Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...