Homeಮುಖಪುಟವಿವಾದಿತ ಮತಾಂತರ ನಿಷೇಧ ಮಸೂದೆ ಮಂಡನೆ, ನಾಳೆ ಚರ್ಚೆ

ವಿವಾದಿತ ಮತಾಂತರ ನಿಷೇಧ ಮಸೂದೆ ಮಂಡನೆ, ನಾಳೆ ಚರ್ಚೆ

- Advertisement -
- Advertisement -

ಭಾರೀ ವಿರೋಧದ ನಡುವೆಯೂ ವಿವಾದಿತ ಮತಾಂತರ ನಿಷೇಧ ಮಸೂದೆಯನ್ನು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣ ವಿಧೇಯಕ, 2021 ಹೆಸರಿನಲ್ಲಿ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಗೃಹ ಸಚಿವ ಆರಗ ಜ್ಞಾನೇಂದ್ರವರು ಭಾರೀ ಗದ್ದಲ, ವಿರೋಧದ ನಡುವೆ ಸದನದಲ್ಲಿ ಮಂಡಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಸೂದೆ ಪ್ರತಿಯನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸದಸ್ಯರು ಮಸೂದೆ ವಿರೋಧಿಸಿ ಸದನದಿಂದ ಹೊರನಡೆದಿದ್ದಾರೆ. ಈ ಕುರಿತು ನಾಳೆ ಚರ್ಚೆ ನಡೆಸುತ್ತೇವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಚರ್ಚೆಗೆ ಸಂಪೂರ್ಣ ಅವಕಾಶವಿದೆ. ವಿಧೇಯಕವನ್ನು ಸದನದಲ್ಲಿ ಮಂಡಿಸಿದಾಗ ಪ್ರತಿಪಕ್ಷಗಳು ಸದನದಲ್ಲಿ ಇರಲಿಲ್ಲ. ಇದು ಸರ್ಕಾರದ ತಪ್ಪಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಒತ್ತಾಯದ, ಬಲವಂತದ ಮತ್ತು ಆಮೀಷದ ಮತಾಂತರವನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆ ತರಲಾಗುತ್ತಿದೆ ಎಂದು ಬಿಜೆಪಿ ಹೇಳಿದೆ. ಆದರೆ ವಿಪಕ್ಷಗಳು ಸೇರಿದಂತೆ ಸಾವಿರಾರು ಸಂಘಟನೆಗಳು ಈ ಕಾಯ್ದೆಯನ್ನು ವಿರೋಧಿಸಿವೆ. ಇದು ಸಂವಿಧಾನದ ಅರ್ಟಿಕಲ್ 25 ರ ಆಶಯಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಸೂದೆಯನ್ನು ಈ ಕೆಳಗೆ ಓದಬಹುದು.

ಇಂದು ಜಾರ್ಖಂಡ್ ನ ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರವು ಇಂದು ಗುಂಪು ಹತ್ಯೆ, ಗುಂಪು ಥಳಿತ (ಮಾಬ್ ಲಿಂಚಿಂಗ್) ತಡೆಯುವ ಮಸೂದೆಯನ್ನು ಮಂಡಿಸಿದೆ.


ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...