Homeಮುಖಪುಟಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ - ಕಡ್ಡಾಯ ರಜೆ ಶಿಕ್ಷೆ

ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ಡಿವೈಎಸ್‌ಪಿ ಸೇರಿ ಮೂರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ..

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಮದುವೆಗೆ ಅದೇ ತಾಲೂಕು ಹಾಗೂ ಪ್ರದೇಶದ ವ್ಯಾಪ್ತಿಗೆ ಸೇರಿರುವ ಪೊಲೀಸ್‌ ಅಧಿಕಾರಿಗಳು ಹಾಜರಾಗಿದ್ದಾರೆ. ಆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಅಂದು ಬಿಜೆಪಿ ಪಕ್ಷ ಸಹ ಕೊಪ್ಪಳದಲ್ಲಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಅಂದಿನ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪನವರು ಜಿಲ್ಲೆಗೆ ಆಗಮಿಸಿ ಆರೋಪಿ ಹನುಮೇಶ ನಾಯಕ ಮತ್ತು ಮಹಾಂತೇಶ್ ನಾಯಕ್ ಬಂಧನಕ್ಕೆ ಒತ್ತಾಯಿಸಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತಲ್ಲದೇ ಸಚಿವ ಶಿವರಾಜ ತಂಗಡಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಇಷ್ಟೆಲ್ಲಾ ಪ್ರತಿಭಟನೆ-ಆಕ್ರೋಶಕ್ಕೆ ಕಾರಣವಾದ ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹಾಂತೇಶ್ ನಾಯಕ್ ಮದುವೆಗೆ ಅದೇ ವ್ಯಾಪ್ತಿಯ ಪೊಲೀಸರು ಭಾಗವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಗಂಗಾವತಿಯ ಡಿವೈಎಸ್‌ಪಿ ರುದ್ರೇಶ್ ಉಜ್ಜನಕೊಪ್ಪ, ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್‌ಐ ತಾರಾಬಾಯಿಯವರನ್ನು ಕಡ್ಡಾಯ ರಜೆ ಶಿಕ್ಷೆ ನೀಡಿ ಕಳಿಸಲಾಗಿದೆ ಎಂದು ಎಸ್‌ಪಿ ಟಿ.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಹುಲಿಹೈದರ್ ಚಲೋ ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳರವರು ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “ಯಲ್ಲಾಲಿಂಗನ ಕೊಲೆ ಪ್ರಕರಣ ಇನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಅದರ ಆರೋಪಿಗಳ ಮದುವೆಯಲ್ಲಿ ತನಿಖೆ ನಡೆಸಬೇಕಾದ ಪೊಲೀಸ್ ಅಧಿಕಾರಿಗಳು ಹೇಗೆ ಭಾಗವಹಿಸಲು ಸಾಧ್ಯ? ಇದು ಯಾವ ಸಂದೇಶ ನೀಡುತ್ತದೆ? ಇದು ನಾಳೆದಿನ ಪ್ರಕರಣದ ಮೇಲೆ ಪ್ರಭಾವ ಬೀರುವುದಿಲ್ಲವೇ? ಈ ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಾನೂನು ಮೀರಿ ವರ್ತಿಸಿದ್ದಾರೆ. ನಾಳೆ ಈ ಪ್ರಕರಣದಲ್ಲಿ ದುರ್ಬಲಗೊಂಡಲ್ಲಿ ಅದಕ್ಕೆ ಈ ಪೊಲೀಸ್ ಅಧಿಕಾರಿಗಳೇ ನೇರ ಕಾರಣರಾಗಿತ್ತಾರೆ. ಹಾಗಾಗಿ ಆ ಪೊಲೀಸ್ ಅಧಿಕಾರಗಳ ಮೇಲೆ ಇನ್ನು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ಇದು ತೀರಾ ಅವಮಾನಕಾರಿ ಮತ್ತು ನಾಚಿಕೆಗೇಡಿನ ನಡವಳಿಕೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕವಾಗಿ ಇದಕ್ಕಿಂತ ಕೀಳುದರ್ಜೆಗೆ ಇಳಿಯಲು ಸಾಧ್ಯವೇ? ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿತರ ಖಾಸಗಿ ಸಮಾರಂಭಗಳಿಗೆ ಪೊಲೀಸರು ಸಮವಸ್ತ್ರದಲ್ಲಿ ಹಾಜರಾಗಿ ಹಾರ ಹಾಕಿಸಿಕೊಂಡು ಗೌರವ ಕೊಟ್ಟು/ಸ್ವೀಕರಿಸಿ ಬರಲು ಪೊಲೀಸ್ ನಡಾವಳಿ ನಿಯಮಗಳಲ್ಲಿ ಅವಕಾಶ ಇದೆಯೇ? ಪೊಲೀಸರ ಈ ನಿರ್ಲಜ್ಜ ನಡವಳಿಕೆಯನ್ನು KRS ಪಕ್ಷ ಖಂಡಿಸುತ್ತದೆ. ಈ ಕುರಿತು ದೂರು ನೀಡುತ್ತೇವೆ” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣರೆಡ್ಡಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳುಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರ, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...