Homeಮುಖಪುಟವಿವಾದಾತ್ಮಕ ಹೇಳಿಕೆ: ಆಪ್ ಶಾಸಕನ ಮುಖಕ್ಕೆ ಮಸಿ ಎರಚಿದ ಯುವಕ - ಶಾಸಕನ ಬಂಧನ!

ವಿವಾದಾತ್ಮಕ ಹೇಳಿಕೆ: ಆಪ್ ಶಾಸಕನ ಮುಖಕ್ಕೆ ಮಸಿ ಎರಚಿದ ಯುವಕ – ಶಾಸಕನ ಬಂಧನ!

"ಉತ್ತರ ಪ್ರದೇಶದ ಆಸ್ಪತ್ರೆಗಳಲ್ಲಿ ಮನುಷ್ಯರ ಬದಲು ನಾಯಿಗಳ ಜನನವಾಗುತ್ತಿದೆ. ಇಲ್ಲಿನ ಆಸ್ಪತ್ರೆ ಹಾಗೂ ಶಾಲೆಗಳ ಸ್ಥಿತಿ ಅತ್ಯಂತ  ಶೋಚನೀಯವಾಗಿವೆ" ಎಂದು ಶಾಸಕ‌ ಹೇಳಿದ್ದರು.

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರದ ಆರೋಗ್ಯ ಸೇವೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಆಮ್‌ ಆದ್ಮಿ ಪಕ್ಷದ (ಎಎಪಿ) ದೆಹಲಿ ಶಾಸಕ ಸೋಮನಾಥ್‌ ಭಾರತಿ ಅವರ ಮೇಲೆ ಬಿಜೆಪಿ ಕಾರ್ಯಕರ್ತರೊಬ್ಬರು ಕಪ್ಪು ಮಸಿ (ಇಂಕ್‌) ಎರಚಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಶಾಸಕರ ಮೇಲೆ ಅಮೇಥಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ ಉತ್ತರ ಪ್ರದೇಶ ಪೊಲೀಸರು ಸೋಮವಾರ ಅವರನ್ನು ಬಂಧಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಯ್‌ಬರೇಲಿಯ ಆಸ್ಪತ್ರೆಯೊಂದಕ್ಕೆ ತೆರಳುತ್ತಿದ್ದ ವೇಳೆ ಶಾಸಕರ ಮೇಲೆ ಇಂಕ್ ಎರಚಿ ಓಡಿಹೋಗುತ್ತಿದ್ದ ಯುವಕನನ್ನು ಹಿಡಿಯಲು ಬೆನ್ನಟ್ಟಿ ಹೋದರೂ ಆತ ಕೈಗೆ ಸಿಗಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊಲೆಗಡುಕರಿಗೆ, ಅತ್ಯಾಚಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ: ಕೆ.ಎಲ್ ಅಶೋಕ್

“ಉತ್ತರ ಪ್ರದೇಶ ಸರ್ಕಾರದ ಆರೋಗ್ಯ ಸೇವೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸೋಮನಾಥ್‌ ವಿರುದ್ಧ ಅಮೇಥಿಯಲ್ಲಿ ಪ್ರಕರಣ ದಾಖಲಾಗಿದ್ದು, ಅದರ ಆಧಾರದಲ್ಲಿ ಅವರನ್ನು ವಶಕ್ಕೆ ಪಡೆದು ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಅವರನ್ನು ಈಗ ಜೈಲಿನಲ್ಲಿ ಇರಿಸಲಾಗಿದೆ. ಬುಧವಾರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ” ಎಂದು ಪೊಲೀಸರು ಹೇಳಿದ್ದಾರೆ.

“ಉತ್ತರ ಪ್ರದೇಶದ ಆಸ್ಪತ್ರೆಗಳಲ್ಲಿ ಮನುಷ್ಯರ ಬದಲು ನಾಯಿಗಳ ಜನನವಾಗುತ್ತಿದೆ. ಇಲ್ಲಿನ ಆಸ್ಪತ್ರೆ ಹಾಗೂ ಶಾಲೆಗಳ ಸ್ಥಿತಿ ಅತ್ಯಂತ  ಶೋಚನೀಯವಾಗಿವೆ” ಎಂದು ಶಾಸಕ‌ ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮಾವಿನ ಸೊಪ್ಪು ಕಿತ್ತ ದಲಿತ ಯುವಕನ ಮೇಲೆ ಹಲ್ಲೆ: ಅಸಹಜ ಸಾವು

ಉತ್ತರ ಪ್ರದೇಶದ ಶಾಲೆಗಳು ಮತ್ತು ಆಸ್ಪತ್ರೆಗಳ ವ್ಯವಸ್ಥೆಯ ಕುರಿತು ಆಪ್ ಮುಖಂಡರು ಆಗಾಗ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಗುರಿಯಾಗಿಸಿಕೊಳ್ಳುತ್ತಿದ್ದರು.

ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ರಾಯ್‌ಬರೇಲಿ ಹಾಗೂ ಅಮೇಥಿ ಜಿಲ್ಲೆಗಳ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ಸೋಮನಾಥ್‌ ನಿರ್ಧರಿಸಿದ್ದು, ಇದಕ್ಕಾಗಿ ಎರಡು ದಿನಗಳ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಆಮ್ ಆದ್ಮಿ ಈಗಾಗಲೇ ಘೋಷಿಸಿದೆ.


ಇದನ್ನೂ ಓದಿ: ‌ಉತ್ತರ ಪ್ರದೇಶ: ಭೂಗತ ಪಾತಕಿ ಚೋಟಾ ರಾಜನ್ ಅಂಚೆ ಚೀಟಿ ಬಿಡುಗಡೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...