Homeಮುಖಪುಟಕೇರಳದ ಮೀನುಗಾರರೊಂದಿಗೆ ಸಂವಾದ: ಸಮುದ್ರದಲ್ಲಿ ಈಜಿದ ರಾಹುಲ್ ಗಾಂಧಿ

ಕೇರಳದ ಮೀನುಗಾರರೊಂದಿಗೆ ಸಂವಾದ: ಸಮುದ್ರದಲ್ಲಿ ಈಜಿದ ರಾಹುಲ್ ಗಾಂಧಿ

- Advertisement -
- Advertisement -

ಪ್ರಸ್ತುತ ಚುನಾವಣಾ ಹೊಸ್ತಿಲಲ್ಲಿರುವ ಕೇರಳದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಮೀನುಗಾರ ಸಮುದಾಯದೊಂದಿಗೆ ಸಂವಹನ ನಡೆಸುತ್ತಾ ತಮ್ಮ ಸಮಯವನ್ನು ಕಳೆದರು. ಅವರು ಇಂದು ಮೀನುಗಾರರೊಂದಿಗೆ ಸಮುದ್ರಯಾನ ಮಾಡುತ್ತಿದ್ದಾಗ, ಅರೇಬಿಯನ್ ಸಮುದ್ರಕ್ಕೆ ಹಾರಿ, ಮೀನುಗಾರರೊಂದಿಗೆ ಸುಮಾರು 10 ನಿಮಿಷಗಳ ಕಾಲ ಈಜಿದರು.

ಮೀನುಗಾರರ ದೈನಂದಿನ ಜೀವನದ ಅರಿವನ್ನು ಪಡೆಯಲು, ಕಾಂಗ್ರೆಸ್ ನಾಯಕ, ಕೊಲ್ಲಂನ ಸಮುದ್ರದಲ್ಲಿ ಸ್ಥಳೀಯ ಮೀನುಗಾರರೊಂದಿಗೆ ಬಲೆಯನ್ನು ಎಳೆದರು. ಇದಕ್ಕೆ ಸಂಬಂಧಿಸಿದ ಫೋಟೊ, ವಿಡಿಯೋಗಳನ್ನು ಅವರು ಮತ್ತು ಅವರ ಪಕ್ಷವು ಹಂಚಿಕೊಂಡಿದೆ.

ಮೀನುಗಾರರೊಂದಿಗೆ ದೋಣಿಯಲ್ಲಿ ಸಾಗುವಾಗ ರಾಹುಲ್ ಮೀನು ಸಾರು ಮತ್ತು ಬ್ರೆಡ್ ಉಪಹಾರ ಸೇವಿಸಿದರು. ’ನಾನು ನಿಮ್ಮ ಕೆಲಸವನ್ನು ಅರ್ಥ ಮಾಡಿಕೊಂಡಿದ್ದೇನೆ. ಖಾಲಿ ಬಲೆ ಎಳೆಯುವ ನಿರಾಶೆಯನ್ನೂ ನಾನು ನೋಡಿದೆ’ ಎಂದು ವಯನಾಡ್ ಸಂಸದ ರಾಹುಲ್ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಬೆಳಿಗ್ಗೆ ದೋಣಿ ಸವಾರಿಯಿಂದ ಹಿಂತಿರುಗಿದ ನಂತರ, ಕೊಲ್ಲಂನ ತಂಗಸ್ಸೆರಿ ಬೀಚ್‌ನಲ್ಲಿ ಮೀನುಗಾರರೊಂದಿಗೆ ಸಂವಹನ ನಡೆಸಿದರು. ಅವರ ಸಮಸ್ಯೆಗಳನ್ನು ಆಲಿಸಿದರು ಮತ್ತು ಖಾಲಿ ಬಲೆ ಎಳೆಯುವ ನಿರಾಶೆಯ ಕುರಿತೂ ಮಾತನಾಡಿದರು.

“ನೀವು ಮಾಡುವ ಕೆಲಸವನ್ನು ನಾನು ಗೌರವಿಸುತ್ತೇನೆ. ನಾವು ಮೀನುಗಳನ್ನು ತಿನ್ನುತ್ತೇವೆ, ಆದರೆ ಅದರ ಹಿಂದಿನ ಶ್ರಮ ಮತ್ತು ಅದು ನಮ್ಮ ತಟ್ಟೆಯನ್ನು ಹೇಗೆ ತಲುಪಿತು ಎಂಬುದು ನಮಗೆ ಅರ್ಥವಾಗುವುದಿಲ್ಲ” ಎಂದು ಗಾಂಧಿ ಹೇಳಿದ್ದಾರೆ.


ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. what a great man Rahul Gandhi is. He has food with poor people, swims in the ocean with the fishermen and he is a great parliamentarian, nay, a politician and statesman par excellence!

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...