HomeಮುಖಪುಟCOP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ಅರ್ಜೆಂಟೀನಾದ ಬಲಪಂಥೀಯ ಅಧ್ಯಕ್ಷ ಜೇವಿಯರ್ ಮಿಲೀ ಅವರು ಅಝರ್ ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಹವಾಮಾನ ಶೃಂಗಸಭೆ (COP29)ಯಿಂದ ತಮ್ಮ ದೇಶದ ನಿಯೋಗವನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕದ ರಾಷ್ಟ್ರ 29ನೇ ಶೃಂಗಸಭೆಯಲ್ಲಿ ಮುಂದುವರಿಯವುದಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮುಂದಿನ ವಾರ ಶೃಂಗಸಭೆಗೆ ಬರಬೇಕಿದ್ದ ಇನ್ನೊಂದು ನಿಯೋಗ ಪ್ರವಾಸ ರದ್ದುಪಡಿಸಿದೆ. ಆದರೆ, ಅರ್ಜೆಂಟೀನಾ ಪ್ಯಾರಿಸ್ ಒಪ್ಪಂದಿದ ಹೊರ ಹೋಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ.

COP29 ಸಂದರ್ಭದಲ್ಲೇ ಟ್ರಂಪ್ ಮರು ಆಯ್ಕೆಯಾಗಿರುವುದು ಶೃಂಗಸಭೆಯ ಮೇಲೆ ಕಾರ್ಮೋಡ ಕವಿದಂತಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಏಕೆಂದರೆ, ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಆದರೆ, ಈ ಬಾರಿಯ ಶೃಂಗಸಭೆಯಲ್ಲಿ ಯುಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅವರ ನಿಲುವು ಸ್ಪಷ್ಟವಾಗಲಿದೆ.

ಈ ನಡುವೆ ಅರ್ಜೆಂಟೀನಾ ಶೃಂಗಸಭೆಯಿಂದ ದೂರ ಉಳಿಯುವ ವಿಷಯವೇ ಮುನ್ನಲೆಯಲ್ಲಿ ಇರಲಿಲ್ಲ. ಅರ್ಜೆಂಟೀನಾದ ಪ್ರತಿನಿಧಿಗಳನ್ನು ವಾಪಾಸ್ ಕರೆಸಿಕೊಂಡಿರುವುದು ಒಂದು ಹಠಾತ್ ಬೆಳವಣಿಗೆ. ಇದರಿಂದ ಟ್ರಂಪ್ ಬಳಿಕ ಮತ್ತೋರ್ವ ಬಲಪಂಥೀಯ ನಾಯಕತ್ವದ ದೇಶ ಪ್ಯಾರಿಸ್ ಒಪ್ಪಂದಿಂದ ದೂರ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ.

ಅರ್ಜೆಂಟೀನಾದ ಹಠಾತ್ ಕ್ರಮವು ಜಾಗತಿಕ ಹವಾಮಾನ ಕಾರ್ಯಕ್ರಮಗಳ ಮೇಲೆ ಬಲಪಂಥೀಯ ನಾಯಕರ ಪ್ರಭಾವದ ಕಳವಳ ಹೆಚ್ಚಿಸಿದೆ.

COP29ರಿಂದ ಹಿಂದೆ ಸರಿಯುವ ಜೇವಿಯರ್ ಮಿಲೀಯವರ ನಿರ್ಧಾರವು ಅವರ ರಾಜಕೀಯ ನಿಲುವು ಮತ್ತು ಯುಎಸ್‌ನೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಟ್ರಂಪ್ ಅವರಂತೆಯೇ ಅರ್ಜೆಂಟೀನಾದ ಅಧ್ಯಕ್ಷರು ಕೂಡ, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ತಿರಸ್ಕರಿಸಿದ್ದಾರೆ. ಇದೊಂದು ‘ಸಾಮಾಜಿಕ ಸುಳ್ಳು’ ಎಂದು ಬಣ್ಣಿಸಿದ್ದಾರೆ.

