Homeಮುಖಪುಟಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ಬಿಜೆಪಿ ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳ ಜನರ ಮನವೊಲಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋದೊಂದಿಗೆ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪೂರ್ಣಪುಟದ ಜಾಹೀರಾತುಗಳಿಗಾಗಿ ಹಣ ವ್ಯಯಿಸಿದ್ದಾರೆ.

ದಿ ಹಿಂದೂ, ಎಕನಾಮಿಕ್ ಟೈಮ್ಸ್ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನಲ್ಲಿ ನೀಡಲಾಗಿರುವ ಜಾಹೀರಾತುಗಳಲ್ಲಿ ತಮ್ಮ ರಾಜ್ಯದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ತಾವು  ಕೈಗೊಂಡ ಪ್ರಯತ್ನಗಳ ಬಗ್ಗೆ ತಮ್ಮನ್ನು ತಾವೇ ಶ್ಲಾಘಿಸಿಕೊಂಡಿವೆ. ಜೊತೆಗೆ ಇದು ಅನೇಕರು ಹೆಮ್ಮೆ ಪಡುವಂತದ್ದು ಎಂದು ಜಾಹೀರಾತಿನಲ್ಲಿ ಹೇಳಿಕೊಂಡಿವೆ.

ಕರ್ನಾಟಕ ಸರ್ಕಾರ ದಿ ಹಿಂದೂ ಪತ್ರಿಕೆಯ 3ನೇ ಪುಟದಲ್ಲಿ ಜಾಹೀರಾತನ್ನು ನೀಡಿದೆ. ಅದು “ಚೇತರಿಕೆ ಹಾದಿಯಲ್ಲಿ ಕರ್ನಾಟಕ” ಎಂಬ ಶೀರ್ಷಿಕೆಯಲ್ಲಿ ‘ಐದು ಸ್ಟೋರಿ’ಗಳನ್ನು ನೀಡಿದೆ. ಅವುಗಳಲ್ಲಿರುವ ಆರು ಚಿತ್ರಗಳ ಪೈಕಿ ಐದರಲ್ಲಿ ಯಡಿಯೂರಪ್ಪ ಕಾಣಿಸಿಕೊಳ್ಳುತ್ತಾರೆ. ಜಾಹೀರಾತಿನ ಒಂದು ಸ್ಟೋರಿಯಲ್ಲಿ “ಕರ್ನಾಟಕದ ನೂರಾರು ಕಾರ್ಮಿಕರಿಗೆ ಸಿಎಂ ಜೊತೆ ಮುಖಾಮುಖಿಯಾಗಿ ಚರ್ಚಿಸಲು ಹೇಗೆ ಅವಕಾಶ ಸಿಕ್ಕಿದೆ” ಎಂದು ವಿವರಿಸಿದೆ. ಇದು ಕೋವಿಡ್‌ ವಿರುದ್ದದ ಹೋರಾಟದಲ್ಲಿ ಕಾರ್ಮಿಕರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಂಗಳೂರು ಆವೃತ್ತಿಯ 3ನೇ ಪುಟದಲ್ಲಿ “ಕರ್ನಾಟಕದ ಭರವಸೆಯ ಪ್ಯಾಕೇಜ್‌ಗಳು” ಮತ್ತು ಅದರ ಹುಬ್ಬಳ್ಳಿ ಆವೃತ್ತಿಯ 12ನೇ ಪುಟದಲ್ಲಿ “ಕೊರೊನಾ ಅಲೆಗಳನ್ನು ಗೆಲ್ಲುವುದು” ಕುರಿತು ಪೂರ್ಣ ಪುಟದ ಜಾಹೀರಾತನ್ನು ಪ್ರಕಟಿಸಿದೆ. ಅಮೆರಿಕನ್ ಕಾದಂಬರಿಕಾರ ಲೂಯಿಸ್ ಎಲ್’ಮೊರ್ ಅವರನ್ನು ಉಲ್ಲೇಖಿಸಿರುವ, ಯಡಿಯೂರಪ್ಪ ಸರ್ಕಾರವು ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡುತ್ತಿದೆ, ಕತ್ತಲೆಯಲ್ಲಿ ಬೆಳಕನ್ನು ಕಾಣುವಂತೆ ಮಾಡುವ ಭರವಸೆ ಇದೆ ಎಂದು ಜಾಹೀರಾತಿನಲ್ಲಿ ಹೇಳಿದೆ.

ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ “ಯಶಸ್ವಿಯಾಗಿದ್ದಾರೆ” ಎಂಬ ಕಥೆಗಳೊಂದಿಗೆ ಕರ್ನಾಟಕ ಸರ್ಕಾರ ಗುರುವಾರ ಡೆಕ್ಕನ್ ಹೆರಾಲ್ಡ್‌ನಲ್ಲಿ ಇದೇ ರೀತಿಯ ಜಾಹೀರಾತು ನೀಡಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಜಾಹೀರಾತುಗಳ ಮೂಲಕ ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ಸಹೋದರಿ ಪತ್ರಿಕೆ ಎಕನಾಮಿಕ್ ಟೈಮ್ಸ್‌ನ ಮೊದಲ ಎರಡು ಪುಟಗಳಲ್ಲಿ ರಾಜ್ಯ ಸರ್ಕಾರಗ ಕೊರೊನಾ ನಿರ್ವಹಿಸಿದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸಿದೆ.

ಮೊದಲ ಪುಟದಲ್ಲಿ ಕೋವಿಡ್‌ ಸೋಲಿಸಲು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿಕೊಳ್ಳುವ “ಐದು-ಹಂತದ ಯೋಜನೆ”ಗಳ ಜೊತೆಗೆ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿದೆ. ಪ್ರಧಾನಿ ಮೋದಿಗೆ ದೊರೆತ ಪ್ರತಿಯೊಂದು ಅವಕಾಶವನ್ನೂ ಬಿಜೆಪಿ ಪಕ್ಷವು ಶ್ಲಾಘಿಸುವುದು ರೂಡಿಯಾಗಿರುವುದರಿಂದ,  “ಉಚಿತ ಲಸಿಕೆಗಳನ್ನು” ನೀಡಿದ್ದಕ್ಕಾಗಿ ಮೋದಿಯವರ ಸಹಾಯಕ್ಕೆ ಪ್ರತಿಯಾಗಿ ಆದಿತ್ಯನಾಥ್ ಅವರು ಜಾಹೀರಾತಿನ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಇನ್ನು ಎರಡನೇ ಪುಟವು ಸುದ್ದಿಯ ರೂಪದ ಜಾಹೀರಾತನ್ನು ಹೊಂದಿದೆ. ಈ ಪುಟದ ಕೆಳಭಾಗದಲ್ಲಿ ಕಾಣಸಿಗುವ ಒಂದು ಸಣ್ಣ “ಗ್ರಾಹಕ ಸಂಪರ್ಕ”ದ ಲೇಬಲ್ ಮಾತ್ರ ಇದು ಜಾಹೀರಾತು ಎಂದು ಸೂಚಿಸುತ್ತದೆ. ಜಾಹೀರಾತುದಾರರು ಪತ್ರಿಕೆಯ ಟೈಟಲ್‌ಹೆಡ್‌ನ ಬದಲಿಗೆ “ಕೊರೊನಾ ವಿರುದ್ಧ ಯುಪಿ ಹೋರಾಟ” ಎಂದು ಬರೆಸಿದ್ದಾರೆ. ಅದರಡಿಯಲ್ಲಿ ಯೋಗಿ ಸರ್ಕಾರದ ಬಹುಸಂಖ್ಯೆಯ ಕಾರ್ಯತಂತ್ರವು ಫಲಿತಾಂಶಗಳನ್ನು ವಿವರಿಸಿದೆ. ಕೊರೊನಾ ಎರಡನೇ ಅಲೆಯಲ್ಲಿ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಜಾಹೀರಾತಿನ ಮುಖ್ಯ ಸ್ಟೋರಿಯಲ್ಲಿ “ರಾಜ್ಯದ ಸಾಂಕ್ರಾಮಿಕ ನಿಯಂತ್ರಣ ಒಂದು ಮಾದರಿ” ಎಂದು ಬರೆದುಕೊಂಡಿದೆ.

“ಉತ್ತರ ಪ್ರದೇಶವು ಎಲ್ಲಾ ರೀತಿಯಲ್ಲಿಯೂ ಸರಿಯಾದ ಕಾರಣಗಳಿಗಾಗಿ ಸುದ್ದಿಯಲ್ಲಿದೆ” ಎಂದು ಜಾಹೀರಾತಿನ ಪ್ರಮುಖ “ಸ್ಟೋರಿ” ಆರಂಭವಾಗುತ್ತದೆ. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.

ಕೃಪೆ: ನ್ಯೂಸ್‌ ಲ್ಯಾಂಡ್ರಿ


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...