Homeಮುಖಪುಟರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ರೈತರ ಈ ನಿರಂತರ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ನಾವು ದೇಹಗಳನ್ನು ರಾಶಿ ಮಾಡಬೇಕಾಗಬಹುದು. ನಾವು ರಕ್ತ ಚೆಲ್ಲುತ್ತೇವೆ. ನಮ್ಮ ಗುರಿಯನ್ನು ಸಾಧಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಬಹುದು ಎಂದು ಸಂಸದರು ಹೇಳಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ರವ್ನೀತ್ ಸಿಂಗ್ ರೈತ ಹೋರಾಟದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ದೆಹಲಿಯ ಜಂತರ್‌ ಮಂತರ್‌ನಲ್ಲಿ ಕೆಲವು ದಿನಗಳ ಹಿಂದೆ ರವ್ನೀತ್ ಸಿಂಗ್ ಮಾಡಿದ ಭಾಷಣವು ಪೂರ್ವಗ್ರಹಪೀಡಿತವಾಗಿದ್ದು, ಇದು ರಾಷ್ಟ್ರೀಯ ಏಕತೆಗೆ ಧಕ್ಕೆಯುಂಟುಮಾಡುತ್ತದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಶಾಂತಿ ಕದಡುವ ಉದ್ದೇಶದಿಂದ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 504 ಮತ್ತು 506 ರ ಅಡಿಯಲ್ಲಿ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಮಾಡುತ್ತಿರುವ ಪ್ರತಿಭಟನೆಯ ಕುರಿತ ಟಿವಿ ಚರ್ಚೆಯಲ್ಲಿ, ಡಿಸೆಂಬರ್ 25 ರಂದು ಸಂಸದರು ನೀಡಿದ ಹೇಳಿಕೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

“ಸಂಸದರ ಹೇಳಿಕೆಯು ಸಾರ್ವಜನಿಕರಲ್ಲಿ ಭಯವನ್ನುಂಟುಮಾಡುವ ಸಾಧ್ಯತೆಯಿದೆ. ಇದು ಯಾವುದೇ ವ್ಯಕ್ತಿಯನ್ನು ರಾಜ್ಯ ಅಥವಾ ಸಾರ್ವಜನಿಕ ಶಾಂತಿಯ ವಿರುದ್ಧ ಅಪರಾಧ ಮಾಡಲು ಪ್ರೇರೇಪಿಸಬಹುದು” ಎಂದು ನವೀನ್‌ಕುಮಾರ್ ಎಂಬುವವರು ದೂರಿನಲ್ಲಿ ಆರೋಪಿಸಿದ್ದಾರೆ.

ಚರ್ಚೆಯಲ್ಲಿ, “ರೈತರ ಈ ನಿರಂತರ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ನಾವು ದೇಹಗಳನ್ನು ರಾಶಿ ಮಾಡಬೇಕಾಗಬಹುದು. ನಾವು ರಕ್ತ ಚೆಲ್ಲುತ್ತೇವೆ. ನಮ್ಮ ಗುರಿಯನ್ನು ಸಾಧಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಬಹುದು” ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಡಿಸಂಬರ್ 31 ರಂದು ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಜನವರಿ 1 ರಂದು ಫೇಸ್‌ಬುಕ್ ಲೈವ್ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ತಮ್ಮ ವಿರುದ್ಧದ ಎಫ್‌ಐಆರ್‌ ಅನ್ನು, ತಮಗೆ ಸಿಕ್ಕಿದ ‘ಪದಕ’ ಎಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ.

“ನಾನು ಇಡೀ ದಿನ ಇಲ್ಲಿಯೇ ಕುಳಿತಿರುತ್ತೇನೆ. ದಯವಿಟ್ಟು ನನ್ನನ್ನು ಬಂಧಿಸಿ. ಆದರೆ ನನ್ನನ್ನು ಬಂಧಿಸುವ ಧೈರ್ಯ ನಿಮ್ಮಲ್ಲಿಲ್ಲ. ನಾನೇ ಬಂದು ಶರಣಾಗುತ್ತೇನೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.


ಇದನ್ನೂ ಓದಿ: ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...