Homeಮುಖಪುಟಮತಾಂತರ ಅಕ್ರಮವಾಗಿದ್ದಲ್ಲಿ, ಮದುವೆ ಅಮಾನ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು

ಮತಾಂತರ ಅಕ್ರಮವಾಗಿದ್ದಲ್ಲಿ, ಮದುವೆ ಅಮಾನ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಒಂದು ಮಹತ್ವದ ತೀರ್ಪಿನಲ್ಲಿ, ಮತಾಂತರವು ಅಕ್ರಮವಾಗಿದ್ದಲ್ಲಿ ಅದರ ಆಧಾರದ ಮೇಲೆ ನಡೆದ ಮದುವೆ ಸ್ವಯಂಚಾಲಿತವಾಗಿ ಅಮಾನ್ಯವಾಗುತ್ತದೆ ಮತ್ತು ಕಾನೂನಿನ ದೃಷ್ಟಿಯಲ್ಲಿ ಗಂಡುಹೆಣ್ಣನ್ನು ದಂಪತಿಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ್ ಅವರು ಮೊಹಮ್ಮದ್ ಬಿನ್ ಖಾಸಿಂ ಅಲಿಯಾಸ್ ಅಕ್ಬರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿದ್ದಾರೆ. ಅರ್ಜಿಯಲ್ಲಿ, ತಮ್ಮ ವೈವಾಹಿಕ ಜೀವನಕ್ಕೆ ಅಡ್ಡಿಪಡಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಲಾಗಿತ್ತು. ಆದಾಗ್ಯೂ, ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಇಬ್ಬರೂ ವಿವಾಹವಾಗಲು ಅರ್ಹರು ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಕೀಲರು, ಖಾಸಿಂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಜೈನಬ್ ಪರ್ವೀನ್ ಅಲಿಯಾಸ್ ಚಂದ್ರಕಾಂತ ಹಿಂದೂ ಎಂದು ತಿಳಿಸಿದರು. 2025 ಫೆಬ್ರವರಿ 22ರಂದು ಚಂದ್ರಕಾಂತ ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದರು ಮತ್ತು ಬಗ್ಗೆ ಖಾನ್ಕಾಹೆ ಆಲಿಯಾ ಆರಿಫಿಯಾ ಒಂದು ಪ್ರಮಾಣಪತ್ರವನ್ನು ನೀಡಿತ್ತು. 2025 ಮೇ 26ರಂದು ಇಬ್ಬರೂ ಮುಸ್ಲಿಂ ಕಾನೂನಿನ ಪ್ರಕಾರ ವಿಧಿವಿಧಾನಗಳಂತೆ ವಿವಾಹವಾಗಿದ್ದು, ಸಂಬಂಧಪಟ್ಟ ಖಾಜಿಯೊಬ್ಬರು ವಿವಾಹ ಪ್ರಮಾಣಪತ್ರವನ್ನು ನೀಡಿದ್ದಾರೆ ಎಂದು ವಕೀಲರು ತಿಳಿಸಿದರು.

ಆದರೆ, ಹೆಚ್ಚುವರಿ ಮುಖ್ಯ ಸ್ಥಾಯಿ ಕೌನ್ಸಿಲ್ ಇದನ್ನು ತೀವ್ರವಾಗಿ ವಿರೋಧಿಸಿದರು. ಖಾನ್ಕಾಹೆ ಆಲಿಯಾ ಆರಿಫಿಯಾ ನೀಡಿರುವ ಮತಾಂತರ ಪ್ರಮಾಣಪತ್ರ ನಕಲಿ ಮತ್ತು ಕಪೋಲಕಲ್ಪಿತ ಎಂದು ಅವರು ವಾದಿಸಿದರು. ಏಕೆಂದರೆ, ಜಾಮಿಯಾ ಆರಿಫಿಯಾ, ಸೈಯದ್ ಸರವಾನ್, ಕೌಶಂಬಿ ಅವರ ಕಾರ್ಯದರ್ಶಿ ಮತ್ತು ವ್ಯವಸ್ಥಾಪಕರು ಸಂಸ್ಥೆಯು ಫೆಬ್ರವರಿ 22ರಂದು ಯಾವುದೇ ಪ್ರಮಾಣಪತ್ರ ನೀಡಿಲ್ಲ ಎಂದು ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ ಎಂದು ಅವರು ವಾದಿಸಿದರು.

