Homeಕರೋನಾ ತಲ್ಲಣಕೊರೊನಾ ನೆಪ: 10ಸಾವಿರ ಕೋಟಿ ಹಗರಣ- ಎಎಪಿಯ ಪೃಥ್ವಿ ರೆಡ್ಡಿ ಆರೋಪ

ಕೊರೊನಾ ನೆಪ: 10ಸಾವಿರ ಕೋಟಿ ಹಗರಣ- ಎಎಪಿಯ ಪೃಥ್ವಿ ರೆಡ್ಡಿ ಆರೋಪ

ಕೊರೊನಾ ಸೋಂಕಿತರು ಆಸ್ಪತ್ರೆಗಳನ್ನು ಬಿಟ್ಟು ಮನೆಯಲ್ಲೇ ಹೋಮ್ ಐಸೋಲೇಷನ್ ಆಗುವವರಿಗೆ ಕಿಟ್ ನೀಡಲಾಗುವುದು ಎಂದು ಹೇಳಿದ್ದ ಸರ್ಕಾರ ಯಾವುದೇ ಕಿಟ್ ನೀಡಿಲ್ಲ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸುಮಾರು 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.

ಕೊರೊನಾ ಸೋಂಕಿತರು ಆಸ್ಪತ್ರೆಗಳನ್ನು ಬಿಟ್ಟು ಮನೆಯಲ್ಲೇ ಹೋಮ್ ಐಸೋಲೇಷನ್ ಆಗುವವರಿಗೆ ಕಿಟ್ ನೀಡಲಾಗುವುದು ಎಂದು ಹೇಳಿದ್ದ ಸರ್ಕಾರ ಯಾವುದೇ ಕಿಟ್ ನೀಡಿಲ್ಲ. ಆದರೆ ಕಿಟ್ ನೀಡಲಾಗಿದೆ ಎಂದು ಸುಮಾರು 150 ಕೋಟಿ ರೂಪಾಯಿ ಹಣ ದೋಚಲಾಗಿದೆ ಎಂದು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಲ್ ಸೆಂಟರ್‌ಗಳ ಮೂಲಕ ಸೋಂಕಿತರಿಗೆ ಕರೆ ಮಾಡಲು ಸರ್ಕಾರವೇ ತಿಳಿಸಿರುವಂತೆ 69 ರೂಪಾಯಿಗಳನ್ನು ನೀಡಲಾಗುತ್ತಿದೆ. ಸುಮ್ಮನೆ ಅಂದಾಜು ಲೆಕ್ಕ ಹಾಕಿದರೂ 8 ಲಕ್ಷ ಜನರಿಗೆ 5 ಬಾರಿ ಕರೆ ಮಾಡಲು ನೂರಾರು ಕೋಟಿ ವ್ಯಯಿಸಲಾಗಿದೆ. ಹೆಚ್ಚುವರಿಯಾಗಿ 50 ರೂಪಾಯಿ ನೀಡಿ ಹಣ ದೋಚಲಾಗಿದೆ ಎಂದು ಹೇಳಿದರು.

ದೀಪಾವಳಿ ಮತ್ತು ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಕೊಡುಗೆ ನೀಡುತ್ತಿದ್ದು ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ರಾಜ್ಯವನ್ನು 3 ನೇ ಸ್ಥಾನದಿಂದ 2 ನೇ ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲೂ ದೆಹಲಿ ಮಾದರಿಯನ್ನು ಅನುಸರಿಸಿ ಎಂದು ಸ್ವತಃ ಪ್ರಧಾನ ಮಂತ್ರಿಗಳೇ ಹೇಳಿದ್ದರೂ ನಮ್ಮ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿತು. ವೈಯಕ್ತಿಕವಾಗಿ ನಾನೇ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳಿಗೆ ಕರೆ ಮಾಡಿ, ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದರು ಸ್ಪಂದಿಸಲಿಲ್ಲ ಎಂದು ದೂರಿದರು.

ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಾಧ್ಯಮ ಸಂಚಾಲಕ ಜಗದೀಶ್, ಮುಖ್ಯ ವಕ್ತಾರ ಶರತ್ ಖಾದ್ರಿ ಉಪಸ್ಥಿತರಿದ್ದರು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...