Homeಮುಖಪುಟಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

- Advertisement -
- Advertisement -

ಜನವರಿ 29 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳ ಯಾತ್ರಾ ಸ್ಥಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಸಂಖ್ಯೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮರೆಮಾಚಿದೆ ಎಂದು ವಿರೋಧ ಪಕ್ಷದ ನಾಯಕರು ಮಂಗಳವಾರ ಆರೋಪಿಸಿದ್ದಾರೆ. ಕಾಲ್ತುಳಿತದಲ್ಲಿ 82 ಜನರು ಸಾವನ್ನಪ್ಪಿದ್ದು, ಆದರೆ ರಾಜ್ಯ ಸರ್ಕಾರ 37 ಜನರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಹೇಳಿದೆ ಎಂದು ಬಿಬಿಸಿ ಹಿಂದಿ ಮಾಡಿದ್ದ ತನಿಖಾ ವರದಿ ಹೇಳಿದೆ. ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಬಿಬಿಸಿ ಹಿಂದಿ ವರದಿಯು ಕಾಲ್ತುತದಲ್ಲಿ ಸಾವನ್ನಪ್ಪಿದವರನ್ನು ಮೂರು ಗುಂಪುಗಳಾಗಿ ವರ್ಗೀಕರಿಸಿದೆ. ಮೊದಲನೆಯದು ಅಧಿಕೃತ ಸಂಖ್ಯೆಯಲ್ಲಿ ಸೇರಿದ ಮತ್ತು ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ದೊರೆತಿದೆ. ಎರಡನೇ ಗುಂಪಿನಲ್ಲಿ ಅಧಿಕೃತ ಸಂಖ್ಯೆಯಲ್ಲಿ ಎಣಿಕೆಯಾಗಿಲ್ಲ, ಆದರೆ ಅವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ದೊರೆತಿದೆ ಎಂದು ವರದಿ ಹೇಳಿದೆ.

ಮೂರನೇ ಗುಂಪಿನಲ್ಲಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು ಅಧಿಕೃತ ಸಂಖ್ಯೆಯಲ್ಲೂ ದಾಖಲಾಗಿಲ್ಲ, ಜೊತೆಗೆ ಅವರ ಕುಟುಂಬಕ್ಕೆ ಸರ್ಕಾರ ಯಾವುದೇ ಪರಿಹಾರವನ್ನೂ ನೀಡಿಲ್ಲ ಎಂದು ಬಿಬಿಸಿ ವರದಿ ತಿಳಿಸಿದೆ. ಕಾಲ್ತುಳಿತದ ನಿಜವಾದ ಸಂಖ್ಯೆ ತೀವ್ರವಾಗಿ ಹೆಚ್ಚಿರಬಹುದು ಎಂದು ಮಾಧ್ಯಮ ವರದಿಗಳು ಈ ಹಿಂದೆಯೂ ತಿಳಿಸಿತ್ತು.

ಬಿಬಿಸಿ ವರದಿಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, “ಯಾವುದೇ ಮಾಹಿತಿ ನಿರ್ವಹಣೆಯು ಸತ್ಯ ಹೊರಬರುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಸುಳ್ಳು ಅಂಕಿಅಂಶಗಳನ್ನು” ಒದಗಿಸುವವರನ್ನು ಸಾರ್ವಜನಿಕ ನಂಬಿಕೆಗೆ ಅರ್ಹರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್ ಹೇಳಿದ್ದಾರೆ.

“ಸಮಸ್ಯೆ, ಅಂಕಿಅಂಶಗಳನ್ನು ಮರೆಮಾಡುವುದರ ಬಗ್ಗೆ ಮಾತ್ರವಲ್ಲ, ಸದನದಲ್ಲಿ ಸುಳ್ಳು ಹೇಳುವುದು ಕೂಡಾ ಸಮಸ್ಯೆಯಾಗಿದೆ” ಎಂದು ಅಖೀಲೇಶ್ ಅವರು ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ”30 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಫೆಬ್ರವರಿ 19 ರಂದು ರಾಜ್ಯದ ವಿಧಾನಸಭೆಯಲ್ಲಿ ಹೇಳಿದ್ದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆಯ ಬಗ್ಗೆಯೂ ಅಖಿಲೇಶ್ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಪರಿಹಾರವನ್ನು ನಗದು ರೂಪದಲ್ಲಿ ಏಕೆ ನೀಡಲಾಯಿತು?. ನಗದಿನ ಮೂಲ ಯಾವುದು? ವಿತರಿಸದ ನಗದು ಎಲ್ಲಿಗೆ ಹೋಯಿತು? ಯಾವ ನಿಯಮದ ಅಡಿಯಲ್ಲಿ ನಗದು ವಿತರಣೆಯನ್ನು ಅನುಮೋದಿಸಲಾಗಿದೆ? ನಗದು ಪಾವತಿಗಳಿಗೆ ಯಾರು ಅಧಿಕಾರ ನೀಡಿದರು? ವಿತರಣೆಯನ್ನು ಬೆಂಬಲಿಸುವ ಯಾವುದೇ ಲಿಖಿತ ಆದೇಶವಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಕೂಡ ಬಿಬಿಸಿಯ ವರದಿಯನ್ನು ಹಂಚಿಕೊಂಡಿದ್ದು, ಬಿಜೆಪಿ ಸರ್ಕಾರವು “ಮೃತ ದೇಹಗಳ ಮೇಲೆ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದೆ. “ಅವರು ತಮ್ಮ ಇಮೇಜ್ ಅನ್ನು ರಕ್ಷಿಸಿಕೊಳ್ಳಲು ಮತ್ತು ತಮ್ಮ ಕ್ರಿಮಿನಲ್ ನಿರ್ಲಕ್ಷ್ಯವನ್ನು ಮುಚ್ಚಿಕೊಳ್ಳಲು ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಚಿದ್ದಾರೆ” ಎಂದು ಪಕ್ಷವು ಎಕ್ಸ್‌ನಲ್ಲಿ ತಿಳಿಸಿದೆ.

ಬಿಜೆಪಿ ಜನರ ಸಾವಿನಿಗಿಂತ ತನ್ನ ಇಮೇಜ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಕಾಂಗ್ರೆಸ್ ಕೇಳಿದೆ. “ಈ ಬಿಬಿಸಿ ವರದಿಯು ಸರ್ಕಾರದ ಅಸಂವೇದನಾಶೀಲತೆಯನ್ನು ತೋರಿಸುತ್ತದೆ. ಸರ್ಕಾರ ಜನರ ಜೀವಗಳನ್ನು ಪಣಕ್ಕಿಟ್ಟು, ತನ್ನ ಟೊಳ್ಳಾದ ಇಮೇಜ್ ಅನ್ನು ಉಳಿಸಿಕೊಳ್ಳುತ್ತಿದೆ” ಎಂದು ಕಾಂಗ್ರೆಸ್  ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಕೂಡ ವರದಿಯಾದ ಸಾವಿನ ಸಂಖ್ಯೆಯಲ್ಲಿನ ವ್ಯತ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಕುಂಭ ಮೇಳದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಯುಪಿ ಸರ್ಕಾರ ವರದಿ ಮಾಡಿದ 37 ಸಾವುಗಳಿಗಿಂತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳೊಂದಿಗೆ ಸಂದರ್ಶನಗಳನ್ನು ನಡೆಸಿದ್ದು, ಸಾವುನೋವುಗಳ ಸಂಖ್ಯೆ ಅಧಿಕೃತವಾಗಿ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನದಾಗಿದೆ ಎಂದು ಬಹಿರಂಗಪಡಿಸಿದೆ.ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...