ಇದರ ಮೇಲೆ ನ್ಯಾಯಾಲಯವು, “ಕಕ್ಷಿದಾರರ ಪರ ವಕೀಲರು ಮಂಡಿಸಿದ ವಾದಗಳು ಮತ್ತು ಸಂಪೂರ್ಣ ದಾಖಲೆಗಳ ಪರಿಶೀಲನೆಯ ನಂತರ ಒಂದು ವಿಷಯ ಸ್ಪಷ್ಟವಾಗುತ್ತದೆ, ಅದು ಏನೆಂದರೆ, ನಕಲಿ ದಾಖಲೆಯ ಆಧಾರದ ಮೇಲೆ ಮತಾಂತರವು ಉತ್ತರ ಪ್ರದೇಶ ಅಕ್ರಮ ಮತಾಂತರ ಕಾಯ್ದೆಯಲ್ಲಿ ತಿಳಿಸಲಾದ ಯಾವುದೇ ಅಗತ್ಯ ಅಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲಎಂದು ಹೇಳಿತು.

ಇದೇ ರೀತಿ, ಅರ್ಜಿದಾರರ ನಡುವೆ ನಡೆದಿರುವ ಮದುವೆಯು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗಿಲ್ಲ. ಏಕೆಂದರೆ, ಮುಸ್ಲಿಂ ಕಾನೂನಿನ ಪ್ರಕಾರ, ಮದುವೆ ಎಂಬುದು ಒಂದೇ ಧರ್ಮದ ಅನುಯಾಯಿಗಳು ಮತ್ತು ಭಕ್ತರ ನಡುವಿನ ಒಪ್ಪಂದ. ಒಮ್ಮೆ ಎರಡನೇ ಅರ್ಜಿದಾರರ (ಚಂದ್ರಕಾಂತ) ಮತಾಂತರವು ಅಕ್ರಮವಾದರೆ, ಇಬ್ಬರೂ ಕಾನೂನಿನ ದೃಷ್ಟಿಯಲ್ಲಿ ದಂಪತಿಗಳೆಂದು ಮಾನ್ಯತೆ ಪಡೆಯಲು ಸಾಧ್ಯವಿಲ್ಲಎಂದು ನ್ಯಾಯಾಲಯ ಹೇಳಿತು.

ಆದಾಗ್ಯೂ, ಮತಾಂತರಕ್ಕೆ ಯಾವುದೇ ವಿಧಿವಿಧಾನ ಅಗತ್ಯವಿಲ್ಲದ ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುವಂತೆ ನ್ಯಾಯಾಲಯ ಇಬ್ಬರಿಗೂ ನಿರ್ದೇಶನ ನೀಡಿದೆ.

ಅಲ್ಲದೆ, ಚಂದ್ರಕಾಂತ ಅವರು ತಮ್ಮ ಪೋಷಕರೊಂದಿಗೆ ವಾಸಿಸಲು ಇಷ್ಟವಿಲ್ಲ ಮತ್ತು ರಕ್ಷಣಾ ಗೃಹದಲ್ಲಿ ಉಳಿಯಲು ಒಪ್ಪಿಗೆ ನೀಡಿರುವುದರಿಂದ, ವಿಶೇಷ ವಿವಾಹ ಕಾಯ್ದೆಯಡಿ ಪ್ರಮಾಣಪತ್ರ ಸಿಗುವವರೆಗೂ ಎರಡನೇ ಅರ್ಜಿದಾರರನ್ನು ಪ್ರಯಾಗ್ರಾಜ್ನಲ್ಲಿರುವ ಮಹಿಳಾ ರಕ್ಷಣಾ ಗೃಹದಲ್ಲಿ ಇಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಸಮಾಜವಾದಿ ಪಕ್ಷದ ಮಾಜಿ ಸಚಿವ ಅಜಮ್ ಖಾನ್ 23 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...