Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ನರೇಂದ್ರ ಮೋದಿಯವರು 2002ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ವಿದ್ಯಮಾನಗಳನ್ನು ಮುಖ್ಯವಾಗಿಟ್ಟುಕೊಂಡು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ಭಾರತದಲ್ಲಿ ತಡೆ ನೀಡಿರುವುದನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತುಕೊಂಡಿದೆ. “ಮೂರು ವಾರಗಳೊಳಗೆ ವರದಿ ಸಲ್ಲಿಸಬೇಕು” ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆಯನ್ನೂ ನೀಡಿದೆ.

ಸಾಕ್ಷ್ಯಚಿತ್ರವನ್ನು ಸಾಮಾಜಿಕ ಮಾಧ್ಯಮಗಳಿಂದ ತೆರವು ಮಾಡುವಂತೆ ನೀಡಲಾಗಿರುವ ಆದೇಶದ ಮೂಲ ದಾಖಲೆಯನ್ನು ಸುಪ್ರೀಂ ಕೋರ್ಟ್ ಕೇಳಿದೆ.

ಸಾಕ್ಷ್ಯಚಿತ್ರವನ್ನು ಸೆನ್ಸಾರ್ ಮಾಡದಂತೆ ಕೇಂದ್ರ ಸರ್ಕಾರವನ್ನು ತಡೆಯಬೇಕೆಂದು ಹಿರಿಯ ಪತ್ರಕರ್ತ ಎನ್ ರಾಮ್, ಹೋರಾಟಗಾರ-ವಕೀಲರಾದ ಪ್ರಶಾಂತ್ ಭೂಷಣ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್ ಪರಿಶೀಲಿಸುತ್ತಿದೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಿಂದ ಸಾಕ್ಷ್ಯಚಿತ್ರದ ಲಿಂಕ್‌ ತೆಗೆದು ಹಾಕಿರುವುದನ್ನು ಅರ್ಜಿಗಳು ಪ್ರಶ್ನಿಸಿವೆ.

“ನಿರ್ಬಂಧದ ಆದೇಶವನ್ನು ಕೇಂದ್ರವು ಔಪಚಾರಿಕವಾಗಿಯೂ ಇಂದಿಗೂ ಪ್ರಕಟಿಸಿಲ್ಲ. ಎರಡು ಭಾಗಗಳನ್ನು ಹೊಂದಿರುವ ಸಾಕ್ಷ್ಯಚಿತ್ರದ ಮೇಲಿನ ನಿಷೇಧವು ‘ದುಷ್ಕೃತ್ಯ, ಅನಿಯಂತ್ರಿತ ಮತ್ತು ಅಸಂವಿಧಾನಿಕ” ಎಂದು ವಕೀಲ ಎಂಎಲ್ ಶರ್ಮಾ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿ ಟೀಕಿಸಿದೆ.

ನಿಯಮಗಳ ಪ್ರಕಾರ ಕೇಂದ್ರವು 48 ಗಂಟೆಗಳ ಒಳಗೆ ತುರ್ತು ತಡೆ ಆದೇಶಗಳನ್ನು ಪ್ರಕಟಿಸಬೇಕು ಎಂದು ಅರ್ಜಿದಾರರು ವಾದಿಸಿದ್ದಾರೆ.

ನಿಷೇಧದ ನಂತರ, ಎರಡು ಭಾಗಗಳ BBC ಸರಣಿಯ ಲಿಂಕ್‌ಗಳನ್ನು ಮಹುವಾ ಮೊಯಿತ್ರಾ ಸೇರಿದಂತೆ ವಿವಿಧ ವಿರೋಧ ಪಕ್ಷದ ಅನೇಕ ನಾಯಕರು ಹಂಚಿಕೊಂಡಿದ್ದರು. ವಿದ್ಯಾರ್ಥಿ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಸಾರ್ವಜನಿಕ ಪ್ರದರ್ಶನ ಏರ್ಪಡಿಸಿದ್ದು ವಿವಾದಕ್ಕೆ ಗುರಿಯಾಗಿದೆ.

ಹಲವು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳು ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಮುಂದಾದ ಬಳಿಕ ಆಡಳಿತ ವರ್ಗಗಳು ತಡೆ ನೀಡಿವೆ. ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ವಿರೋಧಿ ಕ್ರಮಗಳನ್ನೂ ಆಡಳಿತ ವರ್ಗ ಜರುಗಿಸಿರುವ ವರದಿಗಳಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...