Homeಚಳವಳಿವಿವಾದಾತ್ಮಕ ಕೃಷಿ ಕಾನೂನು: ರೈತರನ್ನು 2 ನೇ ಸುತ್ತಿನ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

ವಿವಾದಾತ್ಮಕ ಕೃಷಿ ಕಾನೂನು: ರೈತರನ್ನು 2 ನೇ ಸುತ್ತಿನ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

"ಸಾವಿರಾರು ರೈತರು ಮತ್ತು ಕೃಷಿ ಕಾರ್ಮಿಕರ ಒಕ್ಕೂಟಗಳು ಹಾಗೂ 500 ಕ್ಕೂ ಹೆಚ್ಚು ರೈತ ಸಂಘಟನೆಗಳು ನವೆಂಬರ್ 26-27ರಂದು ದೆಹಲಿ ಚಲೋ ನಡೆಸಲು ನಿರ್ಧರಿಸಿದ್ದಾರೆ"

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದನ್ನು ತಣಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಹಿಂದೆ ರೈತರನ್ನು ಮಾತುಕತೆಗೆ ಕರೆದಿತ್ತು. ಆದರೆ ನವೆಂಬರ್ 13 ರಂದು ನಡೆದ ಈ ಸಭೆಯು ವಿಫಲಾಗಿತ್ತು. ಹಾಗಾಗಿ ಡಿಸಂಬರ್ 3 ರಂದು ಮತ್ತೊಮ್ಮೆ ಎರಡನೇ ಸುತ್ತಿನ ಸಭೆಗೆ ರೈತಮುಖಂಡರು ಮತ್ತು ರೈತ ಸಂಘಗಳನ್ನು ಆಹ್ವಾನಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪಂಜಾಬ್‌ನಲ್ಲಿ ನಡೆಯುತ್ತಿದ್ದ ಸುಮಾರು ಎರಡು ತಿಂಗಳ ಕಾಲದ ನಿರಂತರ ರೈಲು ಮುತ್ತಿಗೆಯ ರೈತರ ‘ರೈಲ್‌ ರೋಕೊ’ ಆಂದೋಲನವನ್ನು ಸೋಮವಾರ ಹಿಂತೆಗೆದುಕೊಂಡರು. 15 ದಿನಗಳ ಕಾಲ ಗಡುವು ನೀಡಿ ಕೇವಲ ಸರಕು ರೈಲುಗಳನ್ನು ಮಾತ್ರ ಪುನರಾರಂಭಿಸಲು ರೈತ ಮುಖಂಡರು ಒಪ್ಪಿಗೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ ಸಂಘಟನೆಗಳು!

ಪಿಟಿಐ ಜೊತೆ ಮಾತನಾಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, “ಡಿಸೆಂಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ವಿಜಯನ್ ಭವನದಲ್ಲಿ ಎರಡನೇ ಸುತ್ತಿನ ಚರ್ಚೆಗೆ ನಾವು 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಕರೆದಿದ್ದೇವೆ” ಎಂದು ಹೇಳಿದರು.

ಕಾರ್ಯದರ್ಶಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪರವಾಗಿ ರೈತ ಸಂಘಟನೆಗಳಿಗೆ ಆಹ್ವಾನವನ್ನು ಕಳುಹಿಸಿದ್ದಾರೆ. ಸಭೆಯಲ್ಲಿ ಆಹಾರ ಸಚಿವ ಪಿಯೂಷ್ ಗೋಯಲ್ ಕೂಡ ಹಾಜರಾಗುವ ನಿರೀಕ್ಷೆಯಿದ್ದು, ಮಾತುಕತೆಗೆ ಪಂಜಾಬ್ ಸರ್ಕಾರದ ಆಹಾರ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ನವೆಂಬರ್ 13 ರಂದು ಭಾರತ ಸರ್ಕಾರದೊಂದಿಗೆ ಪಂಜಾಬ್‌ನ ರೈತ ಮುಖಂಡರ ಸತತ ಏಳು ಗಂಟೆಗಳ ಸಭೆ ನಡೆಸಿದರು. ರೈತ ಮುಖಂಡರು ತಮ್ಮ ಬೇಡಿಕೆಗಳನ್ನು ಸ್ಪಷ್ಟವಾಗಿ ಮಂಡಿಸಿದರೂ ಸಹ ಸರ್ಕಾರದಿಂದ ರೈತರಿಗೆ ಯಾವುದೇ ಖಚಿತ ಭರವಸೆ ದೊರೆತಿರಲಿಲ್ಲ.

ಸರ್ಕಾರವು ತನ್ನ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲು ಅಥವಾ ಎಲ್ಲಾ ರೈತರಿಗೆ ಮತ್ತು ಎಲ್ಲಾ ಕೃಷಿ ಉತ್ಪನ್ನಗಳಿಗೆ ಕಾನೂನುಬದ್ಧವಾಗಿ ಖಾತರಿಪಡಿಸಿದ ಕನಿಷ್ಟ ಬೆಂಬಲ ಬೆಲೆ ನೀಡಲು ಬದ್ಧವಾಗಿಲ್ಲ. ಸಭೆಯಲ್ಲಿ ರೈತ ಮುಖಂಡರು ಎತ್ತಿದ ಸಮಸ್ಯೆಗಳಿಗೆ ಸರ್ಕಾರ ಯಾವುದೇ ಪೂರ್ವಭಾವಿ ಅಥವಾ ರಚನಾತ್ಮಕ ಪ್ರತಿಕ್ರಿಯೆಗಳನ್ನು ನೀಡಿಲ್ಲ.

ಹಾಗಾಗಿ ಎಐಕೆಎಸ್‌ಸಿಸಿ, ರಾಷ್ಟ್ರೀಯ ಕಿಸಾನ್ ಮಹಾಸಂಗ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ ಹಲವಾರು ರೈತರು ಮತ್ತು ಕೃಷಿ ಕಾರ್ಮಿಕರ ಒಕ್ಕೂಟಗಳು ಮತ್ತು 500 ಕ್ಕೂ ಹೆಚ್ಚು ರೈತ ಸಂಘಟನೆಗಳು ನವೆಂಬರ್ 26-27ರಂದು ದೆಹಲಿ ಚಲೋ ನಡೆಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ರೈತರ ಆದಾಯ ಡಬಲ್ ಆಗಲಿಲ್ಲ. ಬದಲಿಗೆ ರೈತರ ಉತ್ಪಾದನಾ ವೆಚ್ಚ ಮಾತ್ರ ಡಬಲ್ ಆಗಿದೆ’

ದೇಶದ 500 ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾದ ಎಐಕೆಎಸ್‌ಸಿಸಿ ಅಕ್ಟೋಬರ್ 27 ರಂದೇ ನವದೆಹಲಿಯ ಗುರುದ್ವಾರ ರಾಕಬ್‌ಗಂಜ್‌ನಲ್ಲಿ ಸಭೆ ಸೇರಿ ಹೋರಾಟವನ್ನು ತೀವ್ರಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು ಎಂದು ಎಐಕೆಎಸ್‌ಸಿಸಿ ಮಾಧ್ಯಮ ಕಾರ್ಯದರ್ಶಿ ಅಶುತೋಷ್ ತಿಳಿಸಿದ್ದಾರೆ.


ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...