Homeರಾಷ್ಟ್ರೀಯಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

- Advertisement -
- Advertisement -

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ಬಿಜೆಪಿಯು ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ನೀಡಿದ್ದ ತನ್ನ ಹೇಳಿಕೆಯಲ್ಲಿ ತಿಳಿಸಿದ್ದರು.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೂಪುರ್‌ ಶರ್ಮಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ವಿರುದ್ದದ ಆಕ್ರೋಶಗಳನ್ನು ಶಮನಗೊಳಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಶನಿವಾರವಷ್ಟೆ, ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಪ್ರತಿಯೊಂದು ಧರ್ಮವು ಅರಳಿತು ಮತ್ತು ಪ್ರವರ್ಧಮಾನಕ್ಕೆ ಬಂದಿದೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಕೋಮು ಸಾಮರಸ್ಯ ಸಾರುವ ಉರುಸುಗಳು

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವಶಾಸ್ತ್ರವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸಲು ಹಕ್ಕನ್ನು ನೀಡುತ್ತದೆ” ಎಂದು ಪಕ್ಷವೂ ಹೇಳಿತ್ತು.

ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ನೂಪುರ್ ಶರ್ಮಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಈ ವಿವಾದಾತ್ಮಕ ಹೇಳಿಕೆಗಳನ್ನು ಪ್ರತಿಭಟಿಸಿ ಮಾರುಕಟ್ಟೆಗಳನ್ನು ಮುಚ್ಚುವ ಕರೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಘರ್ಷಣೆಯಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ.

ಒಂದು ಗುಂಪು ಮತ್ತೊಂದು ಗುಂಪು ನೀಡಿದ್ದ ಬಂದ್‌ ಕರೆಯನ್ನು ವಿರೋಧಿಸಿತ್ತು. ಇದು ಘರ್ಷಣೆಗೆ ಕಾರಣವಾಗಿ ಪ್ರದೇಶದಲ್ಲಿ ಕಲ್ಲು ತೂರಾಟ ಸಂಭವಿಸಿದ್ದವು. ನಂತರ ಪೊಲೀಸರು ಗುಂಪನ್ನು ಚದುರಿಸಲು ಮತ್ತು ಹೆಚ್ಚಿನ ಹಿಂಸಾಚಾರವನ್ನು ತಡೆಯಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರು. ಪ್ರಕರಣದಲ್ಲಿ ಪೊಲೀಸರು 36 ಮಂದಿಯನ್ನು ಬಂಧಿಸಿದ್ದು, 1,500 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಘರ್ಷಣೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ಥಳದಿಂದ 80 ಕಿಲೋಮೀಟರ್ ದೂರದಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ!

ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯ ವಿರುದ್ಧ ಮಹಾರಾಷ್ಟ್ರದ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಅದರೆ ಅವರು ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದು, ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದ್ದರು.

ಭಾರತದ ಆಡಳಿತ ಪಕ್ಷದ ವಕ್ತಾರೆಯ ಹೇಳಿಕೆಗಳ ವಿರುದ್ಧ ಅರಬ್ ರಾಷ್ಟ್ರಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೇಳಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಹ್ಯಾಶ್‌ಟ್ಯಾಗ್‌ಗಳೊಂದಿಗೆ, ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಇದರ ನಂತರ ಬಿಜೆಪಿ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಅರಬ್ ಮಹಿಳೆಯರ ವಿರುದ್ದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ

ಈ ಹಿಂದೆ ಬಿಜೆಪಿ ಸಂಸದ ತೇಜಸ್ವಿಸೂರ್ಯ ಅವರು ಅರಬ್ ಮಹಿಳೆಯರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವೇಳೆ ಕೂಡಾ ಅರಬ್ ದೇಶಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತೇಜಸ್ವಿ ಸೂರ್ಯ ತನ್ನ ಹೇಳಿಕೆಯಲ್ಲಿ, “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿ, ಗಲ್ಪ್‌‌ ರಾಷ್ಟ್ರಗಳು ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಬಿಜೆಪಿ ಅವರ ವಿರುದ್ಧ ಯಾವುದೆ ಗಂಭೀರ ಕ್ರಮ ಕೈಗೊಂಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...