Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

- Advertisement -
- Advertisement -

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 36 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 104ರೂ ದಾಟುತ್ತದೆ. ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,260ರೂ ತಗುಲುತ್ತಿದೆ (105-12ಲೀ). ಅಂದರೆ 378ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 756ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಕಳೆದ ಹನ್ನೊಂದು ವರ್ಷಗಳ ಸರಾಸರಿ ದರ (ದೆಹಲಿಯಲ್ಲಿ ಪ್ರತಿ ಲೀಟರ್‌ಗೆ)

ಓಲಾ ಉಬರ್ ಚಾಲಕರ ದುಸ್ಥಿತಿ

ಕೊರೊನಾ ಬರುವ ಮೊದಲು ಡೀಸೆಲ್ ಲೀಟರ್‌ಗೆ ಸುಮಾರು 60ರೂ ಇತ್ತು. 100% ಪ್ಯಾಸೆಂಜರ್‌ಗಳು ಸಿಗುತ್ತಿದ್ದರು. ಪ್ರತಿ ದಿನ, ಶ್ರಮವಹಿಸಿ ಕೆಲಸ ಮಾಡಿ, 1000 ರುಪಾಯಿಗೆ ಡೀಸೆಲ್ ಹಾಕಿಸಿದರೆ ಎಲ್ಲಾ ಖರ್ಚು ಕಳೆದು ಸರಾಸರಿ 1000ರೂನಿಂದ 2000ದವರೆಗೂ ನಮ್ಮ ಡ್ರೈವರ್‌ಗಳು ಲಾಭ ಗಳಿಸುತ್ತಿದ್ದರು. ಈಗ ಡೀಸೆಲ್ ಲೀಟರ್‌ಗೆ 95ರೂ ತಲುಪಿದೆ. ಆದರೆ ಹಲವು ಕಾರಣಗಳಿಂದ 25% ಪ್ಯಾಸೆಂಜರ್‌ಗಳೂ ಸಿಗುತ್ತಿಲ್ಲ. ಈಗ ದಿನವೆಲ್ಲಾ ದುಡಿದರೂ ಡೀಸೆಲ್ ಮತ್ತಿತರ ಎಲ್ಲಾ ಖರ್ಚು ಕಳೆದು 300-500ರೂ ಉಳಿಸುವುದೇ ಕಷ್ಟವಾಗುತ್ತಿದೆ. ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ವಾಹನ ಲೋನ್ ಕಟ್ಟಿ ನಮ್ಮ ಕುಟುಂಬವನ್ನು ಸಾಕುವುದು ಹೇಗೆ ಎನ್ನುತ್ತಾರೆ ಓಲಾ-ಉಬರ್ ವಾಹನ ಚಾಲಕರ ಅಸೋಸಿಯೇಷನ್ ಅಧ್ಯಕ್ಷರಾದ ತನ್ವೀರ್.

ನಾವು ಅಂದು ದುಡಿದು ಅಂದು ಬದುಕುವ ಸ್ಥಿತಿಯವರು. ಆದರೆ ಕೊರೊನಾ ಲಾಕ್‌ಡೌನ್ ನಂತರ ಚಾಲಕರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಹಿಂದೆ ಕಾರು ಓನರ್ ಅಂದ್ರೆ ಗೌರವ ಇತ್ತು. ಈಗ ನಮ್ಮ ಕಾರು ಕೊಂಡುಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಇತ್ತ ಬಾಡಿಗೆ ಸಹ ಸಿಗುತ್ತಿಲ್ಲ. ಇನ್ಷುರೆನ್ಸ್ ಹಣ ಕಟ್ಟಲಾಗದೆ, ಲೋನ್ ಕಟ್ಟಲಾಗದೇ ಒದ್ದಾಡುತ್ತಿದ್ದೇವೆ. ನಾವು ಸ್ವಯಂ ಉದ್ಯೋಗ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ನಿವಾರಿಸುತ್ತಿದ್ದೇವೆ ಎಂಬ ಹೆಮ್ಮೆಯಿತ್ತು. ಬೆಂಗಳೂರಿನಲ್ಲಿ 1 ಲಕ್ಷದಷ್ಟು ಕಾರುಗಳಿದ್ದವು. ಈಗ 30,000 ಇದ್ದರೆ ಹೆಚ್ಚು. ಅರ್ಧ ಸೀಜ್ ಆಗಿವೆ, ಇನ್ನರ್ಧ ಹಳ್ಳಿಗಳಲ್ಲಿವೆ. ಆಟೋಗಳು 50% ನಿಂತು ಹೋಗಿವೆ. ಕೆಲವರು ಹೊಟೆಲ್‌ಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಬೀದಿಗಳಲ್ಲಿ ಮಾಸ್ಕ್ ಮಾರುತ್ತಿದ್ದಾರೆ. ಡೀಸೆಲ್ ದರ ಕಡಿಮೆ ಇದ್ದರೆ ಬಿಸಿನೆಸ್ ಕಡಿಮೆ ಇದ್ದರೂ ಹೇಗಾದರೂ ಬದುಕಿಕೊಳ್ಳಬಹುದಿತ್ತು. ಆದರೆ ಈಗ ದುಡಿದಿದ್ದರಲ್ಲಿ ಮುಕ್ಕಾಲು ಪಾಲು ಡೀಸೆಲ್‌ಗೆ ಸುರಿಯಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

– ಮುತ್ತುರಾಜು


ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...