ನಡೆಯಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಹಾಗೆಯೇ ಇಡಿ ತನ್ನ ತನಿಖಾ ವಿಧಾನವನ್ನು ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ನಿರ್ದೇಶನ ನೀಡಿತ್ತು.

ಇದನ್ನೂಓದಿ: ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ವಿರೋಧ; ಬೆಂಕಿ ಹಚ್ಚಿಕೊಂಡ ಪ್ರತಿಭಟನಾಕಾರರು

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ವಿರೋಧ; ಬೆಂಕಿ ಹಚ್ಚಿಕೊಂಡ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...