ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ ‘ಸ್ಟಾಂಡಪ್‌ ಕಾಮಿಡಿಯನ್’ ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. “ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು ತಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ ಹಾಗೂ ಕ್ಷಮೆಯಾಚಿಸುವುದಿಲ್ಲ” ಎಂದು ಹೇಳಿದ್ದಾರೆ. ವಿಚಾರಣೆ ಬಳಿಕ, “ನನ್ನ ಹೇಳಿಕೆಗಳಿಗೆ ಬದ್ಧನಾಗಿದ್ದೇನೆ, ಪ್ರಾಮಾಣಿಕವಲ್ಲದ ಕ್ಷಮೆಯಾಚಿಸುವುದಿಲ್ಲ” ಎಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕಮ್ರಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಜಾರಿಯಾದ ನಂತರ ಅವರ ವಿರುದ್ಧದ … Continue reading ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