Homeಮುಖಪುಟಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ಎಲ್‌ಪಿಜಿ ಪ್ರತಿ ಸಿಲಿಂಡರ್‌ಗೆ 25 ರೂ. ಹೆಚ್ಚಳ

ಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ಎಲ್‌ಪಿಜಿ ಪ್ರತಿ ಸಿಲಿಂಡರ್‌ಗೆ 25 ರೂ. ಹೆಚ್ಚಳ

- Advertisement -
- Advertisement -

ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳದಿಂದ ಬಸವಳಿದಿರುವ ಜನ ಸಾಮಾನ್ಯರಿಗೆ ಮತ್ತೊಂದು ಆಘಾತ ಉಂಟಾಗಿದೆ. ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಸಿಲಿಂಡರ್ ಬೆಲೆಯನ್ನು ಆಗಸ್ಟ್ 17 ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಇದರಿಂದ  ಸಬ್ಸಿಡಿ ರಹಿತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ದೆಹಲಿ ಮತ್ತು ಮುಂಬೈನಲ್ಲಿ 859.50 ರೂಪಾಯಿ ಆಗಿದೆ. ನಿನ್ನೆಯವರೆಗೆ ಪ್ರತಿ ಸಿಲಿಂಡರ್‌ ಬೆಲೆ 834 ರೂಪಾಯಿ 50 ಪೈಸೆಯಾಗಿತ್ತು. ಪ್ರಸ್ತುತ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 886 ರೂ. ಆಗಿದೆ. ಈ ಹಿಂದೆ ಜುಲೈ 1 ರಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನ 25 ರೂಪಾಯಿ 50 ಪೈಸೆಗೆ ಹೆಚ್ಚಿಸಲಾಗಿತ್ತು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರದ ಮೂಲಕ ದೇಶದಲ್ಲಿ ಎಲ್‌ಪಿಜಿ ಬೆಲೆಗಳನ್ನು ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ: ಎಲ್‌ಪಿಜಿ ಸಿಲಿಂಡರ್‌ ಬಳಕೆದಾರರಿಗೆ ಮತ್ತೆ ಬರೆ: ಪ್ರತಿ ಸಿಲಿಂಡರ್‌ಗೆ 25.5 ರೂಪಾಯಿ ಹೆಚ್ಚಳ

ಸ್ಥಳೀಯ ತೆರಿಗೆಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಅಡುಗೆ ಅನಿಲ ದರಗಳು ಬದಲಾಗುತ್ತವೆ. ಸಾಮಾನ್ಯವಾಗಿ, ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತದ. ಯಾವುದೇ ಬದಲಾವಣೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಜಾರಿಗೆ ತರಲಾಗುತ್ತದೆ. 2021 ವರ್ಷದ ಆರಂಭದಲ್ಲಿ ಜನವರಿಯಲ್ಲಿ, ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 694 ಇತ್ತು.

ಎಲ್‌ಪಿಜೆ ಸಿಲಿಂಡರ್ ಬೆಲೆ ಏರಿಕೆಯನ್ನು ಕಾಂಗ್ರೆಸ್ ಖಂಡಿಸಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ತಮ್ಮ ಟ್ವಿಟರ್‌ನಲ್ಲಿ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಕೂಡ ತನ್ನ ಟ್ವಿಟರ್‌ ಖಾತೆಯಲ್ಲಿ, “ಅಡುಗೆ ಅನಿಲದ ಬೆಲೆ ಒಂದೇ ತಿಂಗಳ ಅಂತರದಲ್ಲಿ ಮತ್ತೊಮ್ಮೆ 25 ರೂ. ಏರಿಕೆಯಾಗಿದೆ, ಸಾವಿರದ ಗಡಿ ತಲುಪಿದೆ. ಬೆಲೆ ಏರಿಕೆಯಿಂದ LPG ಗ್ರಾಹಕರು ಕಡಿಮೆಯಾಗಿದ್ದನ್ನು ಮನಗಂಡು ಮತ್ತಷ್ಟು ಗ್ರಾಹಕರನ್ನ ಸೆಳೆದು ಕೊಡಲು “ಉಜ್ವಲ 2.0″ ಎಂದಿದ್ದರು ಅನಿಲ ಕಂಪೆನಿಗಳ ಮಾರ್ಕೆಟಿಂಗ್ ಏಜೆಂಟ್‌ ಪ್ರಧಾನಿ ನರೇಂದ್ರ ಮೋದಿ ಅವರು! ಇದೇನಾ ಅಚ್ಛೆ ದಿನ್ ಬಿಜೆಪಿ..?” ಎಂದು ಆಕ್ರೋಶ ಹೊರಹಾಕಿದೆ.

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳು ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಇದೇ ಸಮಯದಲ್ಲಿ ಎಲ್‌ಪಿಜಿ ದರ ಕೂಡ ಹೆಚ್ಚಳವಾಗಿದೆ. ದೇಶದಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂಪಾಯಿ ದಾಟಿದೆ.


ಇದನ್ನೂ ಓದಿ: ಜನರಿಂದ ಲೂಟಿ ಮಾಡಿ, ಕೇವಲ ‘ಇಬ್ಬರ’ ವಿಕಾಸ: ಎಲ್‌ಪಿಜಿ ದರ ಏರಿಕೆ ವಿರುದ್ದ ರಾಹುಲ್‌‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜ‌ನ‌ಕ್ಕೆ ಬುದ್ಧಿ ಬ‌ರ‌ಲಿ. ಬಿಜೆಪಿ ಗೆ ಫುಲ್ ಮೆಜಾರಿಟಿ ಕೊಟ್ಟಾರ‌. ಅನುಭ‌ವಿಸ‌ಲಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...