ಬಾಕು ಶೃಂಗಸಭೆಯಲ್ಲಿ ಈಗ ಅರ್ಜೆಂಟೀನಾದ ನಾಗರಿಕ ಮತ್ತು ಖಾಸಗಿ ವಲಯದ ತಂಡಗಳು ಮಾತ್ರ ಇವೆ. ಆ ದೇಶದ ಅಧಿಕೃತ ನಿಯೋಗ ಹೊರ ಹೋಗಿದೆ.

ದೇಶದ ಸರ್ಕಾರಿ ನಿಯೋಗ ಹೊರ ಹೋದರೂ, ವಿವಿಧ ವಲಯಗಳ 50ಕ್ಕೂ ಹೆಚ್ಚು ಪ್ರತಿನಿಧಿಗಳು ಶೃಂಗಸಭೆಯಲ್ಲಿ ಇದ್ದಾರೆ. ಅವರೆಲ್ಲರೂ ಈ ಸವಾಲಿನ ಸಮಯದಲ್ಲಿ ಅರ್ಜೆಂಟೀನಾದ ಹವಾಮಾನ ಕಾರ್ಯಕ್ರಮಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಅರ್ಜೆಂಟೀನಾದ ಸ್ವತಂತ್ರ ಸಂಸ್ಥೆ Sustentabilidad sin fronteras (SSF)ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ಹವಾಮಾನ ಯೋಜನೆಗಳಿಗೆ ನಿಧಿ ಸಂಗ್ರಹಿಸುವುದನ್ನು ಕೇಂದ್ರೀಕರಿಸಿರುವ 29ನೇ ಶೃಂಗಸಭೆಯಿಂದ ಜೇವಿಯರ್ ಮಿಲೀ ನಿಯೋವನ್ನು ವಾಪಸ್ ಕರೆಸಿಕೊಂಡಿರುವುದು ಅರ್ಜೆಂಟೀನಾ ಹಿತಾಸಕ್ತಿಗೆ ವಿರುದ್ದವಾಗಿದೆ ಎಂದು ಆ ದೇಶದ ಖಾಸಗಿ ಪ್ರತಿನಿಧಿಗಳು ಹೇಳಿದ್ದಾರೆ.

ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ಅರ್ಜೆಂಟೀನಾ ತಮ್ಮ ನಿಯೋಗವನ್ನು ವಾಪಸ್ ಕರೆಸಿಕೊಂಡರೆ, ಫ್ರಾನ್ಸ್ ಇಂಧನ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್ ಅವರು ಬಾಕು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ವಾರ, ಅಂದರೆ ನವೆಂಬರ್ 20ರಂದು ತಮ್ಮ ನಿಯೋಗದ ಜೊತೆ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವೆ ಆಗ್ನೆಸ್ ಪನ್ನಿಯರ್-ರುನಾಚೆರ್, ಅಝರ್‌ಬೈಜಾನ್ ಫ್ರಾನ್ಸ್ ಮತ್ತು ಯುರೋಪ್‌ ಕುರಿತು ಮಾಡಿರುವ ಟೀಕೆ ಸ್ವೀಕಾರ್ಹವಲ್ಲ ಎಂದಿದ್ದಾರೆ.

“ನಮ್ಮ ದೇಶ, ಅದರ ಸಂಸ್ಥೆಗಳು ಮತ್ತು ಅದರ ಪ್ರಾಂತ್ಯಗಳ ವಿರುದ್ಧ ನೇರ ದಾಳಿಗಳು ಸಮರ್ಥನೀಯವಲ್ಲ” ಎಂದು ಪನ್ನಿಯರ್-ರುನಾಚೆರ್ ಹೇಳಿದ್ದಾರೆ.

ಗಮನಾರ್ಹವಾಗಿ 2015ರಲ್ಲಿ COP21ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಫ್ರಾನ್ಸ್ ಅಧ್ಯಕ್ಷರು ಶೃಂಗಸಭೆಯಲ್ಲಿ ಪಾಲ್ಗೊಂಡಿಲ್ಲ.

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29)5ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ : COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...