HomeಮುಖಪುಟCOP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

COP29 Azerbaijan : ಪಳೆಯುಳಿಕೆ ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ನಡೆಯುತ್ತಿದೆ. ನವೆಂಬರ್ 11ರಂದು ಪ್ರಾರಂಭಗೊಂಡಿರುವ ಈ ಸಭೆ, 22ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಟ್ರಂಪ್ ಆಯ್ಕೆಯ ಕಾರ್ಮೋಡ

ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಎರಡನೇ ಬಾರಿಗೆ ಹೇಳಿರುವ ಡೊನಾಲ್ಡ್ ಟ್ರಂಪ್ ಅವರು, ಹವಾಮಾನ ಶೃಂಗ ಸಭೆಯ ಸಮಯದಲ್ಲೇ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಾಗತಿಕ ಶೃಂಗಸಭೆಯನ್ನು ಮಬ್ಬಾಗಿಸಿದೆ.

ಟ್ರಂಪ್ ಪ್ಯಾರಿಸ್‌ ಒಪ್ಪಂದಿಂದ ಹೊರ ಬರುವ ಮೂಲಕ ಇಂಗಾಲದ ಡೈ ಆಕ್ಸೈಟ್ ಹೊರ ಸೂಸುವಿಕೆ ತಡೆಯುವ ನಿಯಂತ್ರಣ ಕ್ರಮಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

29ನೇ ಶೃಂಗಸಭೆ ನಡೆಯುವಾಗ ಜಾಗತಿಕ ತಾಪಮಾನ ನಿಯಂತ್ರಣದ ವಿಷಯದಲ್ಲಿ ಯಾವುದೇ ರಾಷ್ಟ್ರ ತಾರ್ಕಿಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂಬುವುದು ಮತ್ತೊಂದು ವಿಷಾದದ ವಿಷಯ. ಪ್ರಪಂಚದಾದ್ಯಂತ ಹಸಿರು ಶಕ್ತಿ ಮತ್ತು ಹವಾಮಾನ ಬದಲಾವಣೆ ತಗ್ಗಿಸುವ ಕಾರ್ಯಕ್ರಮಗಳನ್ನು ಹೇಗೆ ರೂಪಿಸಬಹುದು? ಎಂಬ ವಿಚಾರದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳು ಒಂದರ್ಥದಲ್ಲಿ ವಿಫಲವಾಗಿವೆ.

ಇಂಧನ ಅರ್ಥಿಕತೆಯ ರಾಷ್ಟ್ರದಲ್ಲಿ ಹವಾಮಾನ ಶೃಂಗಸಭೆ

ಅಝರ್ ಬೈಜಾನ್‌ನಂತಹ ಪಳೆಯುಳಿಕೆ ಇಂಧನ ಆರ್ಥಿಕತೆಯನ್ನು ಆಧರಿಸಿದ ದೇಶದಲ್ಲಿ ಶೃಂಗಸಭೆಯನ್ನು ಆಯೋಜಿಸಿದ ನಿರ್ಧಾರವನ್ನು ಗ್ರೇಟಾ ಥನ್‌ಬರ್ಗ್ ಸೇರಿದಂತೆ ಜಾಗತಿಕ ಹವಾಮಾನ ಕಾರ್ಯಕರ್ತರು ಟೀಕಿಸಿದ್ದಾರೆ. ಇತ್ತೀಚಿನ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಈ ಬಾರಿಯ ಶೃಂಗ ಸಭೆಯನ್ನು ‘ಗ್ರೀನ್‌ವಾಶ್ ಸಮ್ಮೇಳನ’ ಎಂದು ಗ್ರೇಟಾ ಲೇವಡಿ ಮಾಡಿದ್ದಾರೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕಳೆದ ವರ್ಷ ದುಬೈನಲ್ಲಿ 28ನೇ ಶೃಂಗಸಭೆ ಆಯೋಜಿಸಿದ್ದಾಗಲೂ ಹವಾಮಾನ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಅಲ್ಲದೆ, ಕಳೆದ ವರ್ಷದ ಶೃಂಗಸಭೆಯ ಉಸ್ತುವಾರಿಯನ್ನು ಯುಎಇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್ ವಹಿಸಿದ್ದರು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ 198 ಸದಸ್ಯ ರಾಷ್ಟ್ರಗಳು ಸೇರಿದಂತೆ 32,000ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP29)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

2021ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಯುಎನ್ ಹವಾಮಾನ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿದೆ.

ಈ ಬಾರಿಯ ಶೃಂಗಸಭೆಯ ಅಜೆಂಡಾವೇನು?

ಈ ಬಾರಿಯ ಹವಾಮಾನ ಶೃಂಗಸಭೆಯನ್ನು ‘finance COP’ ಎಂದು ಗುರುತಿಸಲಾಗಿದೆ. ಏಕೆಂದರೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕಡಿಮೆ-ಆದಾಯದ ದೇಶಗಳನ್ನು ಬೆಂಬಲಿಸಲು ಹಣಕಾಸು ನೆರವು ನೀಡುವ ಉದ್ದೇಶವನ್ನು ಪ್ರಮುಖವಾಗಿ ಹೊಂದಲಾಗಿದೆ.

ವಿಶ್ವವು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯಬೇಕಾದರೆ 2030ರ ವೇಳೆಗೆ ಚೀನಾವನ್ನು ಹೊರತುಪಡಿಸಿ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ $ 2 ಟ್ರಿಲಿಯನ್‌ಗಿಂತ ಹೆಚ್ಚಿನ ಹೂಡಿಕೆಯ ಅಗತ್ಯವಿದೆ ಎಂದು ಯುಎನ್‌ ಬೆಂಬಲಿತ ವರದಿಗಳು ಹೇಳಿವೆ.

ಇದನ್ನೂ ಓದಿ : ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...