ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹಚರರೇ ಕಾರಣ ಎಂದು ಆರೋಪ ಕೇಳಿ ಬಂದ ಹಿನ್ನಲೆ ಕುರಿತು ರಾಜ್ಯ ಸರ್ಕಾರವು ಪ್ರಕಣವನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆಗೆ ಆದೇಶಿಸಿದೆ ಎಂದು. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಪ್ರಿಯಾಂಕ್ ವಿರುದ್ಧ ಅನಗತ್ಯ ಆರೋಪ ಮಾಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.
“ಗುತ್ತಿಗೆದಾರ ಬರೆದಿದ್ದ ಡೆತ್ ನೋಟಿನಲ್ಲಿ ಪ್ರಿಯಾಂಕ್ ಹೆಸರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಅದರಲ್ಲಿ ಪ್ರಿಯಾಂಕ್ ಹೆಸರಿದೆ ಎಂದು ಆರೋಪಿಸುತ್ತಿದ್ದಾರೆ. ಸತ್ಯಾಂಶ ಹೊರಬರಲು ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ತನಿಖಾ ವರದಿಗಾಗಿ ಕಾಯೋಣ,” ಎಂದು ಪರಮೇಶ್ವರ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್ ಪಾಂಚಾಳ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರಿಯಾಂಕ್ ರಾಜೀನಾಮೆ ನೀಡುವ ಅಗತ್ಯವಿಲ್ಲ. ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲು ಸಾಧ್ಯವಿಲ್ಲ. ನಮ್ಮ ಸಿಐಡಿ ಇಲಾಖೆಯು ಪ್ರಕರಣವನ್ನು ತನಿಖೆ ಮಾಡಲು ಮತ್ತು ಸತ್ಯವನ್ನು ಹೊರತರಲು ಸಾಕಷ್ಟು ಸಮರ್ಥವಾಗಿದೆ. ಸಿಐಡಿ ಹಲವು ಪ್ರಕರಣಗಳ ತನಿಖೆ ನಡೆಸಿದೆ. ಬಿಜೆಪಿ ನಾಯಕರು ಯಾವುದಾದರೂ ರಚನಾತ್ಮಕ ಸಲಹೆಗಳು ಅಥವಾ ನಿರ್ದೇಶನಗಳನ್ನು ನೀಡಿದರೆ, ನಾವು ಅವುಗಳನ್ನು ಪರಿಗಣಿಸುತ್ತೇವೆ. ಆದರೆ ಅವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಏತನ್ಮಧ್ಯೆ, ತನಿಖೆ ಪೂರ್ಣಗೊಳ್ಳುವ ಮೊದಲೇ ಪರಮೇಶ್ವರ ಅವರು ಪ್ರಕರಣದ ಬಗ್ಗೆ ನಿಲುವು ತಳೆದಿದ್ದಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಪಾಂಚಾಳ ಕುಟುಂಬದೊಂದಿಗೆ ನಿಲ್ಲುವ ಬದಲು ಪರಮೇಶ್ವರ ಅವರು ಪ್ರಿಯಾಂಕ್‌ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಪ್ರಿಯಾಂಕ್ ಸಹಚರ ಎಂದು ಹೇಳಲಾದ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೌನ್ಸಿಲರ್ ರಾಜು ಕಪನೂರ ಅವರು 1 ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಿದ್ದರು ಎಂದು ಗುತ್ತಿಗೆದಾರ ಪಾಂಚಾಳ ಅವರು ಗುರುವಾರ ತಮ್ಮ ಡೆತ್ ನೋಟ್‌ನಲ್ಲಿ ತಿಳಿಸಿದ್ದಾರೆ.
ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ನಾಯಕರು ತೀವ್ರವಾಗಿ ಆಗ್ರಹಿಸುತ್ತಿದ್ದು, ಈ ನಡುವೆ ಸಚಿವ ಪ್ರಿಯಾಂಕ್ ಅವರು ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗುತ್ತಿಗೆದಾರನ ಆತ್ಮಹತ್ಯೆಯ ಬಗ್ಗೆ ವಿವರಿಸಿದ್ದಾರೆ. ಪ್ರಕರಣವನ್ನು ಸ್ವತಂತ್ರ ಏಜೆನ್ಸಿಗೆ ತನಿಖೆಗೆ ಒಪ್ಪಿಸುವಂತೆ ಪ್ರಿಯಾಂಕ್ ಅವರು ಸಿಎಂ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ
ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ


