Homeಮುಖಪುಟವಿವಾದಿತ ದೆಹಲಿ ಸೇವಾ ಮಸೂದೆ ಅಂಗೀಕಾರ: ಸಭಾತ್ಯಾಗ ಮಾಡಿದ INDIA ಸದಸ್ಯರು

ವಿವಾದಿತ ದೆಹಲಿ ಸೇವಾ ಮಸೂದೆ ಅಂಗೀಕಾರ: ಸಭಾತ್ಯಾಗ ಮಾಡಿದ INDIA ಸದಸ್ಯರು

- Advertisement -
- Advertisement -

ದೆಹಲಿಯ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಅಧಿಕಾರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಡಿಸಿದ ರಾಷ್ಟ್ರ ರಾಜಧಾನಿ ಪ್ರದೇಶ ದಹಲಿ, ಸರ್ಕಾರದ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಗುರುವಾರ ಅಂಗಿಕಾರ ಆಗಿದೆ. ಈ ವೇಳೆ ವಿರೋಧ ಪಕ್ಷಗಳ ಒಕ್ಕೂಟ INDIAದ ಸದಸ್ಯರು ಸಭಾತ್ಮಾಗ ಮಾಡಿದರು.

ಸಂಸತ್‌ನ ಕೆಳಮನೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮಂಡಿಸಿದ ಈ ಮಸೂದೆಗೆ ಬಿಜು ಜನತಾದಳ, ವೈಎಸ್‌ಆರ್ ಕಾಂಗ್ರೆಸ್‌ ಪಕ್ಷ ಹಾಗೂ ಟಿಡಿಪಿ ಬೆಂಬಲ ನೀಡಿದವು. ಸೋಮವಾರ ಈ ಮಸೂದೆಯು ರಾಜ್ಯಸಭೆಯಲ್ಲಿ ಮಂಡನೆಯಾಗಲಿದ್ದು, ಅಲ್ಲಿಯೂ ನಿರಾಯಾಸವಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.

ಈ ಮಸೂದೆಯನ್ವಯ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಮೇಲೆ ಕೇಂದ್ರವು ಸಂಪೂರ್ಣ ಹಿಡಿತ ಹೊಂದಲಿದೆ. ಮಸೂದೆಗೆ ಸಂಬಂಧಿಸಿದಂತೆ ನಾಲ್ಕು ಗಂಟೆಗಳ ಕಾಲ ಚರ್ಚೆ ನಡೆಯಿತು. INDIAದ ಸದಸ್ಯರ ಟೀಕೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದರು. ಬಳಿಕ ಧ್ವನಿಮತದ ಮೂಲಕ ಒಪ್ಪಿಗೆ ನೀಡಲಾಯಿತು. ಬಳಿಕ ಸದನವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ಸಂವಿಧಾನಕ್ಕೆ ಅಡಿಪಾಯ ಹಾಕಲು ಶ್ರಮಿಸಿದ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ, ಡಾ.ಬಿ.ಆರ್ ಅಂಬೇಡ್ಕರ್, ಕಾಂಗ್ರೆಸ್‌ ನಾಯಕರಾದ ಸಿ. ರಾಜಗೋಪಾಲಚಾರಿ, ಸರ್ದಾರ್ ಪಟೇಲ್ ಅವರ ಸೇವೆಯನ್ನು ಸ್ಮರಿಸಿ ಅಮಿತ್ ಶಾ ಅವರು ಮಸೂದೆ ಮಂಡಿಸಿದರು.

ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್‌ ಚೌಧರಿ, ನೆಹರೂ ಹಾಗೂ ಕಾಂಗ್ರೆಸ್ ಪಕ್ಷವನ್ನು ಅಮಿತ್ ಶಾ ಅವರು ಹೊಗಳುತ್ತಿದ್ದಾರೆ. ನನಗೆ ಇದನ್ನು ನಂಬಲಾಗುತ್ತಿಲ್ಲ ಎಂದರು.

ಚರ್ಚೆ ವೇಳೆ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರು, ”ಸ್ಪೀಕರ್ ಕುರ್ಚಿಯತ್ತ ಮಸೂದೆಯ – ಪ್ರತಿಯನ್ನು ಎಳೆದರು. ಆಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಮುಂಗಾರು ಅಧಿವೇಶನದ ಮುಂದಿನ ಅವಧಿವರೆಗೆ ರಿಂಕು ಅವರನ್ನು ಅಮಾನತುಗೊಳಿಸಿ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ.

ರಾಜ್ಯಸಭೆಯಲ್ಲಿಯೂ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಎಎಪಿ ಸಂಸದ ಸಂಜಯ್ – ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.

“ಮಸೂದೆಗೆ ಅಂಗೀಕಾರ ಪಡೆಯುವ ಮೂಲಕ ಕೇಂದ್ರ ಸರ್ಕಾರವು ದೆಹಲಿ ನಾಗರಿಕರ ಬೆನ್ನಿಗೆ ಇರಿದಿದೆ ಮೋದಿ ಮತ್ತು ಬಿಜೆಪಿ ಹೇಳುವ ಮಾತುಗಳನ್ನು ಜನರು ನಂಬಬಾರದು” ಎಂದು ಮುಖ್ಯಮಂತ್ರಿ ಅರವಿಂದ ಕೇಜಿವಾಲ್ ಹೇಳಿದ್ದಾರೆ.

”ಮಸೂದೆಯು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ಅವರನ್ನು ಗುಲಾಮಗಿರಿ ವ್ಯವಸ್ಥೆಗೆ ದೂಡುತ್ತಿದೆ. ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ಸಮರ್ಥನೀಯವಾದ ಒಂದೂ ವಾದ ಮಂದಿಸಿಲ್ಲ, ಈಗಾಗಲೇ ಜನರು ಅಸಹಾಯಕರಾಗಿದ್ದಾರೆ ಮತ್ತೆ ಅವರನ್ನು ಅದೇ ಕೂಪಕ್ಕೆ ದೂಡುತ್ತದೆ” ಎಂದು ಟೀಟ್‌ನಲ್ಲಿ ದೂರಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಸಂಸತ್‌ನಲ್ಲಿ ವಿವಾದಿತ ದೆಹಲಿ ಸೇವಾ ಮಸೂದೆ ಮಂಡನೆ; ಪ್ರತಿಪಕ್ಷಗಳ ವಿರೋಧದ ಮಧ್ಯೆ ಅಂಗಿಕಾರ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...