Homeಕರ್ನಾಟಕಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗುತ್ತಾರೆ.

- Advertisement -
- Advertisement -

ಕರ್ನಾಟಕದ 6 ಸಾವಿರ ಗ್ರಾಮ ಪಂಚಾಯತ್‌‌ಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿದ್ದ ಹಿನ್ನೆಲೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ತಿಳಿಸಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಈ ವಿಷಯದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ಇಲ್ಲವಾದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ. ಆದರೆ ಒಂದು ವೇಳೆ ವಿರೋಧಿ ಅಭ್ಯರ್ಥಿಗಳು ಈ ಬಗ್ಗೆ ಮಾಹಿತಿಯನ್ನು ಸೂಕ್ತ ದೃಢೀಕರಣದೊಂದಿಗೆ ನೀಡಿದಲ್ಲಿ ಕ್ರಮತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.

ಚುನಾವಣಾ ಆಯೋಗ ಗ್ರಾಮ ಪಂಚಾಯತ್ ಚುನಾವಣೆ ಕುರಿತು ಕೆಲವು ಸ್ಪಷ್ಟೀಕರಣಗಳನ್ನು ನೀಡಿದೆ. ಜೊತೆಗೆ ಇವುಗಳ ಕುರಿತು ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಗಂಡ ಸರ್ಕಾರಿ ನೌಕರನಾಗಿದ್ದರೆ ಹೆಂಡತಿ ಚುನಾವಣೆಗೆ ಸ್ಪರ್ಧಿಸಬಹುದು. ಅದೇ ರೀತಿ ಹೆಂಡತಿ ಸರ್ಕಾರಿ ನೌಕರಳಾಗಿದ್ದಲ್ಲಿ ಗಂಡ ಕೂಡ ಸ್ಪರ್ಧೆ ಮಾಡಬಹುದಾಗಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

ಚುನಾವಣೆಗೆ ಸಾಮಾನ್ಯ ವರ್ಗಕ್ಕೆ 200 ರೂಪಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 100 ರೂಪಾಯಿ ಠೇವಣಿ ನಿಗದಿ ಮಾಡಲಾಗಿದೆ. ಇನ್ನು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಹಾಗೂ ಸೂಚಕ ಗ್ರಾಮ ಪಂಚಾಯತ್ ಮತದಾರನಾಗಿರಬೇಕು.

ಅಭ್ಯರ್ಥಿಯ ನಾಮಪತ್ರ ವಾಪಸ್ಸು ಪಡೆಯಲು ಸೂಚಕರ ಬದಲಾಗಿ ಬೇರೊಬ್ಬರನ್ನು ಕಳುಹಿಸಿದರೆ ಅದನ್ನು ಪರಿಗಣಿಸಬೇಕಿಲ್ಲ. ಅಭ್ಯರ್ಥಿ, ಸೂಚಕ ಅಥವಾ ಅವನ ಏಜೆಂಟನ ಮುಖಾಂತರ ಮಾತ್ರ ನಾಮಪತ್ರ ಹಿಂತೆಗೆದುಕೊಳ್ಳಬಹುದು. ಒಬ್ಬ ಅಭ್ಯರ್ಥಿಗೆ ಸೂಚಕರಾಗಿರುವವರು ಸಹ ಅಭ್ಯರ್ಥಿಯಾಗಲು ಅವಕಾಶವಿದೆ. ಸೂಚಕನು ಇಷ್ಟೇ ಅಭ್ಯರ್ಥಿಗಳಿಗೆ ಸೂಚಕರಾಗಿರಬೇಕೆಂಬ ನಿಯಮವಿಲ್ಲ ಎಂದು ಆಯೋಗ ಹೇಳಿದೆ.


ಇದನ್ನೂ ಓದಿ: 3 ವಾರಗಳೊಳಗೆ ಗ್ರಾಮ ಪಂಚಾಯತಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುಂತೆ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....