Homeಕರೋನಾ ತಲ್ಲಣಕೊರೊನಾ - ಕೇರಳ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ!

ಕೊರೊನಾ – ಕೇರಳ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ!

- Advertisement -
- Advertisement -

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸೋಮವಾರದಿಂದ ನೆರೆಯ ರಾಜ್ಯವನ್ನು ಜಿಲ್ಲೆಯೊಂದಿಗೆ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿದೆ.

ಜಿಲ್ಲೆಯನ್ನು ಕೇರಳದೊಂದಿಗೆ ಸಂಪರ್ಕಿಸುವ 14 ರಸ್ತೆಗಳಿದ್ದು, ಅವುಗಳಲ್ಲಿ ತಲಪಾಡಿ (ಮಂಗಳೂರು ತಾಲ್ಲೂಕು), ಸಾರಡ್ಕ (ಬಂಟ್ವಾಳ), ಮೆನಾಲಾ (ಪುತ್ತೂರು), ನೆಟ್ಟನಿಗೆ ಮುಡ್ನೂರು (ಪುತ್ತೂರು) ಮತ್ತು ಜಾಲ್ಸೂರ್ (ಸುಳ್ಯ) ರಸ್ತೆಗಳನ್ನು ಮಾತ್ರ ಮುಕ್ತವಾಗಿ ಇಡಲಾಗುವುದು.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್‌ ಚಂದ್ರ ಗುರು

ಬಂಟ್ವಾಳ ತಾಲೂಕಿನ ಅಂತರಾಜ್ಯ ಗಡಿ ಪಾತೂರ್‌ ಮೂಲಕ ಮುಡಿಪು ಮತ್ತು ಸಾಲೆತ್ತೂರ್‌ ನಡುವೆ ಪ್ರಯಾಣಿಸುವ ಜನರು ಈಗ ಮಂಚಿ-ಇರಾ ಮೂಲಕ ಆರು ಕಿಲೋಮೀಟರ್ ದೂರ ಹೆಚ್ಚು ಪ್ರಯಾಣಿಸಬೇಕಾಗತ್ತದೆ. ಗಡಿ ಜಿಲ್ಲೆಗಳ ನಡುವೆ ಜನರ ಸಂಚಾರ ಬಹಳ ಹೆಚ್ಚಿರುವುದರಿಂದ ಕೇರಳದ ಹೆಚ್ಚಿನ ಗಡಿಗಳನ್ನು ಮುಚ್ಚುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌‌‌ಪ್ರೆಸ್ ವರದಿ ಮಾಡಿದೆ.

“ಇದು ಜನನಿಬಿಡ ಗಡಿಯಾಗಿದ್ದು, ಜಿಲ್ಲೆಗಳ ನಡುವೆ ಪ್ರತಿದಿನ 2 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಕೊರೊನಾ ನೆಗೆಟಿವ್‌‌‌ ವರದಿಯನ್ನು ಹದಿನೈದು ದಿನಕ್ಕೊಮ್ಮೆ ದೈನಂದಿನ ಪ್ರಯಾಣಿಕರಿಗೆ ಕಡ್ಡಾಯಗೊಳಿಸಲಾಗಿದ್ದರೂ, ಪ್ರವೇಶ ಗಡಿಗಳನ್ನು ತೆರೆದಿದ್ದರೆ ಇದನ್ನು ಕಾರ್ಯಗತಗೊಳಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ, ಕೆಲವು ಗಡಿ ಕೇಂದ್ರಗಳನ್ನು ಮುಚ್ಚಲೇಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಜಿಲ್ಲಾಡಳಿತದ ನಿರ್ಧಾರವು ಸಾವಿರಾರು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ನಡುವೆ ಪ್ರತಿದಿನ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಇದು ತೊಂದರೆಯನ್ನುಂಟು ಮಾಡುತ್ತದೆ.

ಇದನ್ನೂ ಓದಿ: ಪಂಜಾಬ್: ರೈತರ ಮಹಾರ್‍ಯಾಲಿಯಲ್ಲಿ ಮಿಂದೆದ್ದ ಬರ್ನಾಲಾ ಜಿಲ್ಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...