Homeಕರ್ನಾಟಕದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌

ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡರ ಬಗ್ಗೆ ಕಾಂಗ್ರೆಸ್‌‌ನ ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಇಡೀ ಕಾಂಗ್ರೆಸ್ ಪಕ್ಷವೂ ಖಂಡಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಅವರ ಹೇಳಿಕೆ ಅಮಾನವೀಯವಾಗಿದ್ದು, ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ತುಮಕೂರಿನ ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದ ರಾಜಣ್ಣ ಅವರು, “ದೇವೇಗೌಡರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೇ.. ಅವರು ನಾಲ್ವರ ಮೇಲೆ ಹೋಗೋದು ಹತ್ತಿರದಲ್ಲೇ ಇದೆ” ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ರಾಜ್ಯ ರಾಜಕೀಯ ವಲಯದಲ್ಲಿ ವ್ಯಾಪಕ ಆಕ್ರೋಶ ಉಂಟಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಶಿವಕುಮಾರ್‌ ಅವರು, “ನಮ್ಮ ಪಕ್ಷದ ನಾಯಕರೊಬ್ಬರು ರಾಜ್ಯದ ಹಿರಿಯ ರಾಜಕಾರಣಿಯ ಪರಿಸ್ಥಿತಿಯ ಬಗ್ಗೆ ಆಡಿರುವ ಮಾತು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಪಕ್ಷದ ನಾಯಕನಾಗಿ ಹಾಗೂ ವ್ಯಯಕ್ತಿಕವಾಗಿಯೂ ಇದನ್ನು ನಾನು ಖಂಡಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ಪಕ್ಷದ ನಾಯಕರು ಮೊದಲಿಗೆ ಮಾನವೀಯತೆಯನ್ನು ಮೆರೆಯಬೇಕು. ಅವರು ಸಮಾಜಕ್ಕೆ, ರಾಷ್ಟ್ರಕ್ಕೆ ಸೇವೆ ಮಾಡಿದಂತಹ ಒಬ್ಬ ನಾಯಕರಾಗಿದ್ದಾರೆ. ದೇವೇಗೌಡರು ಪ್ರಧಾನಿಯಾಗಲು ಪಕ್ಷ ಬೆಂಬಲ ನೀಡಿತ್ತು. ಇಡೀ ರಾಷ್ಟ್ರ ಅವರನ್ನು ಗೌರವದಿಂದ ಕಾಣುತ್ತಿದೆ. ಅಂತಹ ವ್ಯಕ್ತಿಯ ಆರೋಗ್ಯದ ಬಗ್ಗೆ ಮಾತನಾಡುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನು ಕೂಡಲೇ ರಾಜಣ್ಣ ಅವರಿಗೆ ಕರೆ ಮಾಡಿ, ಅವರು ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಸೂಚಿಸುತ್ತೇನೆ. ನಾನು ಕೂಡಾ ಈ ಸಂದಂರ್ಭದಲ್ಲಿ ಇದನ್ನು ಖಂಡಿಸುತ್ತೇನೆ. ಪಕ್ಷದಲ್ಲಿ ಇದರ ಬಗ್ಗೆ ಆಂತರಿಕವಾಗಿ ಚರ್ಚೆ ಮಾಡುತ್ತೇನೆ. ಸಮಾಜ ಕೂಡಾ ಈ ವಿವಾದದ ಬಗ್ಗೆ ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ರೀತಿಯ ಹೇಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಪೂಜ್ಯರಾದ ದೇವೇಗೌಡರಿಗೆ ಉತ್ತಮ ಆರೋಗ್ಯ ಮತ್ತು ಇನ್ನಷ್ಟು ಸೇವೆ ಮಾಡುವ ಅವಕಾಶವನ್ನು ದೇವರು ಕರುಣಿಸಲಿ. ಅವರು ನಮ್ಮ ರಾಜ್ಯಕ್ಕೆ ಆಸ್ತಿ ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದೇನು?

ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಮಾತನಾಡುತ್ತಿದ್ದ ಅವರು, “ಇದು ನನ್ನ‌ ಕೊನೇ ಚುನಾವಣೆ. ಶೋಕಿಗೆ, ಮುಖಸ್ತುತಿಗೆ ರಾಜಕಾರಣ ಮಾಡೋದು ಬೇಡ. ನಾನು ಶಾಸಕನಾದರೆ ನೀವೆಲ್ಲರೂ ಆದಂತೆ. ನೀವು ಹೋರಾಟ ಮಾಡಿ, ನಾನು ಶಾಸಕನಾದರೆ ನಾಮಕಾವಸ್ಥೆಗೆ ಇರ್ತೀನಿ. ಏನಾದರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ಬರುತ್ತೆ” ಎಂದು ಹೇಳಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ. ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ… ನನಗೆ ಆಗಲೇ 72 ವರ್ಷ, 77 ಆದ್ರೆ ಕೈಕಾಲು ಅಲಾಡ್ತಿರುತ್ತೆ. ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು” ಎಂದು ರಾಜಣ್ಣ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಕ್ಷ ಸಿದ್ದಾಂತಗಳೇನಾದರು ಇರಲಿ ಈ ಅಯ್ಯೊಗ್ಯ ರಾಜಕಾರಣಿಗಳಲ್ಲಿ ನಿಜವಾಗಿಯೂ ಮಾನವೀಯ ಮೌಲ್ಯ ಸೌಜನ್ಯ ಇದೆಯೇ?

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...